B C Nagesh: ನಾಡಗೀತೆಗೆ ಅಪಮಾನ; ನಿರ್ಮಲಾನಂದನಾಥ ಸ್ವಾಮೀಜಿ ಪತ್ರ, ಆದಿಚುಂಚನಗಿರಿ ಮಠಕ್ಕೆ ಸಚಿವ ಬಿ ಸಿ ನಾಗೇಶ್ ದೌಡು

ಕುವೆಂಪು ಮತ್ತು ನಾಡಗೀತೆಯನ್ನು ನಿಂದಿಸಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ನಿರ್ಮಲಾನಂದನಾಥ ಸ್ವಾಮೀಜಿಯೂ ಒತ್ತಾಯಿಸಿದ್ದರು. ಈ ಹಿನ್ನೆಲೆ ಇಂದು ಸಚಿವ ಬಿ.ಸಿ ನಾಗೇಶ್​ ಅವ್ರು ನಿರ್ಮಲಾನಂದನಾಥ ಸ್ವಾಮೀಜಿಯನ್ನು ಭೇಟಿ ಮಾಡಿ ಈ ಬಗ್ಗೆ ವಿವರಣೆ ನೀಡಿದ್ದಾರೆ.

ನಿರ್ಮಲಾನಂದನಾಥ ಸ್ವಾಮೀಜಿ, ಬಿ ಸಿ ನಾಗೇಶ್​

ನಿರ್ಮಲಾನಂದನಾಥ ಸ್ವಾಮೀಜಿ, ಬಿ ಸಿ ನಾಗೇಶ್​

  • Share this:
ಬೆಂಗಳೂರು (ಮೇ 30):  ಕುವೆಂಪು (Kuvempu) ರಚಿತ ನಾಡಗೀತೆಯನ್ನು ತಿರುಚಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆದಿಚುಂಚನಗಿರಿ ಮಠದ (Adichunchanagiri Mutt ) ನಿರ್ಮಲಾನಂದನಾಥ ಸ್ವಾಮೀಜಿ (Nirmalanandanatha Swamiji) ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಪತ್ರ ಬರೆಯುತ್ತಿದ್ದಂತೆ ಇತ್ತ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ (B.C Nagesh) ಅವರು ಆದಿಚುಂಚನಗಿರಿ ಮಠಕ್ಕೆ ದೌಡಾಯಿಸಿದ್ದಾರೆ.  ಸಿಎಂ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಸಚಿವ ಬಿ ಸಿ ನಾಗೇಶ್​  ಅವ್ರು  ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು  ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ

ಸಿಎಂ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಭೇಟಿ

ರೋಹಿತ್ ಚಕ್ರತೀರ್ಥ ವಜಾಗೊಳಿಸುವ ಕುರಿತು ನಿರ್ಮಲಾನಂದನಾಥ ಸ್ವಾಮೀಜಿ ಇರಿಸಿಸದ್ದ ಬೇಡಿಕೆ ಕುರಿತು ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದರ ಬೆನ್ನಲ್ಲೇ ಸಚಿವ ಬಿ ಸಿ ನಾಗೇಶ್ ಅವರು ಮಠಕ್ಕೆ ದೌಡಾಯಿಸಿರುವುದು ಕುತೂಹಲ ಮೂಡಿಸಿದೆ.

ಪಠ್ಯ ಪರಿಷ್ಕರಣೆ ಬಗ್ಗೆ ಸಚಿವರ ಸಮರ್ಥನೆ

ಚಕ್ರತೀರ್ಥ ನೇತೃತ್ವದ ಸಮಿತಿ ಪರಿಷ್ಕರಿಸಿರುವ ಅಂಶಗಳ ಕುರಿತು ನಿರ್ಮಲಾನಂದನಾಥ ಸ್ವಾಮೀಜಿ ಅವರ ಗಮನಕ್ಕೆ ತಂದು ಸಮರ್ಥನೆ ಮಾಡಿಕೊಂಡಿದ್ದಾರೆ ಎಂದು ಸಚಿವರ ಕಚೇರಿ ಮೂಲಗಳು ತಿಳಿಸಿವೆ.

ಸೂಕ್ತ ನಿರ್ಧಾರದ ಭರವಸೆ ಕೊಟ್ಟಿದ್ದ ಸಿಎಂ

ನಿರ್ಮಲಾನಂದನಾಥ ಶ್ರೀಗಳು ಕುವೆಂಪು ಅವರಿಗೆ ಸಂಬಂಧಿಸಿದಂತೆ ಗಂಭೀರವಾದ ವಿಚಾರವನ್ನು ಮುಂದಿಟ್ಟಿದ್ದಾರೆ. ಆ ಕುರಿತು ಶಿಕ್ಷಣ ಸಚಿವರ ಜತೆ ಸಭೆ ನಡೆಸುತ್ತೇನೆ. ಚರ್ಚೆಗೆ ಬರುವಂತೆ ಸಚಿವರಿಗೆ ಈಗಾಗಲೇ ಸೂಚಿಸಿದ್ದೇನೆ. ಚರ್ಚಿಸಿದ ಬಳಿಕ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Hijab Row: ಹಿಜಾಬ್ ಧರಿಸಲು ಅನುಮತಿ ಕೋರಿ ಡಿಸಿ ಕಚೇರಿ ಮೆಟ್ಟಿಲೇರಿದ ವಿದ್ಯಾರ್ಥಿನಿಯರು

ನಾಡಗೀತೆ ನಿಂದಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹ

ರಾಜ್ಯ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷರಾಗಿರುವ ರೋಹಿತ್ ಚಕ್ರತೀರ್ಥ ಅವರು ನಾಡಗೀತೆ ಮತ್ತು ಕುವೆಂಪು ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರಹವೊಂದನ್ನು ಪ್ರಕಟಿಸಿದ್ದರು. ಚಕ್ರತೀರ್ಥ ಅವರು ಕುವೆಂಪು ಮತ್ತು ನಾಡಗೀತೆಯನ್ನು ಅವಮಾನಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಲವರು ಆಗ್ರಹಿಸಿದ್ದರು. ಕುವೆಂಪು ಮತ್ತು ನಾಡಗೀತೆಯನ್ನು ನಿಂದಿಸಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ನಿರ್ಮಲಾನಂದನಾಥ ಸ್ವಾಮೀಜಿಯೂ ಒತ್ತಾಯಿಸಿದ್ದರು.

ಜಿ ಎಸ್ ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಎಸ್ ಜಿ ಸಿದ್ಧರಾಮಯ್ಯ ರಾಜೀನಾಮೆ

ಕೋಮು ದ್ವೇಷವನ್ನು ರಾಜಾರೋಷವಾಗಿ ಹರಡುತ್ತಾ ಆಟಾಟೋಪ ಮಾಡುವವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ‘ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಪ್ರತಿಷ್ಠಾನ’ದ ಅಧ್ಯಕ್ಷ ಸ್ಥಾನಕ್ಕೆ ಎಸ್.ಜಿ. ಸಿದ್ದರಾಮಯ್ಯ ಸೋಮವಾರ ರಾಜೀನಾಮೆ  ನೀಡಿದ್ದಾರೆ. ಜತೆಗೆ ಸದಸ್ಯರಾದ ಹೆಚ್.ಎಸ್. ರಾಘವೇಂದ್ರ ರಾವ್, ನಟರಾಜ ಬೂದಾಳು, ಚಂದ್ರಶೇಖರ ನಂಗಲಿ ಸಹ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ  ಅವರು ಪತ್ರ ಬರೆದಿದ್ದಾರೆ.

ಅಸಾಂವಿಧಾನಿಕ ದಬ್ಬಾಳಿಕೆ ಕಂಡು ಆತಂಕ

‘ತಮಗೆ ಗೌರವ ಪೂರ್ವಕ ನಮಸ್ಕಾರಗಳು. ನಮ್ಮ ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಶಿಕ್ಷಣ, ಸಂಸ್ಕೃತಿ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳ ಮೇಲೆ ನಡೆಯುತ್ತಿರುವ ಅಸಾಂವಿಧಾನಿಕ ದಬ್ಬಾಳಿಕೆಗಳನ್ನು ಕಂಡು ಆತಂಕ, ಭಯ ಉಂಟಾಗಿದೆ. ಕೋಮು ದ್ವೇಷವನ್ನು ರಾಜಾರೋಷವಾಗಿ ಮಾತನಾಡುತ್ತಾ ಆಟಾಟೋಪ ಮೆರೆಯುತ್ತಾ ಪ್ರಜಾಪ್ರಭುತ್ವದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಉಂಟು ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೆ ಸರ್ಕಾರ ಮೌನವಹಿಸಿರುವುದು ಇನ್ನೂ ಹೆಚ್ಚಿನ ಆತಂಕ, ಭಯ ಉಂಟು ಮಾಡುತ್ತಿದೆ.

ಇದನ್ನೂ ಓದಿ: UPSC ಪರೀಕ್ಷೆಯಲ್ಲಿ ಕನ್ನಡಿಗರ ಸಾಧನೆ; ಇಲ್ಲಿದೆ ಕರ್ನಾಟಕದ ಟಾಪರ್ಸ್​ ಲಿಸ್ಟ್​

ಈ ಬೆಳವಣಿಗೆಗೆ ಬೇಸತ್ತು ರಾಜೀನಾಮೆ

ಈ ಎಲ್ಲಾ ಬೆಳವಣಿಗೆಗಳಿಂದ ಬೇಸತ್ತು ನಾವು ರಾಷ್ಟ್ರಕವಿ ಡಾ.ಜಿ.ಎಸ್. ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಸದಸ್ಯ ಸ್ಥಾನಗಳಿಗೆ ರಾಜೀನಾಮೆ ನೀಡುತ್ತಿದ್ದೇವೆ. ಮಾನ್ಯ ಮುಖ್ಯಮಂತ್ರಿಗಳು ನಮ್ಮ ರಾಜೀನಾಮೆ ಒಪ್ಪಿಕೊಂಡು ಈ ಕೂಡಲೇ ನಮ್ಮನ್ನು ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕೆಂದು ವಿನಂತಿಸುತ್ತೇವೆ’ ಎಂದು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಸಿದ್ದರಾಮಯ್ಯ ಮತ್ತು ಇತರರು ಉಲ್ಲೇಖಿಸಿದ್ದಾರೆ.
Published by:Pavana HS
First published: