ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಯೋಜನೆ; ಸುಪ್ರೀಂ ಕೋರ್ಟ್ ಆದೇಶಕ್ಕೆ ಬದ್ಧ ಎಂದ ಎಸ್​.ಆರ್​. ವಿಶ್ವನಾಥ್

ಬಡಾವಣೆಯಲ್ಲಿರುವ ಮನೆಗಳಲ್ಲಿ ಯಾವುದನ್ನು ಉಳಿಸಿಕೊಳ್ಳಬೇಕು, ಯಾವುದನ್ನು ಬಿಡಬೇಕು ಎಂಬುದರ ಬಗ್ಗೆ ಪರಿಶೀಲನೆ ನಡೆಸಿದ ನಂತರ ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ. ಈ ತೀರ್ಪಿಗೆ ಅನುಗುಣವಾಗಿ ಬಿಡಿಎ ಯೋಜನೆಯನ್ನು ಕೈಗೆತ್ತಿಕೊಳ್ಳಲಿದೆ ಎಂದು ಅವರು ತಿಳಿಸಿದರು.

ಎಸ್​.ಆರ್.ವಿಶ್ವನಾಥ್

ಎಸ್​.ಆರ್.ವಿಶ್ವನಾಥ್

  • Share this:
ಬೆಂಗಳೂರು(ಮಾ.18): ಸುಪ್ರೀಂಕೋರ್ಟ್ ನೀಡಿರುವ ಆದೇಶದನ್ವಯ ಉದ್ದೇಶಿತ ಡಾ.ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಸ್ಪಷ್ಟಪಡಿಸಿದ್ದಾರೆ. ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಮತ್ತು ಆಯುಕ್ತ ಡಾ.ಮಹದೇವ್ ಅವರೊಂದಿಗೆ ರಾಜ್ಯ ಸಂಘ ಮತ್ತು ಹಸಿರುಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮತ್ತು ಇತರೆ ರೈತ ಮುಖಂಡರ ಜತೆ ನಡೆಸಿದ ಸಮಾಲೋಚನೆ ಸಭೆಯಲ್ಲಿ ಈ ಸ್ಪಷ್ಟನೆ ನೀಡಿದರು.

ಕೋಡಿಹಳ್ಳಿ ಚಂದ್ರಶೇಖರ್ ಮತ್ತು ಇತರೆ ರೈತ ಮುಖಂಡರು ಮಾತನಾಡಿ, ಯೋಜನೆಯಿಂದ ರೈತರು ಮತ್ತು ಸ್ಥಳೀಯರಿಗೆ ಸಮಸ್ಯೆಗಳು ಎದುರಾಗುತ್ತವೆ.ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಯೋಜನೆಯನ್ನು ಕೈಬಿಡುವಂತೆ ಮನವಿ ಮಾಡಬೇಕೆಂದು ಮನವಿ ಮಾಡಿದರು.ಇದಕ್ಕೆ ಪ್ರತಿಕ್ರಿಯೆ ನೀಡಿದ ವಿಶ್ವನಾಥ್ ಅವರು, ಈಗಾಗಲೇ ಸುಪ್ರೀಂ ಕೋರ್ಟ್ ಯೋಜನೆಯನ್ನು ಯಾವುದೇ ಕಾರಣಕ್ಕೂ ಕೈಬಿಡಬಾರದು ಮತ್ತು ಉದ್ದೇಶಿತ ಬಡಾವಣೆಯಲ್ಲಿ 2018 ರ ಆಗಸ್ಟ್ ಗೆ ಮುನ್ನ ನಿರ್ಮಾಣವಾಗಿರುವ ಮನೆಗಳ ಸಮೀಕ್ಷೆ ನಡೆಸುವಂತೆ ಉನ್ನತಾಧಿಕಾರಿಗಳ ಸಮಿತಿಯನ್ನು ರಚನೆ ಮಾಡಿದೆ ಎಂದರು.

ಈ ಆದೇಶದ ಹಿನ್ನೆಲೆಯಲ್ಲಿ ಸಮಿತಿಯು ಕಳೆದ ಹಲವು ತಿಂಗಳಿಂದ ನಿರಂತರವಾಗಿ ಸಮೀಕ್ಷೆ ಕಾರ್ಯದಲ್ಲಿ ತೊಡಗಿದೆ. ಮುಂದಿನ ಕೆಲವು ತಿಂಗಳಲ್ಲಿ ಸುಪ್ರೀಂಕೋರ್ಟಿಗೆ ತನ್ನ ವರದಿಯನ್ನು ಸಲ್ಲಿಸಲಿದೆ. ಅದರ ಆಧಾರದಲ್ಲಿ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ನೀಡಲಿದೆ ಎಂದು ತಿಳಿಸಿದರು.ದಾಖಲೆ ನೀಡುವಂತೆ ಮನವಿಉದ್ದೇಶಿತ ಬಡಾವಣೆಯಲ್ಲಿ ನಿರ್ಮಾಣ ಮಾಡಿರುವ ಮನೆಗಳ ಬಗ್ಗೆ ಸಮಿತಿಯೇ ನಿರ್ಧಾರ ಕೈಗೊಂಡು ಸುಪ್ರೀಂಕೋರ್ಟಿಗೆ ತನ್ನ ವರದಿಯನ್ನು ಸಲ್ಲಿಸಲಿದೆ. ಈ ವಿಚಾರದಲ್ಲಿ ಬಿಡಿಎದ ಯಾವುದೇ ಹಸ್ತಕ್ಷೇಪ ಅಥವಾ ಪ್ರಭಾವ ಇರುವುದಿಲ್ಲ. ಈ ಹಿನ್ನೆಲೆಯಲ್ಲಿ ಬಡಾವಣೆ ವ್ಯಾಪ್ತಿಯ ಮೂರ್ನಾಲ್ಕು ಸ್ಥಳಗಳಲ್ಲಿ ಸಹಾಯಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಕೇಂದ್ರಗಳಿಗೆ ತೆರಳಿ ನಾಗರಿಕರು ತಮ್ಮ ಮನೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಬೇಕು ಎಂದು ವಿಶ್ವನಾಥ್ ಮನವಿ ಮಾಡಿದರು.

Crime News: ಚಿನ್ನಾಭರಣ ಕದ್ದು ಕಾರು ಕೊಂಡುಕೊಂಡ ಮಹಿಳೆಯ ಬಂಧನ

ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ಧ

ಬಡಾವಣೆಯಲ್ಲಿರುವ ಮನೆಗಳಲ್ಲಿ ಯಾವುದನ್ನು ಉಳಿಸಿಕೊಳ್ಳಬೇಕು, ಯಾವುದನ್ನು ಬಿಡಬೇಕು ಎಂಬುದರ ಬಗ್ಗೆ ಪರಿಶೀಲನೆ ನಡೆಸಿದ ನಂತರ ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ. ಈ ತೀರ್ಪಿಗೆ ಅನುಗುಣವಾಗಿ ಬಿಡಿಎ ಯೋಜನೆಯನ್ನು ಕೈಗೆತ್ತಿಕೊಳ್ಳಲಿದೆ ಎಂದು ಅವರು ತಿಳಿಸಿದರು.

ನಿವೇಶನ ಖರೀದಿ, ಮನೆ ನಿರ್ಮಾಣ ಬೇಡ ಸುಪ್ರೀಂಕೋರ್ಟ್ ಆದೇಶ ಇದ್ದಾಗ್ಯೂ, ಕೆಲವು ಡೆವಲಪರ್ ಗಳು ಅಮಾಯಕ ಸಾರ್ವಜನಿಕರಿಗೆ ನಿವೇಶನಗಳನ್ನು ಮಾರಾಟ ಮಾಡುತ್ತಿದ್ದಾರೆ. ಇನ್ನು ಕೆಲವರು ಮನೆ ನಿರ್ಮಾಣ ಮಾಡಿದರೆ ತಮ್ಮ ನಿವೇಶನ ಉಳಿಯುತ್ತದೆ ಎಂಬ ಭಾವನೆಯಿಂದ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ಆದರೆ, ಸುಪ್ರೀಂ ಕೋರ್ಟ್ ನೀಡಿರುವ ಕಾಲಮಿತಿಯನ್ನು ಹೊರತುಪಡಿಸಿ ನಿರ್ಮಾಣವಾಗುವ ಮನೆಗಳನ್ನು ಆದೇಶದಂತೆ ಬಿಡಿಎ ಬಡಾವಣೆ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಳ್ಳುವುದು ಅನಿವಾರ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಯಾರೂ ಸಹ ಮುಂದಿನ ಆದೇಶದವರೆಗೆ ಮನೆಗಳನ್ನು ನಿರ್ಮಾಣ ಮಾಡುವುದಾಗಲೀ ಅಥವಾ ನಿವೇಶನ ಖರೀದಿ ಮಾಡಬಾರದು ಎಂದು ವಿಶ್ವನಾಥ್ ಮನವಿ ಮಾಡಿದರು.

ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರೊಂದಿಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತರ ನಿಯೋಗದ ಸಮಾಲೋಚನಾ ಸಭೆ ನಡೆಯಿತು. ಈ ವೇಳೆ, ಬಿಡಿಎ ಆಯುಕ್ತ ಡಾ.ಮಹದೇವ್ ಮತ್ತು ಕಾರ್ಯದರ್ಶಿ ಡಾ.ವಾಸಂತಿ ಅಮರ್ ಮೊದಲಾದವರು ಇದ್ದರು.
Published by:Latha CG
First published: