ರೈತರೊಂದಿಗೊಂದು ದಿನ: ಎತ್ತಿನ ಬಂಡಿ ಏರಿಬಂದು ಕಬ್ಬು ನಾಟಿ ಮಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್​​

ಕೃಷಿ, ಉಪಕಸುಬುಗಳ ಜತೆಗೆ ಮಾರುಕಟ್ಟೆಗೆ ತಕ್ಕಂತೆ ಆಹಾರ ಸಂಸ್ಕರಣೆಯ ಪದ್ಧತಿಯನ್ನು ರೈತರು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು

ಬಿ.ಸಿ.ಪಾಟೀಲ

ಬಿ.ಸಿ.ಪಾಟೀಲ

  • Share this:
ಚಿಕ್ಕೋಡಿ(ಸೆ.28):  ರೈತರು ಮುಖ್ಯ‌ ಬೆಳೆಯ ಜತೆಗೆ ಇತರೆ ಉಪ ಬೆಳೆಗಳನ್ನು ಬೆಳೆಯಬೇಕು; ಇದಲ್ಲದೇ ಹೈನುಗಾರಿಕೆ, ಕುರಿ ಸಾಕಾಣಿಕೆ, ಜೇನು ಸಾಕಾಣಿಕೆ ಮತ್ತಿತರ ಉಪ ಕಸುಬುಗಳನ್ನು ಮಾಡುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ (Agriculture minister BC Patil)  ಅವರು ರೈತರಿಗೆ ಕರೆ ನೀಡಿದ್ದಾರೆ. "ರೈತರೊಂದಿಗೊಂದು ದಿನ" ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಭೀವಶಿ ಗ್ರಾಮದ ನರಸಿಂಹ ಯಶವಂತ ಚೌಗಲೆ ಅವರ ಜಮೀನಿನಲ್ಲಿ ಕಬ್ಬಿನ ಬೆಳೆಯ ವಿವಿಧ  ನಾಟಿ ಪದ್ಧತಿಗಳ ಪ್ರಾತ್ಯಕ್ಷಿಕೆ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದರು.  ಆಹಾರ ಸಂಸ್ಕರಣ ಘಟಕಗಳ ಸ್ಥಾಪನೆಗೆ ಸರಕಾರ‌ ಸಬ್ಸಿಡಿ ಒದಗಿಸಿ ರೈತರ ಕೈಬಲಪಡಿಸುತ್ತಿವೆ. ಆದ್ದರಿಂದ ಕೃಷಿ, ಉಪಕಸುಬುಗಳ ಜತೆಗೆ ಮಾರುಕಟ್ಟೆಗೆ ತಕ್ಕಂತೆ ಆಹಾರ ಸಂಸ್ಕರಣೆಯ ಪದ್ಧತಿಯನ್ನು ರೈತರು ರೂಢಿಸಿಕೊಳ್ಳಬೇಕು. ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡರೆ ರೈತರು ಆರ್ಥಿಕ ಸ್ಬಾವಲಂಬನೆ ಸಾಧ್ಯವಾಗುತ್ತದೆ. ಒಂದು ಬೆಳೆ ನಷ್ಟವಾದರೆ ಇನ್ನೊಂದು ಬೆಳೆ ಕೈಹಿಡಿಯುತ್ತದೆ. ಕುರಿ‌ ಸಾಕಾಣಿಕೆ ಕೂಡ ಲಾಭದಾಯಕವಾಗಿದೆ. ಹೈನುಗಾರಿಕೆ, ಕುರಿ ಸಾಕಾಣಿಕೆ, ಜೇನು ಸಾಕಾಣಿಕೆ ಮತ್ತಿತರ ಇಂತಹ ಪರ್ಯಾಯ ಸಾಧ್ಯತೆಗಳು ಮತ್ತು ಉಪಕಸುಬುಗಳ ಕುರಿತು ರೈತರು ಗಮನಹರಿಸಬೇಕು. ಕರೆ ಕೊಟ್ಟಿದ್ದಾರೆ.

ಬೆಳೆ ಪರಿಹಾರ ಬಿಡುಗಡೆ

ಪ್ರಧಾನಮಂತ್ರಿ ಗಳು ಕಿಸಾನ್ ಸಮ್ಮಾನ್ ಯೋಜನೆ ಜಾರಿಗೊಳಿಸಿದ್ದಾರೆ. ಈ ಯೋಜನೆಯಡಿ ಬೆಳಗಾವಿ ಜಿಲ್ಲೆಯ 5.48 ಲಕ್ಷ ರೈತರಿಗೆ 2019 ರಿಂದ ಇಲ್ಲಿಯವರೆಗೆ 1090 ಕೋಟಿ ರೂಪಾಯಿ ಲಭಿಸಿದೆ. ಇತ್ತೀಚಿಗೆ ಸಂಭವಿಸಿದ ಬೆಳೆಹಾನಿಗೆ ಪರಿಹಾರವನ್ನು ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ 30 ಕೋಟಿ ರೂಪಾಯಿ ‌ಬೆಳಗಾವಿ ಜಿಲ್ಲೆಗೆ ಲಭಿಸಿದೆ ಎಂದು ಸಚಿವ ಬಿ.ಸಿ.ಪಾಟೀಲ ಮಾಹಿತಿ ನೀಡಿದರು.

ಇದನ್ನು ಓದಿ: ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ ಪೂಜೆಗೆ ಮುಜಾವರ್ ನೇಮಿಸಿದ್ದ ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ವಿದ್ಯಾರ್ಥಿ ವೇತನ ಪ್ರಧಾನ

ಕೃಷಿ ಪದವಿ ಕಾಲೇಜುಗಳಲ್ಲಿ ರೈತರ ಮಕ್ಕಳ ಪ್ರವೇಶ ಕಲ್ಪಿಸಲು ಮೀಸಲಾತಿ ಪ್ರಮಾಣ ಹೆಚ್ಚಿಸಲಾಗಿದೆ. ಇದಲ್ಲದೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ ಮೂಲಕ ರೈತರ ನೆರವಿಗೆ ಮುಂದಾಗಿದ್ದಾರೆ. ಒಟ್ಟಾರೆ ರೈತ ಸಮುದಾಯದ ಅಭಿವೃದ್ಧಿಗೆ ಸರಕಾರ ಬದ್ಧವಿದೆ ಎಂದಿದ್ದಾರೆ.

ಇದನ್ನು ಓದಿ: ಸಿಂದಗಿ ಉಪಚುನಾವಣೆ ಘೋಷಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ; ಪಕ್ಷದ ನಾಯಕರ ವಿರುದ್ಧ ಸಂಸದ ಜಿಗಜಿಣಗಿ ಬೇಸರ!

ಸೋಯಾಬಿನ್ ಗೆ ಸೂಕ್ತ ದರ ನಿಗದಿ; ಮಾರುಕಟ್ಟೆ ವ್ಯವಸ್ಥೆಗೆ ರೈತರ ಒತ್ತಾಯ..

ಕೃಷಿ ಸಚಿವ ಬಿ.ಸಿ.ಪಾಟೀಲ ಜತೆ ಸಂವಾದ ನಡೆಸಿದ ನಿಪ್ಪಾಣಿ ತಾಲ್ಲೂಕಿನ ಭೀವಶಿ ಗ್ರಾಮದ ರೈತರು ರೈತರು ಬೆಳೆದ ಸಾವಯವ ಬೆಳೆಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಸೇರಿದಂತೆ ವಿವಿಧ ರೀತಿಯ ಬೇಡಿಕೆಗಳನ್ನು ಮುಂದಿಟ್ಟರು. ಸೋಯಾಬಿನ್ ಬೆಳೆಗೆ ಸೂಕ್ತ ದರ ನಿಗದಿಪಡಿಸುವಂತೆ ಒತ್ತಾಯಿಸಿದರು.ಚಿಕ್ಕೋಡಿ-ನಿಪ್ಪಾಣಿಯಲ್ಲಿ ವೇದಗಂಗಾ, ದೂಧಗಂಗಾ ಹಾಗೂ‌ ಕೃಷ್ಣಾ ನದಿಗಳಿವೆ. ಇತ್ತೀಚೆಗೆ ಅತಿವೃಷ್ಟಿಯಿಂದ ಸೊಯಾಬಿನ್ ಬೆಳೆಹಾನಿಯಾಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಮುಂದಿನ ಬೆಳೆ ಬೆಳೆಯುವ ಪೂರ್ವದಲ್ಲಿಯೇ ಹಿಂದಿನ ಬೆಳೆಹಾನಿ ಪರಿಹಾರ ನೀಡಬೇಕು.

ಸೂಕ್ತ ಮಾರುಕಟ್ಟೆ ವ್ಯವಸ್ಥೆ

ನದಿತೀರದ ಭಾಗದಲ್ಲಿ ವಿದ್ಯುತ್ ಸಮಸ್ಯೆ ಹೆಚ್ಚಾಗಿದ್ದು, ಇದನ್ನು ನಿವಾರಿಸುವ ಮೂಲಕ ರೈತರಿಗೆ ನೆರವಾಗಬೇಕು. ಸಾವಯವ ಕೃಷಿ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು ಎಂದು ರೈತರು ಸಚಿವರಿಗೆ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವರು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಸೋಯಾಬೀನ ಗೆ ಹೆಚ್ಚಿನ ಎಮ್‌.ಎಸ್.ಪಿ ದರ ನಿಗದಿ ಮಾಡುವ ಭರವಸೆ ನೀಡಿದ್ದಾರೆ.
Published by:Seema R
First published: