Anti Conversion Bill: ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ; ವಿಧೇಯಕದಲ್ಲಿನ ಪ್ರಮುಖ ಅಂಶಗಳೇನು?

ಮತಾಂತರ ಮಾಡುವ ವ್ಯಕ್ತಿಯೂ ಈ ಬಗ್ಗೆ ಜಿಲ್ಲಾ ದಂಡಾಧಿಕಾರಿಗೆ 30 ದಿನಗಳ ಮೊದಲೇ  ಈ ಬಗ್ಗೆ ಮಾಹಿತಿ ಕೊಡಬೇಕು. ಈ ಮಾಹಿತಿಯನ್ನು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು. ಇದಕ್ಕೆ30 ದಿನಗಳ ಒಳಗಾಗಿ ಆಕ್ಷೇಪನೆ ಬಂದರೆ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿಚಾರಣೆ ನಡೆಸಲು ಅವಕಾಶ ಇದೆ.

ವಿಧೇಯಕ ಮಂಡನೆ

ವಿಧೇಯಕ ಮಂಡನೆ

  • Share this:
ಬೆಳಗಾವಿ: ವಿಪಕ್ಷಗಳ ಭಾರೀ ವಿರೋಧದ ಮಧ್ಯೆಯೂ ಇಂದು ವಿಧಾನಸಭೆ ಕಲಾಪದಲ್ಲಿ (Belagavi Session) ಮತಾಂತರ ನಿಷೇಧ ವಿಧೇಯಕವನ್ನು (Anti Conversion Bill) ಮಂಡಿಸಲಾಯಿತು. ಮಧ್ಯಾಹ್ನದ ಊಟದ ವಿರಾಮದ ಬಳಿಕ ಶುರುವಾದ ಕಲಾಪದಲ್ಲಿ ವಿಧೇಯಕ ಮಂಡನೆಗೆ ಸ್ಪೀಕರ್​ ಅವಕಾಶ ನೀಡಿದರು. ಗೃಹ ಸಚಿವ ಅರಗ ಜ್ಞಾನೇಂದ್ರ (Home Minister Araga Jnanendra) ವಿಧೇಯಕ ಮಂಡಿಸುತ್ತಿದ್ದಂತೆ ಕಾಂಗ್ರೆಸ್​ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಜನ ವಿರೋಧಿ ಕಾಯಿದೆ ತಂದು ಅದನ್ನು ಪಾಸ್ ಮಾಡೋದು ಸರಿಯಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಕಿಡಿ ಕಾರಿದರು. ಸಿಂಗಲ್ ಮೆಜಾರಿಟಿ ಇದೆ ಅಂತಾ ಏನು ಆಟ ಆಡ್ತಿರೇನ್ರಿ..? ಇಂತಹ ಕೆಟ್ಡ ಸರ್ಕಾರ ಕರ್ನಾಟಕದ ಇತಿಹಾಸದಲ್ಲೇ ಇಲ್ಲ ಎಂದು ಸರ್ಕಾರದ ವಿರುದ್ದ ಸಿದ್ದರಾಮಯ್ಯ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​​ (DK Shivakumar) ಬಿಲ್​ ಪ್ರತಿ ಹರಿದು ಹಾಕಿದನ್ನು ಸ್ಪೀಕರ್​​ ಖಂಡಿಸಿದರು. ಬಿಲ್ ಮಂಡನೆ ಬಗ್ಗೆ ನಿಮ್ಮ ವಿಪ್ ಗೆ ಹೇಳಿ ಕಳುಹಿಸಿದ್ದೇನೆ. ಬಿಲ್‌ ಚೆನ್ನಾಗಿ ನೋಡ್ಕೊಂಡು, ನಾಳೆ ಚರ್ಚೆಗೆ ಬನ್ನಿ ಎಂದು ಸ್ಪೀಕರ್​ ಸೂಚಿಸಿದರು.

ಮತಾಂತರ ನಿಷೇಧ ವಿಧೇಯಕದಲ್ಲಿ ಇರುವ ಪ್ರಮುಖ ಅಂಶಗಳೇನು?

*ಬಲವಂತ, ವಂಚನೆ,  ಒತ್ತಾಯ ಹಾಗೂ ಆಮಿಷದ ಮೂಲಕ ನಡೆಸುವ ಮತಾಂತರ ಹಾಗೂ ಮದುವೆಯಾಗುವ ಭರವಸೆಯ ಮೂಲಕ ನಡೆಸುವ ಮತಾಂತರಕ್ಕೆ ನಿಷೇಧವಿದೆ.‌

*ವ್ಯಕ್ತಿಯು ಆತನ ನಿಕಟ ಪೂರ್ವ ಧರ್ಮಕ್ಕೆ ಮರು ಮತಾಂತರಗೊಂಡರೆ ಅದನ್ನು ಈ ಅಧಿನಿಯಮದ ಅಡಿಯಲ್ಲಿ ಮತಾಂತರವೆಂದು ಪರಿಗಣಿಸಲಾಗುವುದಿಲ್ಲ

*ಮತಾಂತರಗೊಂಡ ವ್ಯಕ್ತಿಯ ಪೋಷಕರು, ಸಹೋದರ, ಸಹೋದರಿ, ಸಹವರ್ತಿ ಅಥವಾ ಸಹೋದ್ಯೋಗಿಗಳಿಗೂ ಮತಾಂತರದ ಬಗ್ಗೆ ದೂರನ್ನು ನೀಡಿದರೆ ಎಫ್ ಐಆರ್ ದಾಖಲಿಸುವ ಅವಕಾಶವಿದೆ.

* ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಐದು ವರ್ಷಗಳವರೆಗೆ  ಜೈಲು ಶಿಕ್ಷೆ ಹಾಗೂ ಇಪ್ಪತ್ತೈದು ಸಾವಿರ ರೂಪಾಯಿಗಳ ದಂಡ‌ ವಸೂಲಾತಿಗೆ ಅವಕಾಶವಿದೆ.

*ಅಪ್ರಾಪ್ತ ವ್ಯಕ್ತಿ, ಮಹಿಳೆ, ಎಸ್ ಸಿ, ಎಸ್ ಟಿ  ಸೇರಿದ ವ್ಯಕ್ತಿಯ ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಹತ್ತು ವರ್ಷಗಳ ವರೆಗೆ ಜೈಲು ಶಿಕ್ಷೆಗೆ ಕಾಯ್ದೆಯಲ್ಲಿ ಅವಕಾಶವಿದೆ. ಅಷ್ಟೇ ಅಲ್ಲದೆ 50 ಸಾವಿರ ದಂಡ ವಸೂಲಿಗೂ ಅವಕಾಶವಿದೆ.

*ಮತಾಂತರಕ್ಕೆ ಬಲಿಯಾದವರಿಗೆ  ಆಪಾದಿತನಿಂದ ಸಂದಾಯವಾಗುವಂತೆ ಗರಿಷ್ಠ ಐದು ಲಕ್ಷ ರೂಪಾಯಿ ಪರಿಹಾರ ಕೊಡಿಸಲು ಅವಕಾಶ ಕಲ್ಪಿಸಲಾಗಿದೆ.

*ಅಪರಾಧ ಪುನರಾವರ್ತನೆ ಆದಲ್ಲಿ ಐದು ವರ್ಷ ಜೈಲು ಶಿಕ್ಷೆ ಹಾಗೂ ಎರಡು ಲಕ್ಷ ದಂಡ ವಸೂಲಿಗೂ ಅವಕಾಶವಿದೆ.

* ಮತಾಂತರದ ಉದ್ದೇಶದ ಆದ ಮದುವೆಯನ್ನು ಅಸಿಂಧುವೆಂದು ಘೋಷಿಸಲು ನ್ಯಾಯಾಲಯಕ್ಕೆ ಅವಕಾಶ ನೀಡಲಾಗಿದೆ.

ಮತಾಂತರ ಆಗಬೇಕಾದಲ್ಲಿ ಪಾಲಿಸಬೇಕಾದ ನಿಯಮಗಳು

*ಮತಾಂತರವಾಗಲು‌ ಮುಂದಾಗಿರುವ ವ್ಯಕ್ತಿ  ಕನಿಷ್ಠ ಆರವತ್ತು ದಿನಗಳ ಮೊದಲು ಜಿಲ್ಲಾ ದಂಡಾಧಿಕಾರಿಗೆ ಈ ಬಗ್ಗೆ ತಿಳಿಸಬೇಕು.

*ಮತಾಂತರ ಮಾಡುವ ವ್ಯಕ್ತಿಯೂ ಈ ಬಗ್ಗೆ ಜಿಲ್ಲಾ ದಂಡಾಧಿಕಾರಿಗೆ 30 ದಿನಗಳ ಮೊದಲೇ  ಈ ಬಗ್ಗೆ ಮಾಹಿತಿ ಕೊಡಬೇಕು.

* ಈ ಮಾಹಿತಿಯನ್ನು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು. ಇದಕ್ಕೆ30 ದಿನಗಳ ಒಳಗಾಗಿ ಆಕ್ಷೇಪನೆ ಬಂದರೆ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿಚಾರಣೆ ನಡೆಸಲು ಅವಕಾಶ ಇದೆ.

*ವಿಚಾರಣೆಯ ಸಂದರ್ಭದಲ್ಲಿ ತಪ್ಪು  ಕಂಡುಬಂದಲ್ಲಿ ಕ್ರಿಮಿನಲ್‌ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲು ಅವಕಾಶವಿದೆ.

*ಮತಾಂತರಗೊಂಡ ವ್ಯಕ್ತಿಯೂ ಮತಾಂತರಗೊಂಡ ದಿನಾಂಕದಿಂದ‌ ಹಿಡಿದು ಮೂಲ ಧರ್ಮ, ಮತಾಂತರಗೊಂಡ ಧರ್ಮ ಹಾಗೂ ಇನ್ನಿತರ ಮಾಹಿತಿಯನ್ನು ಜಿಲ್ಲಾಧಿಕಾರಿಗೆ ನೀಡಬೇಕು.

*ಅಪರಾಧಕ್ಕೆ ನೆರವು ಹಾಗೂ ದುಷ್ಪ್ರೇರಣೆ ನೀಡಿ ವ್ಯಕ್ತಿಯನ್ನು ಆರೋಪಿಯನ್ನಾಗಿ ಪರಿಗಣಿಸುವ ಅವಕಾಶವೂ ಇದೆ.

-ವಿಚಾರಣೆಯ ಸಂದರ್ಭದಲ್ಲಿ ತಪ್ಪು  ಕಂಡುಬಂದಲ್ಲಿ ಜಿಲ್ಲಾ ದಂಡಾಧಿಕಾರಿ ಕ್ರಿಮಿನಲ್‌ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲು ಅವಕಾಶವಿದೆ.

ಇದನ್ನೂ ಓದಿ: New Year ಸಂಭ್ರಮಾಚರಣೆಯನ್ನ ನುಂಗಿದ ಓಮಿಕ್ರಾನ್; ಡಿ.30 - ಜ.2 ರವರೆಗೆ ಯಾವುದಕ್ಕೆಲ್ಲಾ ನಿರ್ಬಂಧ?

ಕದ್ದು ಮುಚ್ಚಿ ಯಾಕ್ರೀ ಬಿಲ್ ತರ್ತೀರಾ..?

ಸದನದಲ್ಲಿ ವಿಧೇಯಕ ಮಂಡನೆ ಆಗುತ್ತಿದ್ದಂತೆ ಕದ್ದು ಮುಚ್ಚಿ ಯಾಕ್ರೀ ಬಿಲ್ ತರ್ತೀರಾ..? ರಾಜಾ ರೋಷವಾಗಿ ತಗೊಂಡು ಬನ್ರೀ ಎಂಬ ಸಿದ್ದರಾಮಯ್ಯ ಮಾತಿಗೆ ರಾಜರೋಷವಾಗಿಯೇ ಬಿಲ್ ತಂದಿದ್ದೇವೆ ಎಂದು ಸಚಿವ ಆರ್​.ಅಶೋಕ್ ತಿರುಗೇಟು ನೀಡಿದರು.  ಈ ಸರ್ಕಾರ ಸಂವಿಧಾನ ರೀತಿ ನಡೆಯುತ್ತಿಲ್ಲ, ಹಿಂಭಾಗಿಲಿಂದ ಬಂದ ಸರ್ಕಾರ ಸಂವಿಧಾನ ಬಾಹಿರ ಸರ್ಕಾರ. ಇಂತಹ ಸರ್ಕಾರದ ಉತ್ತರ ವನ್ನು ನಾವು ಕೇಳಿಕೊಂಡು ಕೂತ್ಕೊಬೇಕಾ ಎಂದು ಅಶೋಕ್ ಉತ್ತರಕ್ಕೆ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದರು.

ರಾಜಕಾರಣ ಮಾಡಲು ಇವ್ರಿಗೆ ಈ ವಿಷಯ ಬೇಕಾ ಎಂದು ಸಚಿವ ಈಶ್ವರಪ್ಪ ಮಾತಿನಲ್ಲೇ ತಿವಿದರು. ಹೌದಪ್ಪ ಹೌದು ಎಂದು ಈಶ್ವರಪ್ಪಗೆ ಡಿಕೆಶಿ-ಸಿದ್ದರಾಮಯ್ಯ ತಿರುಗೇಟು ನೀಡಿದರು. ನಂತರ ಕಾಂಗ್ರೆಸ್​ ಸದಸ್ಯರು ಮತಾಂತರ ವಿಧೇಯಕ ಮಂಡನೆ ವಿರೋಧಿ ಸಭಾತ್ಯಾಗ ಮಾಡಿದರು. ಸಭಾತ್ಯಾಗ ಮಾಡಿ ಕಾಂಗ್ರೆಸ್ ಸದಸ್ಯರು ಸದನದಿಂದ ಹೊರ ನಡೆದರು. ಇವರಿಗೆ ಭಾರತವನ್ನು ಪಾಕಿಸ್ತಾನ ಆಗಬೇಕು. ಹಿಂದೂಗಳು ಮುಸಲ್ಮಾನರು, ಕ್ರಿಶ್ಚಿಯನ್ಸ್ ಆಗಬೇಕು ಎಂದು ಕಾಂಗ್ರೆಸ್ಸಿಗರ ವಿರುದ್ದ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಈಶ್ವರಪ್ಪ ಮಾತಿಗೆ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಆಕ್ಷೇಪಿಸಿ, ಈ ಮಾತು ಸರಿಯಲ್ಲ ಎಂದರು.
Published by:Kavya V
First published: