Belagavi: 6 ತಿಂಗಳ ಬಳಿಕ ಮಹಾರಾಷ್ಟ್ರಕ್ಕೆ ಬೆಳಗಾವಿಯಿಂದ ಬಸ್ ಸಂಚಾರ ಆರಂಭ

ಬೆಳಗಾವಿಯಿಂದ ಗೋವಾ, ಮಹಾರಾಷ್ಟ್ರ ರಾಜ್ಯಗಳ ನಡುವೆ ಸಾರಿಗೆ ಸಂಚಾರ ಆರಂಭವಾಗಿದ್ದು, ದಿನದಿಂದ ದಿನಕ್ಕೆ ಪ್ರಯಾಣಿಕರು ಸಾರಿಗೆ ಬಸ್ ಗಳತ್ತ ಮುಖ ಮಾಡುತ್ತಿದ್ದಾರೆ. ಇದರಿಂದ ಸಾರಿಗೆ ಇಲಾಖೆ ನಷ್ಟ ಪ್ರಮಾಣವು ಕಡಿಮೆಯಾಗುತ್ತಿದೆ.

news18-kannada
Updated:September 23, 2020, 8:14 AM IST
Belagavi: 6 ತಿಂಗಳ ಬಳಿಕ ಮಹಾರಾಷ್ಟ್ರಕ್ಕೆ ಬೆಳಗಾವಿಯಿಂದ ಬಸ್ ಸಂಚಾರ ಆರಂಭ
ಸಾಂದರ್ಭಿಕ ಚಿತ್ರ
  • Share this:
ಬೆಳಗಾವಿ (ಸೆ. 23): ಕೊರೊನಾ ಸೋಂಕಿನ ಹಾವಳಿಯಿಂದ ಕಳೆದ ಆರು  ತಿಂಗಳಿಂದ ಇಡೀ ದೇಶದಲ್ಲಿ ಎಲ್ಲವೂ ಅಸ್ತವ್ಯಸ್ತಗೊಂಡಿತ್ತು. ಕರ್ನಾಟಕ, ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಂಡು 6 ತಿಂಗಳು ಕಳೆದಿದೆ. ಇಂದು ಮತ್ತೆ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಆರಂಭವಾಗಿದ್ದು, ಮೊದಲ ದಿನ ಪ್ರಯಾಣಿಕ ಸಂಖ್ಯೆ ಕಡಿಮೆಯಿತ್ತು. ಆದರೆ, ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗುವ ನಿರೀಕ್ಷೆ ಸಹ ಇದೆ. ಜತೆಗೆ ಸಾರಿಗೆ ಇಲಾಖೆಗೆ ದೊಡ್ಡ ಪ್ರಮಾಣದಲ್ಲಿ ಆರ್ಥಿಕವಾಗಿ ಪೆಟ್ಟು ಬಿದ್ದಿದ್ದು, ಇದನ್ನು ಸಾಧ್ಯವಾದಷ್ಟು ಕಡಿಮೆ ಮಾಡಲು ಸಹ ಪ್ರಯತ್ನ ಮಾಡಲಾಗುತ್ತಿದೆ.
ಬೆಳಗಾವಿ ಗಡಿ ಜಿಲ್ಲೆಯಾಗಿದ್ದು, ನಿತ್ಯ ಗೋವಾ, ಮಹಾರಾಷ್ಟ್ರಕ್ಕೆ ಸಾವಿರಾರು ಜನ ಪ್ರಯಾಣಿಕರು ಸಂಚಾರ ಮಾಡುತ್ತಿದ್ದರು. ಆದರೆ, ಆರು ತಿಂಗಳಿಂದ ಎಲ್ಲವೂ ಅಸ್ತವ್ಯಸ್ತವಾಗಿದೆ. ಇದೀಗ ಮತ್ತೆ ಬಸ್ ಸಂಚಾರ ಆರಂಭಗೊಂಡಿದ್ದು, ಇಂದು ಬೆಳಗಾವಿ- ಕೊಲ್ಹಾಪುರ, ಬೆಳಗಾವಿ - ಪುಣೆ, ಬೆಳಗಾವಿ- ಮುಂಬೈ, ಬೆಳಗಾವಿ- ಸಾವಂತವಾಡಿ ಸೇರಿ ಅನೇಕ ಬಸ್ ಗಳ ಸಂಚಾರಕ್ಕೆ ವಾಯುವ್ಯ ಸಾರಿಗೆ ಇಲಾಖೆ ಎಲ್ಲಾ ರೀತಿಯ ಸಿದ್ದತೆಯನ್ನು ಮಾಡಿಕೊಂಡಿದೆ. ಪ್ರಯಾಣಿಕ ಬೇಡಿಕೆ ಅನುಗುಣವಾಗಿ ಬಸ್ ಬಿಡಲು ಈಗಾಗಲೇ ತೀರ್ಮಾನಿಸಲಾಗಿದೆ.

ಬೆಳಗಾವಿಯಿಂದ ಗೋವಾ, ಮಹಾರಾಷ್ಟ್ರ ರಾಜ್ಯಗಳ ನಡುವೆ ಸಾರಿಗೆ ಸಂಚಾರ ಆರಂಭವಾಗಿದ್ದು, ನಷ್ಟ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಕಳೆದ ಆರು ತಿಂಗಳಲ್ಲಿ ಬೆಳಗಾವಿ ವಿಭಾಗಕ್ಕೆ 110 ಕೋಟಿ ರೂಪಾಯಿ ನಷ್ಟ ಸಂಭವಿಸಿದೆ. ಇದೀಗ ದಿನದಿಂದ ದಿನಕ್ಕೆ ಪ್ರಯಾಣಿಕರು ಸಾರಿಗೆ ಬಸ್ ಗಳತ್ತ ಮುಖ ಮಾಡುತ್ತಿದ್ದಾರೆ. ಇದರಿಂದ ಸಾರಿಗೆ ಇಲಾಖೆ ನಷ್ಟ ಪ್ರಮಾಣವು ಕಡಿಮೆಯಾಗುತ್ತಿದೆ. ಆದರೆ ಲಾಕ್ ಡೌನ್ ನಿಂದ ಆಗಿರೋ ಎಫೆಕ್ಟ್ ಸುಧಾರಣೆಗೆ ಅನೇಕ ತಿಂಗಳುಗಳೇ ಬೇಕಿದೆ.ಪ್ರತಿ ದಿನಕ್ಕೆ 70 ಲಕ್ಷ ಆದಾಯ ಮೊದಲು ಇತ್ತು, ಆದರೆ, ಇದೀಗ 35 ಲಕ್ಷ ರೂ. ಹಣ ಪ್ರತಿದಿನ  ಆದಾಯ ಬರುತ್ತಿದೆ. ಇದು ಮುಂದಿನ ದಿನದಲ್ಲಿ ಮತ್ತಷ್ಟು ಚೇತರಿಕೆ ಆಗೋ ನಿರೀಕ್ಷೆಯಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳಿದ್ದಾರೆ. ಕೊರೊನಾ ಸೋಂಕಿನ ಜತೆಗೆ ಬದುಕಬೇಕಾದ ಅನಿವಾರ್ಯ ಸ್ಥಿತಿ ಸದ್ಯ ನಿರ್ಮಾಣವಾಗಿದ್ದು, ಪ್ರಯಾಣಿಕರ ಸುರಕ್ಷತೆಗೆ ಇಲಾಖೆ ಸಹ ಅನೇಕ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಂಡಿದೆ. ಜತೆಗೆ ಜನರು ಸಹ ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಂಡು ಜಾಗ್ರತೆ ವಹಿಸಬೇಕು ಎಂದು ಬೆಳಗಾವಿ ವಿಭಾಗೀಯ ಸಾರಿಗೆ ಅಧಿಕಾರಿ ಮಹಾದೇವ ಮುಂಜಿ ಹೇಳಿದ್ದಾರೆ.
Published by: Sushma Chakre
First published: September 23, 2020, 7:51 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading