ಡಿ. 10ರಿಂದ ಚಳಿಗಾಲ ಅಧಿವೇಶನ: ಬೆಳಗಾವಿಯ ಸುವರ್ಣಸೌಧದಲ್ಲಿ ಭರ್ಜರಿ ತಯಾರಿ

ಹತ್ತು ದಿನಗಳ ಅಧಿವೇಶನದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಲು ನಿರ್ಧರಿಸಲಾಗಿದೆ.

Vijayasarthy SN
Updated:November 20, 2018, 9:29 AM IST
ಡಿ. 10ರಿಂದ ಚಳಿಗಾಲ ಅಧಿವೇಶನ: ಬೆಳಗಾವಿಯ ಸುವರ್ಣಸೌಧದಲ್ಲಿ ಭರ್ಜರಿ ತಯಾರಿ
ಸುವರ್ಣ ಸೌಧ
  • Share this:
ಬೆಳಗಾವಿ(ನ. 20): ಇಲ್ಲಿಯ ಸುವರ್ಣವಿಧಾನಸೌಧದಲ್ಲಿ ಡಿಸೆಂಬರ್ 10ರಿಂದ ಹತ್ತು ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದ್ದು ಇದಕ್ಕೆ ಸಕಲ ಸಿದ್ದತೆ ಮಾಡಲಾಗಿದೆ ಎಂದು ಬೆಳಗಾವಿಯಲ್ಲಿ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದ್ದಾರೆ. ಬೆಳಗಾವಿಯ ಸುವರ್ಣ ಸೌಧ ಅಧಿವೇಶನದ ಪೂರ್ವಭಾವಿ ಸಭೆ ಇಂದು ನಡೆಯುವ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ರಮೇಶ ಕುಮಾರ್, ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ನಿನ್ನೆ ಭೇಟಿ ನೀಡಿದ್ರು. ಬೆಳಗಾವಿ ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ, ನಗರ ಪೊಲೀಸ್ ಆಯುಕ್ತ ಡಿಸಿ ರಾಜಪ್ಪ ಜತೆಗೆ ಅಧಿಕಾರಿಗಳು ಸಭೆ ನಡೆಸಿದರು.

ನಂತರ ಮಾತನಾಡಿದ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಳೆದ ಬಾರಿ ಆಗಿರುವ ತಪ್ಪು ಈ ಬಾರಿ ಮರುಕಳಿಸಬಾರದು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಬಾರಿ ಶಾಸಕರು, ಅಧಿಕಾರಿಗಳು ಹಾಗೂ ಪತ್ರಕರ್ತರಿಗೆ ಕರಾವಳಿ, ಬೆಂಗಳೂರು ಹಾಗೂ ಉತ್ತರ ಕರ್ನಾಟಕ ಶೈಲಿಯ ಊಟದ ವ್ಯವಸ್ಥೆ ಮಾಡಲಾಗುವುದು ಎಂದರು.

ಇನ್ನು, ಸ್ಪೀಕರ್ ರಮೇಶ್ ಕುಮಾರ್ ಮಾತನಾಡಿ, ಬೆಳಗಾವಿಯ ಸುವರ್ಣಸೌಧವೇ ನಿರ್ಮಾಣ ಮಾಡಲಾಗಿದೆ. ಶಾಸಕರ ಭವನ ನಿರ್ಮಾಣದ ಅವಶ್ಯಕತೆ ಇದೆ ಎಂದರು.

ಕಳೆದ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಡಿವೈಎಸ್​ಪಿ ಗಣಪತಿ ಆತ್ಮಹತ್ಯೆ, ಐಟಿ ರೇಡ್ ಪ್ರಕರಣ, ಜಾರ್ಜ್, ವಿದ್ಯುತ್ ಖರೀದಿ ಅವ್ಯವಹಾರ ಇತ್ಯಾದಿ ಪ್ರಕರಣಗಳು ಜೋರು ಸದ್ದು ಮಾಡಿದ್ದವು. ಕಬ್ಬಿನ ಬೆಳೆ ಸಮಸ್ಯೆಗೆ ಪರಿಹಾರ ಸಿಗದೇ ಇದ್ದಲ್ಲಿ ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ರೈತ ಪ್ರತಿಭಟನೆಗಳ ವಿಚಾರವು ಪ್ರಮುಖವಾಗಿ ಚರ್ಚೆಗೆ ಬರಲಿವೆ. ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಅಸ್ತ್ರಗಳನ್ನ ಮೊನಚು ಮಾಡಿಕೊಂಡು ಹರಿಹಾಯಲು ಈ ಅಧಿವೇಶನ ಒಳ್ಳೆಯ ವೇದಿಕೆಯಾಗಿದೆ.
First published: November 20, 2018, 8:06 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading