HOME » NEWS » State » BE WARNED TO AVOID SUMMER DRINKING WATER THROUGHOUT SHIMOGA DISTRICT HRN HK

ಶಿವಮೊಗ್ಗ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ನೀರಿನ ಹಾಹಾಕಾರ ಸಾಧ್ಯತೆ - ಅಭಾವ ಆಗದಂತೆ ಮುನ್ನೆಚ್ಚರಿಕೆ

ಗ್ರಾಮೀಣ ನೀರು ಪೂರೈಕೆ ಇಲಾಖೆ ಸೇರಿದಂತೆ ಎಲ್ಲಾ ಕುಡಿಯುವ ನೀರಿನ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು  ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ಸಹ ನೀಡಿದ್ದಾರೆ.

news18-kannada
Updated:March 11, 2020, 10:53 PM IST
ಶಿವಮೊಗ್ಗ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ನೀರಿನ ಹಾಹಾಕಾರ ಸಾಧ್ಯತೆ - ಅಭಾವ ಆಗದಂತೆ ಮುನ್ನೆಚ್ಚರಿಕೆ
ಸಾಂದರ್ಭಿಕ ಚಿತ್ರ
  • Share this:
ಶಿವಮೊಗ್ಗ(ಮಾ.11) : ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಬೇಸಿಗೆ ಬೀಸಿ ಆರಂಭವಾಗಿದೆ. ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳ ಕಾಲ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಜಿಲ್ಲಾಡಳಿತ ತೆಗೆದುಕೊಂಡಿದೆ.

ಜಿಲ್ಲೆಯಲ್ಲಿ ಪ್ರಸ್ತುತ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡುವ ಪರಿಸ್ಥಿತಿಯಿಲ್ಲ. ಆದರೂ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆ ಎದುರಾಗಬಹುದಾದ 316 ಗ್ರಾಮಗಳನ್ನು ಈಗಾಗಲೇ ಗುರುತಿಸಲಾಗಿದೆ. ಈ ಗ್ರಾಮಗಳಲ್ಲಿ ಈಗಾಗಲೇ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಿಯಾ ಯೋಜನೆಗೆ ಅನುಮೋದನೆ ಕೂಡ ಜಿಲ್ಲಾಡಳಿತ ನೀಡಿದೆ.

ತಾತ್ಕಾಲಿಕ ಕಾಮಗಾರಿಗಳನ್ನು ಕೈಗೊಳ್ಳುವ ಬದಲು ನೀರಿನ ಮೂಲವನ್ನು ಗುರುತಿಸಿ ಪೈಪ್​​​ಲೈನ್​​​​ ಅಳವಡಿಕೆಯಂತಹ  ಶಾಶ್ವತ ಕಾಮಗಾರಿಗಳನ್ನು ಕೈಗೊಳ್ಳಲು ಆದ್ಯತೆ ನೀಡಲಾಗುತ್ತಿದೆ. ಗ್ರಾಮೀಣ ನೀರು ಪೂರೈಕೆ ಇಲಾಖೆ ಸೇರಿದಂತೆ ಎಲ್ಲಾ ಕುಡಿಯುವ ನೀರಿನ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು  ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ಸಹ ನೀಡಿದ್ದಾರೆ.

 tunga dam
ತುಂಗ ಮೇಲ್ದಂಡೆ ಯೋಜನೆ ಡ್ಯಾಂ


ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಟ್ಯಾಂಕರ್ ಸಾಫ್ಟ್​​ವೇರ್​ ರೂಪಿಸಿದ್ದು, ಈ ಕುರಿತು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಮಾಹಿತಿಯನ್ನು ಒದಗಿಸುವ ಕೆಲಸ ಮಾಡಲಾಗಿದೆ.

ಇನ್ನು ಜಿಲ್ಲೆಯಲ್ಲಿ ಪ್ರಮುಖ ಜಲಾಶಯಗಳಾದ ಗಾಜನೂರು, ತುಂಗಾ ಅಣೆಕಟ್ಟು. ಬಿಆರ್​​ಪಿಯ ಭದ್ರಾ , ಅಂಜನಾಪುರ ಹಾಗೂ ಅಂಬ್ಲಿಗೋಳ ಜಲಾಶಯಗಳಲ್ಲಿ  ಜೂನ್​​​​ ವರೆಗೆ ಕುಡಿಯುವ ನೀರು ಪೂರೈಕೆಗೆ ನೀರು ಲಭ್ಯವಿದೆ. ಆದರೆಮ ಈಗಾಗಲೇ ನಿಗದಿಯಾಗಿರುವ ನೀರನ್ನು ಬಿಟ್ಟು, ಬೇರೆ ಯಾವುದೇ ಕಾರಣಕ್ಕೂ ನೀರನ್ನು ಜಿಲ್ಲಾಧಿಕಾರಿ ಅನುಮತಿ ಪಡೆಯದೇ ಬಿಡಬಾರದು ಎಂದು ತಿಳಿಸಿದ್ದಾರೆ.

ನೀರಿನ ಲಭ್ಯತೆ ಬಗ್ಗೆ ಪ್ರತಿ 15 ದಿನಗಳಿಗೊಮ್ಮೆ ವರದಿಯನ್ನು ಸಲ್ಲಿಸುವಂತೆ ನೀರಾವರಿ ಇಲಾಖೆಯ ಅಧಿಕಾರಿಗಳು ಜಿಲ್ಲಾಡಳಿತ ಸೂಚನೆ ಕೊಟ್ಟಿದೆ. ಅದರಲ್ಲೂ ಪ್ರಮುಖವಾಗಿ ಮಲೆನಾಡು ಭಾಗ ಎಂದು ಗುರುತಿಸಿಕೊಂಡಿರುವ ಸಾಗರ, ಹೊಸನಗರ, ತೀರ್ಥಹಳ್ಳಿ ಭಾಗದ ಹಲವು ಗ್ರಾಮಗಳಲ್ಲಿ ನೀರಿನ ಅಭಾವ ಸೃಷ್ಟಿಯಾಗುವ ಸಾಧ್ಯತೆಯಿದ್ದು, ಅಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗಿದೆ.ಇದನ್ನೂ ಓದಿ : ಕೊರೋನಾ, ಹಕ್ಕಿಜ್ವರದ ಭೀತಿಗೆ ಕಂಗಾಲಾದ ಪೌಲ್ಟ್ರಿ ಫಾರಂ ಮಾಲೀಕರು; ಕೋಳಿಗಳ ಮಾರಣ ಹೋಮಕ್ಕೆ ನಿರ್ಧಾರ

ಕಳೆದ ವರ್ಷ ತುಂಗಾ ಅಣೆಕಟ್ಟಿಯಲ್ಲಿ ನೀರು ಡೆಡ್ ಸ್ಟೋರೆಜ್ ಗೆ ಬಂದ ಕಾರಣ  ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿತ್ತು. ಆಗ ಮೂರು ದಿನಗಳಿಗೆ ಒಮ್ಮೆ ನೀರನ್ನು ಮಹಾನಗರ ಪಾಲಿಕೆ ಮನೆಗಳಿಗೆ ಬಿಡಲಾಗುತ್ತಿತ್ತು. ಹೀಗಾಗಿ ಈ ಬಾರಿ ಸೂಕ್ತ ಕ್ರಮಗಳನ್ನು ಜಿಲ್ಲಾಡಳಿತ ತೆಗೆದುಕೊಂಡಿದೆ.
Youtube Video
First published: March 11, 2020, 10:25 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories