ಬೆಳಗಾವಿ: ನಾಳೆ ಶುಕ್ರವಾರ ನಡೆಯಲಿರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ನಿನ್ನೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಅಭ್ಯರ್ಥಿಗಳು ಮನೆ ಮನೆ ಮತಯಾಚನೆ ನಡೆಸುತ್ತಿದ್ದಾರೆ. ಇದೇ ವೇಳೆ, ಬೆಳಗಾವಿ ಪಾಲಿಕೆಯಲ್ಲಿ ಕಾಂಗ್ರೆಸ್, ಬಿಜೆಪಿ ಬಂಡಾಯ ಅಭ್ಯರ್ಥಿಗಳಿಗೆ ಪಕ್ಷದ ನಾಯಕರು ಶಾಕ್ ನೀಡಿದ್ದಾರೆ. ಬಿಜೆಪಿಯಲ್ಲಿ 9 ಜನ, ಕಾಂಗ್ರೆಸ್ ನಲ್ಲಿ ಇಬ್ಬರನ್ನ ಉಚ್ಛಾಟನೆ ಮಾಡಲಾಗಿದೆ. ಪಕ್ಷಗಳ ಅಭ್ಯರ್ಥಿಗಳಿಗೆ ಪಕ್ಷೇತರರು ದೊಡ್ಡ ಸವಾಲ್ ಆಗಿದ್ದಾರೆ. ಫಲಿತಾಂಶದ ಮೇಲೆ ಇದು ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿಗೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ದೊಡ್ಡ ಸವಾಲ್ ಆಗಿದೆ. ಸ್ಥಳೀಯ ಇಬ್ಬರು ಶಾಸಕರಿಗೆ ಮುಂದಿನ ಚುನಾವಣೆಗೆ ಇದು ದಿಕ್ಸೂಚಿ ಆಗಲಿದ್ದು, ಶತಾಯ ಗತಾಯ ಮೇಲುಗೈ ಸಾಧಿಸಲು ಹೋರಾಟ ನಡೆಸುತ್ತಿದ್ದಾರೆ.
ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಮೊದಲ ಸಲ ಪಕ್ಷಗಳ ಆಧಾರದ ಮೇಲೆ ಚುನಾವಣೆ ನಡೆಯುತ್ತಿದೆ. ಹೀಗಾಗಿ ಪಕ್ಷಗಳು ಅಭ್ಯರ್ಥಿಗಳ ಆಯ್ಕೆ, ಪ್ರಚಾರದಲ್ಲಿ ಅನೇಕ ಸಮಸ್ಯೆಗಳು ಎದುರಿಸಿದೆ. ಒಂದು ವಾರ್ಡ್ ನಲ್ಲಿ ಮೂರು, ನಾಲ್ಕು ಜನ ಆಕಾಂಕ್ಷಿಗಳು ಇದ್ದರು. ಟಿಕೆಟ್ ವಂಚಿತರು ಪಕ್ಷದ ವಿರುದ್ಧ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧೆ ಮಾಡಿದ್ದಾರೆ. ಹೀಗೆ ಬಂಡಾಯ ಮಾಡಿದ್ದ 9 ಜನರನ್ನು ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಮಾಜಿ ಮೇಯರ್ ಶಿವಾಜಿ ಸುಂಟಕರ, ದೀಪಕ ಜಮಖಂಡಿ, ಸುರೇಶ ಯಾದವ್.ಶಿವಾನಂದ ಮುಗಳಿಹಾಳ್, ಗಣೇಶ ನಂದಗಡಕರ್, ಸಂಜಯ ಸವಾಸೇರಿ, ಆರತಿ ಪಾಟೋಳೆ, ಶಿವಾನಂದ ಮುರಗೋಡ, ಜ್ಯೋತಿ ಭಾವಿಕಟ್ಟಿ ಉಚ್ಛಾಟನೆ ಮಾಡಿ ಆದೇಶ ಮಾಡಲಾಗಿದೆ. ಈ ಬಗ್ಗೆ ಪಕ್ಷದಲ್ಲಿ ಸಾಕಷ್ಟು ಚರ್ಚೆ ನಡೆದು ನಂತರ ನಿರ್ಧಾರ ಪ್ರಕಟ ಮಾಡಲಾಗಿದೆ. ಆದರೇ ಅನೇಕ ವರ್ಷಗಳಿಂದ ಪಕ್ಷಕ್ಕಾಗಿ ದುಡಿವರನ್ನು ಈಗ ಏಕಾಏಕಿ ಹೊರ ಹಾಕಿದರ ಬಗ್ಗೆ ಸಹ ಅಸಮಾಧಾನ ವ್ಯಕ್ತವಾಗಿದೆ.
ಇದನ್ನೂ ಓದಿ: Karnataka Weather Today: ಕರ್ನಾಟಕದಲ್ಲಿ ಇನ್ನೂ 4 ದಿನ ಮಳೆಯ ಆರ್ಭಟ; ಬೆಂಗಳೂರಿನ ಹವಾಮಾನ ಹೇಗಿರಲಿದೆ?
ಕಾಂಗ್ರೆಸ್ ಪಕ್ಷದಲ್ಲಿ ಸಹ ಇದೇ ರೀತಿಯಲ್ಲಿ ಆಗಿದೆ. ಪಕ್ಷಕ್ಕಾಗಿ ಅನೇಕ ವರ್ಷಗಳಿಂದ ಕೆಲಸ ಮಾಡಿದ ಕಾರ್ಯಕರ್ತರು ಟಿಕೆಟ್ ಕೇಳಿದ್ದರು. ಆದರೇರೆ ಪಕ್ಷ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧೆ ಮಾಡಿದ್ದಾರೆ. ಜಯಶ್ರೀ ಮಾಳಗಿ ಮತ್ತು ಜಯರಾಜ್ ಹಲೇಕರ್ ಇಬ್ಬರನ್ನೂ ಉಚ್ಛಾಟನೆ ಮಾಡಲಾಗಿದೆ.
ಕಳೆದ ಸಲ ಪಾಲಿಕೆ ಸದ್ಯರಾಗಿದ್ದ ಅನೇಕರು ಈ ಸಲ ಯಾವುದೇ ಪಕ್ಷದ ಚಿನ್ಹೆ ಬದಲಾಗಿ ಪಕ್ಷೇತರರಾಗಿ ಕಣದಲ್ಲಿ ಉಳಿದಿದ್ದಾರೆ. ಜತೆಗೆ ಪಾಲಿಕೆ ಚುನಾವಣೆ ಗೆಲುವು ಸಾಧಿಸಲು ಪಕ್ಷಕ್ಕಿಂತ ಎಲ್ಲರೂ ಮುಖ್ಯ ಎಂಬ ನಿರ್ಧಾರಕ್ಕೆ ಅನೇಕರು ಬಂದಿದ್ದಾರೆ. ಬೆಳಗಾವಿ ಪಾಲಿಕೆಯಲ್ಲಿ ಭಾಷೆ, ಗಡಿ ವಿಚಾರದಲ್ಲಿ ನಡೆಯುತ್ತಿದ್ದ ಚುನಾವಣೆ ಈಗ ಪಕ್ಷಗಳ ಚಿನ್ಹೆ ಮೇಲೆ ನಡೆಯುತ್ತಿರುವುದೂ ಕೂತೂಹಲಕ್ಕೆ ಕಾರಣವಾಗಿದೆ. ಮತದಾನಕ್ಕೆ ಒಂದೇ ದಿನ ಬಾಕಿ ಇದ್ದು, ಬೆಳಗಾವಿ ಜನ ಯಾವ ವಿಚಾರಕ್ಕೆ ಮತ ಹಾಕಲಿದ್ದಾರೆ ಎಂಬುದು ಕಾದು ನೋಡಬೇಕು.
ಇದನ್ನೂ ಓದಿ: ರಾಜ್ ಕುಮಾರ್, ಶಂಕರ್ ನಾಗ್, ವಿಷ್ಣುವರ್ಧನ್ ಸೇರಿದಂತೆ ಹಲವರ ಪುತ್ಥಳಿಗಳು ಶೀಘ್ರದಲ್ಲೇ ತೆರವು; ಕೋರ್ಟ್ ಆದೇಶ
(ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.)
ವರದಿ: ಚಂದ್ರಕಾಂತ ಸುಗಂಧಿ ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ