HOME » NEWS » State » BELAGAVI LOK SABHA BYPOLL CONGRESS AND BJP CANDIDATES ARE TRYING TO WIN IN LOK SABHA BY ELECTION CSB LG

Belagavi Lok Sabha Bypoll: ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ತಂತ್ರ-ಪ್ರತಿತಂತ್ರ...!

ಮಾರ್ಚ್ 29ರಂದು ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಮಾಡಲು ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದ್ದಾರೆ. ಅಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆ. ಜತೆಗೆ ಡಿಕೆ ಶಿವಕುಮಾರ್ ಹಿಂದಿನ ದಿನ ಜಿಲ್ಲೆಯ ಮುಖಂಡರು ಕಾರ್ಯಕರ್ತರ ಸಭೆಯನ್ನು ನಡೆಸಲಿದ್ದಾರೆ.

news18-kannada
Updated:March 27, 2021, 9:15 AM IST
Belagavi Lok Sabha Bypoll: ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ತಂತ್ರ-ಪ್ರತಿತಂತ್ರ...!
ಸತೀಶ್ ಜಾರಕಿಹೊಳಿ
  • Share this:
ಬೆಳಗಾವಿ(ಮಾರ್ಚ್ 27): ಏಪ್ರಿಲ್ 17ಕ್ಕೆ ಬೆಳಗಾವಿ ಲೋಕಸಭಾ ಉಪಚುನಾವಣೆ ಮತದಾನ ಪ್ರಕ್ರಿಯೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಯನ್ನು ಫೈನಲ್ ಮಾಡಿವೆ. ಈಗಾಗಲೇ ಅಭ್ಯರ್ಥಿಗಳು ಚುನಾವಣೆ ಗೆಲ್ಲಲ್ಲು ಕಸರತ್ತು ಆರಂಭಿಸಿದ್ದಾರೆ. ಶುಕ್ರವಾರ ಸತೀಶ್ ಜಾರಕಿಹೊಳಿ ಕಾರ್ಯಕರ್ತರ ಸಭೆ ನಡೆಸುವ ಮೂಲಕ ಚುನಾವಣೆ ತಯಾರಿಗೆ ಚಾಲನೆ ನೀಡಿದರು. ಮತ್ತೊಂದು ಕಡೆ ದಿವಂಗತ ಸುರೇಶ ಅಂಗಡಿಯವರ ಪತ್ನಿ ಮಂಗಳಾ ಅಂಗಡಿ ಸಹ ಶುಕ್ರವಾರ ಬೆಳಗ್ಗೆಯಿಂದಲೇ ಮಠ, ಮಂದಿರಗಳಿಗೆ ಭೇಟಿ ನೀಡಿದ್ದರು. ಮನೆಗೆ ಬಂದ ಕಾರ್ಯಕರ್ತರನ್ನು ಭೇಟಿಯಾಗುವ ಮೂಲಕ ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.

ಬಿಜೆಪಿ ವರಿಷ್ಠರು ಅಳೆದು ತೂಗಿ ಮಂಗಳಾ ಅಂಗಡಿಗೆ ಬೆಳಗಾವಿ ಲೋಕಸಭೆ ಉಪಚುನಾವಣೆಯ ಟಿಕೆಟ್ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆಯಿಂದಲೇ ಆಕ್ಟಿವ್ ಆಗಿದ್ದ ಮಂಗಳಾ ಅಂಗಡಿ ಬೆಳಗ್ಗೆ ಹುಕ್ಕೇರಿ ಮಠ, ಕಾರಂಜಿ ಮಠ, ಚನ್ನಮ್ಮ ವೃತ್ತದಲ್ಲಿ ಇರೋ ಗಣೇಶ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಜತೆಗೆ ಬೆಳಗಾವಿ ನಗರ ಹಾಗೂ ಜಿಲ್ಲಾ ಗ್ರಾಮೀಣ ಕಚೇರಿಗೆ ಭೇಟಿ ನೀಡಿ ಪಕ್ಷ ಪಕ್ಷ ಮುಖಂಡರ ಜತೆಗೆ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಮಂಗಳಾ ಅಂಗಡಿಗೆ ಪುತ್ರಿಯರಾದ ಡಾ. ಸ್ಪೂರ್ತಿ ಪಾಟೀಲ್, ಶ್ರದ್ಧಾ ಶೆಟ್ಟರ್ ಸಾಥ್ ನೀಡಿದ್ದರು.

ಗಡುವಿನ ಒಳಗೆ ಸರ್ಕಾರ ಪಂಚಮಸಾಲಿಗೆ 2ಎ ಮೀಸಲಾತಿ ನೀಡಬೇಕು; ಜಯಮೃತ್ಯುಂಜಯ ಶ್ರೀ

ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಹೆಸರನ್ನು ಶುಕ್ರವಾರ ಹೈಕಮಾಂಡ್ ಅಧಿಕೃತವಾಗಿ ಪ್ರಕಟಗೊಳಿಸಿದೆ. ಈ ಹಿನ್ನೆಲೆಯಲ್ಲಿ ಆಕ್ಟಿವ್ ಆಗಿರೋ ಸತೀಶ್ ಜಾರಕಿಹೊಳಿ ಇಂದು ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದರು. ಸಭೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ರಾಜು ಸೇಠ, ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ್ ನವಲಗಟ್ಟಿ ಸೇರಿ ಅನೇಕರು ಪಾಲ್ಗೊಂಡಿದ್ದರು. ಚುನಾವಣೆಗೆ ಬೇಕಾದ ಎಲ್ಲಾ ಕಾರ್ಯತಂತ್ರಗಳ ಬಗ್ಗೆ ಚರ್ಚೆಯನ್ನು ನಡೆಸಿದ್ದಾರೆ.

ಮಾರ್ಚ್ 29ರಂದು ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಮಾಡಲು ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದ್ದಾರೆ. ಅಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆ. ಜತೆಗೆ ಡಿಕೆ ಶಿವಕುಮಾರ್ ಹಿಂದಿನ ದಿನ ಜಿಲ್ಲೆಯ ಮುಖಂಡರು ಕಾರ್ಯಕರ್ತರ ಸಭೆಯನ್ನು ನಡೆಸಲಿದ್ದಾರೆ.

ಚುನಾವಣೆ ಸ್ಪರ್ಧೆಯ ಬಗ್ಗೆ ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಪಕ್ಷ ನನಗೆ ಇದೊಂದು ಅವಕಾಶ ಕೊಟ್ಟಿದ್ದು, ಖುಷಿ ಇದೆ. 20 ವರ್ಷಗಳ ಬಳಿಕ ಬೆಳಗಾವಿ ಲೋಕಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸುವ ವಿಶ್ವಾಸ ಇದೆ. ಚುನಾವಣೆ ಸ್ಪರ್ಧೆಯ ಹಿಂದೆ ನಮ್ಮ ಸ್ವಾರ್ಥ ಏನಿಲ್ಲ. ಪಕ್ಷ ಸಂಘಟನೆಯ ಹಿತದೃಷ್ಠಿಯಿಂದ ಸ್ಪರ್ಧೆ ಮಾಡಿದ್ದೇನೆ. ಈ ಚುನಾವಣೆ ಯಾವುದೇ ಗಾಳಿಯ ಮೇಲೆ ನಡೆಯಲ್ಲ. ಬದಲಾಗಿ ಕಾಂಗ್ರೆಸ್​ ಪಕ್ಷವು ಬೆಲೆ ಏರಿಕೆ, ಕೃಷಿ ಕಾಯ್ದೆಗಳ ಜಾರಿ ಸೇರಿ ಅನೇಕ ವಿಚಾರಗಳನ್ನು ಮುಂದಿಟ್ಟುಕೊಂಡು ಎದುರಿಸಲಿದೆ ಎಂದು ಹೇಳಿದ್ರು.
Youtube Video
ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್​ ಜಾರಕಿಹೊಳಿಯನ್ನು ಹಾಡಿ ಹೊಗಳಿದರು.. ಅನಿವಾರ್ಯವಾಗಿ ಚುನಾವಣೆ ಬಂದಿದೆ. ಸತೀಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯಲ್ಲಿ ತಮ್ಮದೇ ಆಗಿರುವ ಸಂಘಟನೆಯನ್ನು ಹೊಂದಿದ್ದಾರೆ. ಕಾಂಗ್ರೆಸ್ ಪ್ರಬಲ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದು, ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು.
Published by: Latha CG
First published: March 27, 2021, 8:41 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories