HOME » NEWS » State » BELGAUM 83 BLACK FUNGUS CASES REPORTED IN BELAGAVI DISTRICT RHHSN CSB

ಬೆಳಗಾವಿಯಲ್ಲಿ ಕೊರೋನಾ ಸೋಂಕಿನ ಜತೆಗೆ ಬ್ಲ್ಯಾಕ್ ಫಂಗಸ್ ಆತಂಕ; ಜಿಲ್ಲೆಯಲ್ಲಿ 87 ಪ್ರಕರಣ ಪತ್ತೆ!

ಬೆಳಗಾವಿ ಜಿಲ್ಲೆಯಲ್ಲಿ ಸೋಂಕಿನ ಇಳಿಮುಖ ಮಾಡಲು ಜಿಲ್ಲಾಡಳಿತ ಸರ್ವ ಪ್ರಯತ್ನ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಜೂನ್ 4 ರಿಂದ ಜೂನ್7 ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ. ಹಾಲು, ವೈದ್ಯಕೀಯ ಸೇವೆ ಬಿಟ್ಟು ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧಾರ ಮಾಡಲಾಗಿದೆ.

news18-kannada
Updated:June 1, 2021, 10:09 PM IST
ಬೆಳಗಾವಿಯಲ್ಲಿ ಕೊರೋನಾ ಸೋಂಕಿನ ಜತೆಗೆ ಬ್ಲ್ಯಾಕ್ ಫಂಗಸ್ ಆತಂಕ; ಜಿಲ್ಲೆಯಲ್ಲಿ 87 ಪ್ರಕರಣ ಪತ್ತೆ!
ಬ್ಲ್ಯಾಕ್​ ಫಂಗಸ್​
  • Share this:
ಬೆಳಗಾವಿ (ಜೂನ್ 1): ರಾಜ್ಯದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ನಿಧಾನವಾಗಿ ಕಡಿಮೆಯಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಜೊತೆಗೆ ಇದೀಗ ಬ್ಲ್ಯಾಕ್ ಫಂಗಸ್ ನ ಹೊಸ ಆತಂಕ ಎದುರಾಗಿದೆ. ಜಿಲ್ಲೆಯಲ್ಲಿ 87 ಪ್ರಕರಣಗಳು ಈ ವರೆಗೆ ವರದಿಯಾಗಿದ್ದು, ಅನೇಕರು ಬಿಮ್ಸ್ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೊಡ್ಡ ಜಿಲ್ಲೆಯಾಗಿ ಕೊರೋನಾ ಸಹ ಇನ್ನೂ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಇದರ ಜತೆಗೆ ಇದೀಗ ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚಾಗುತ್ತಿರೋದು ಹಲವು ಆತಂಕಕ್ಕೆ ಕಾರಣವಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ 87 ಜನರಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗಿದೆ. 49 ಜನರ ಸೋಂಕಿತರನ್ನು ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 38 ಜನ ವಿವಿಧ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಈಗಾಗಲೇ 10 ಜನರಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ ಸಹ ಮಾಡಲಾಗಿದೆ. ಇಂದು ಸಹ ಮೂರು ಜನರಿಗೆ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಬ್ಲ್ಯಾಕ್ ಫಂಗಸ್ ಇದ್ದವರಿಗೆ ಸಮರ್ಪಕ ಔಷಧಿ ಪೂರೈಕೆ ಮಾಡಲಾಗುತ್ತಿದೆ. ಇನ್ನೆರಡು ದಿನಲ್ಲಿ ಹೆಚ್ಚಿನ ಔಷಧಿ ಸಹ ಪೂರೈಕೆಯಾಗಲಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ 800 ಗ್ರಾಮಗಳಲ್ಲಿ ಜನರಿಗೆ  ರ್‍ಯಾಪಿಡ್ ಟೆಸ್ಟ್  ಮಾಡಲಾಗಿದೆ. 135 ವೈದ್ಯಕೀಯ ತಂಡ ಪ್ರತಿ ಹಳ್ಳಿಗಳಿಗೆ ನೀಡಿ ಕೋವಿಡ್ ಪರೀಕ್ಷೆ ನಡೆಸುತ್ತಿದೆ. ಇನ್ನೂ ಒಂದು ವಾರದಲ್ಲಿ ಜಿಲ್ಲೆಯ 1300 ಮೂರು ಗ್ರಾಮಗಳಿಗೆ ವೈದ್ಯಕೀಯ ತಂಡ ತಲುಪಿದೆ. ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಢಳಿತ ಇದೀಗ ಎಲ್ಲಾ ಗ್ರಾಮಗಳಲ್ಲಿ ಪರೀಕ್ಷೆ ನಡೆಸಲು ಮುಂದಾಗಿದೆ.

ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಚಿಕಿತ್ಸೆ ಪಡೆದು ಗುಣಮುಖರಾಗಿ 1200 ಜನ ಬಿಡುಗಡೆ ಆಗಿದ್ದಾರೆ. ಸದ್ಯ 600 ಜನ ಸೋಂಕಿತರು ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ಕಡಿಮೆಯಾಗುತ್ತಿದೆ. ಇನ್ನೂ ಒಂದು ವಾರ ಕಾಲ ಲಾಕ್ ಡೌನ್ ಇದ್ದು ಇನಷ್ಟು ಸೋಂಕಿನ ಸಂಖ್ಯೆ ಕಡಿಮೆಯಾಗೋ ನಿರೀಕ್ಷೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಇದೆ.

ಬೆಳಗಾವಿ ಜಿಲ್ಲೆಯಲ್ಲಿ ಸೋಂಕಿನ ಇಳಿಮುಖ ಮಾಡಲು ಜಿಲ್ಲಾಡಳಿತ ಸರ್ವ ಪ್ರಯತ್ನ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಜೂನ್ 4 ರಿಂದ ಜೂನ್7 ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ. ಹಾಲು, ವೈದ್ಯಕೀಯ ಸೇವೆ ಬಿಟ್ಟು ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧಾರ ಮಾಡಲಾಗಿದೆ. ಜಿಲ್ಲಾಡಳಿತ ಪ್ರಯತ್ನ ಯಶಸ್ವಿಯಾಗಲಿದೆ ಎಂಬುದು ಕಾದು ನೋಡಬೇಕಿದೆ. ಜೂನ್ 7 ಬಳಿಕ ಲಾಕ್ ಡೌನ್ ನಿರ್ಧಾರವನ್ನು ರಾಜ್ಯ ಸರ್ಕಾರ ನಿರ್ಧಾರ ಮಾಡಲಿದೆ.

ಇದನ್ನು ಓದಿ: ಭೂಮಿಯೇ ಹಾಸಿಗೆ, ಆಕಾಶವೇ ಹೊದಿಕೆ ಮಾಡಿಕೊಂಡು 20 ವರ್ಷಗಳಿಂದ ಕಷ್ಟದ ಜೀವನ ಸಾಗಿಸುತ್ತಿರುವ ವೃದ್ದೆಯ ಮನಕಲಕುವ ಕಥೆ!

ಕಳೆದ ಐದು ವಾರಗಳಿಂದ ರಾಜ್ಯ ಮತ್ತು ಬೆಂಗಳೂರಿನಲ್ಲಿ ಸತತ ಏರಿಕೆಯ ಹಾದಿಯಲ್ಲಿ ಕೊರೋನಾ ವೈರಸ್​ ಇದೀಗ ಹಂತಹಂತವಾಗಿ ಇಳಿಯುತ್ತಿದೆ. ಕಳೆದ ವಾರದವರೆಗೆ ದಿನವೊಂದಕ್ಕೆ ಸರಿ ಸುಮಾರು 25 ರಿಂದ 30 ಸಾವಿರ ಪ್ರಕರಣಗಳು ದಾಖಲಾಗುತ್ತಿದ್ದವು. ಸಾವಿನ ಸಂಖ್ಯೆಯೂ ಆಘಾತಕಾರಿಯಾಗಿತ್ತು. ಆದರೆ, ಇದೀಗ ಸೋಂಕಿತರ ಸಂಖ್ಯೆ 15ಕ್ಕಿಂತ ಕೆಳಕ್ಕೆ ಇಳಿದಿರುವುದು ತುಸು ನೆಮ್ಮದಿಗೆ ಕಾರಣವಾಗಿದೆ. ಈ ನಡುವೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ದಾಖಲೆಯಲ್ಲಿ ಇಂದು ಒಂದೇ ದಿನದಲ್ಲಿ ರಾಜ್ಯದಲ್ಲಿ 14,304 ಜನ ಸೋಂಕಿಗೆ ತುತ್ತಾಗಿದ್ದಾರೆ. ಇನ್ನೂ 382 ಜನ ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ 3,418 ಕೊರೋನಾ ಪ್ರಕರಣಗಳು ದಾಖಲಾಗಿದ್ದು, 276 ಜನ ಸಾವನ್ನಪ್ಪಿದ್ದಾರೆ. ಅಲ್ಲದೆ, 5483 ಜನ ಡಿಸ್ವಾರ್ಜ್ ಆಗಿದ್ದು, ಆಕ್ಟಿವ್ ಕೇಸ್​ಗಳ ಸಂಖ್ಯೆ 1,43,702 ಕ್ಕೆ ಇಳಿದಿದೆ.ರಾಜ್ಯದಲ್ಲಿ ಕೊರೋನಾ ಸೋಂಕು ನಿವಾರಣೆಯ ಸಂಬಂಧ ಈಗಾಗಲೇ ಜೂನ್​07ರ ವರೆಗೆ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಕೊರೋನಾ ಸೋಂಕನ್ನು ತಡೆಯಲು ಲಾಕ್​ಡೌನ್ ಒಂದೇ ಏಕೈಕ ಮಾರ್ಗ ಎಂದು ತಜ್ಞರು ತಿಳಿಸಿದ್ದಾರೆ. ಹೀಗಾಗಿಯೇ ಕಳೆದ ಕೆಲ ದಿನಗಳಿಂದ ಸೋಂಕಿತರ ಪ್ರಮಾಣ ಇಳಿಮುಖವಾಗುತ್ತಿದೆ. ಹೀಗಾಗಿ ಜೂನ್ 07ರ ನಂತರವೂ ಲಾಕ್​ಡೌನ್​ ಅನ್ನು ಮುಂದುವರೆಸಬೇಕು ಎಂದು ಹಲವರು ಬೇಡಿಕೆಯನ್ನು ಮುಂದಿಡುತ್ತಿದ್ದಾರೆ.
Published by: HR Ramesh
First published: June 1, 2021, 10:09 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories