ಬೆಳಗಾವಿ (ಸೆ. 3)- ಬೆಳಗಾವಿ ಮಹಾನಗರ ಪಾಲಿಕೆ ಮತದಾನ ಪ್ರಕ್ರಿಯೆ (Belgaum Municipal Corporation Election voting) ಇಂದು ಮುಕ್ತಾಯಗೊಂಡಿದ್ದು, ಅಭ್ಯರ್ಥಿಗಳು ಸೋಲು, ಗೆಲುವಿನ ಲೆಕ್ಕಚಾರವನ್ನು ಆರಂಭಿಸಿದ್ದಾರೆ. ಬೆಳಗಾವಿ ಪಾಲಿಕೆಗೆ ಇದೇ ಮೊದಲ ಸಲ ಪಕ್ಷಗಳ ಆಧಾರದ ಮೇಲೆ ಚುನಾವಣೆ ನಡೆದಿದೆ. ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆಯ ವರೆಗೆ ಮತದಾನ ಪ್ರಕ್ರಿಯೆ ನಡೆದಿದೆ. ಬಹುತೇಕ ಶಾಂತ ರೀತಿಯಲ್ಲಿ ಮತದಾನ ನಡೆದಿದ್ದು, ಸಣ್ಣಪುಟ್ಟ ಗೊಂದಲಗಳು ಸೃಷ್ಠಿಯಾಗಿದ್ದವು. ಬೆಳಗಾವಿ ನಗರದಲ್ಲಿ ಇಂದು ಚುನಾವಣೆಯಲ್ಲಿ ಶೇ. 50.41ರಷ್ಟು ಮತದಾನ ನಡೆದಿದೆ. ಕಡಿಮೆ ಮತದಾನ ಆಗಿರುವ ಹಿನ್ನಲೆ ಯಾರಿಗೆ ಲಾಭ, ಯಾರಿಗೆ ನಷ್ಟ ಎಂಬ ಲೆಕ್ಕಚಾರಗಳು ಆರಂಭವಾಗಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಎಂಇಎಸ್ ಗೆ ಈ ಚುನಾವಣೆ ಅತ್ಯಂತ ಪ್ರತಿಷ್ಠೆಯ ಪ್ರಶ್ನೆಯಾಗಿದೆ.
ಜಿದ್ದಾಜಿದ್ದಿನ ಹೋರಾಟ
ಬೆಳಗಾವಿ ಪಾಲಿಕೆಯಲ್ಲಿ ಅಧಿಕಾರ ನಡೆಸಲು ರಾಜಕೀಯ ಪಕ್ಷಗಳು ಜಿದ್ದಾಜಿದ್ದಿನ ಹೋರಾಟ ನಡೆಸಿದ್ದು, ಇಂದು ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರವಾಗಿದೆ. ಬೆಳಗ್ಗೆ 7ರಿಂದ ಮತದಾನ ಪ್ರಕ್ರಿಯೆ ಆರಂಭವಗಿತ್ತು, ಹೊಸುರು ಬಸವಣ್ಣ ಗಲ್ಲಿಯ ಮತಗಟ್ಟೆ ಸಂಖ್ಯೆ 146ರಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ್ ಹಾಗೂ ಪತ್ನಿ ಪ್ರೀಯಾ ಅಭಯ ಪಾಟೀಲ್ ಮತದಾನ ಮಾಡಿದ್ದರು. ಬಳಿಕ ಮಾತನಾಡಿದ ಅಭಯ ಪಾಟೀಲ್, ಬಿಜೆಪಿ ಪಕ್ಷ ಎಲ್ಲಾ ಚುನಾವಣೆಯನ್ನು ಗಂಭೀರವಾಗಿ ಪರಿಗಣನೆ ಮಾಡುತ್ತದೆ. ಬೆಳಗಾವಿಯಲ್ಲಿ ಭಾಷಾ ರಾಜಕಾರಣಕ್ಕೆ ತಿಲಾಂಜಲಿ ಇಡಲಾಗಿದೆ. ಈ ಸಲ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನು ಓದಿ: ಬ್ಯಾಟಿಂಗ್ ವಿಚಾರದ ಟೀಕೆ ನಡುವೆಯೂ ಹೊಸ ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ
ಪ್ರತಿಷ್ಠೆಯ ಕಣ
ಬೆಳಗಾವಿ ಉತ್ತರ ಕ್ಷೇತ್ರ ಬಿಜೆಪಿ ಶಾಸಕ ಅನಿಲ್ ಬೆನಕೆ ವಾರ್ಡ್ ನಂಬರ್ 36ರ ಮತಗಟ್ಟೆ ಸಂಖ್ಯೆ, 247ರಲ್ಲಿ ತಮ್ಮಹಕ್ಕು ಚಲಾವಣೆ ಮಾಡಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಹ ವಾರ್ಡ್ ನಂಬರ್ 17ರ ಮತಗಟ್ಟೆ ಕೇಂದ್ರ 110ರಲ್ಲಿ ಮತದಾನ ಮಾಡಿದ್ರು. ಮತ ಚಲಾವಣೆ ಬಳಿಕ ಮಾತನಾಡಿದ ಶಾಸಕ ಅನಿಲ್ ಬೆನಕೆ, 26ವರ್ಷಗಳ ಬಳಿಕ ಬೆಳಗಾವಿ ಪಾಲಿಕೆಯಲ್ಲಿ ಪಕ್ಷಗಳ ಆಧಾರದ ಮೇಲೆ ಚುನಾವಣೆ ನಡೆದಿದೆ. ಭಾಷೆ, ಜಾತಿ, ಧರ್ಮ ವಿಚಾರ ಬಿಟ್ಟು ಕೇವಲ ಅಭಿವೃದ್ಧಿ ಹೆಸರಿನಲ್ಲಿ ಚುನಾವಣೆ ನಡೆಸಲಾಗಿದೆ. ನಗರದಲ್ಲಿ ನಾವು ಇಬ್ಬರು ಶಾಸಕರು ಇದ್ದರು ನಮಗೆ ಇದು ಪ್ರತಿಷ್ಠೆಯ ಪ್ರಶ್ನೆ ಯಾಗಿದೆ ಎಂದರು.
50 ರಷ್ಟು ಮತದಾನ
ಬೆಳಗಾವಿಯಲ್ಲಿ ನಡೆದ ಪಾಲಿಕೆ ಚುನಾವಣೆಯಲ್ಲಿ ಶೇ 50.41ರಷ್ಟು ಮತದಾನ ಆಗಿದೆ. ಇದೇ ತಿಂಗಳ 6ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಸಲದ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ, 385 ಜನ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಕಾಂಗ್ರೆಸ್, ಬಿಜೆಪಿಗೆ ಎಂಎಇಸ್ ಈ ಸಲದ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ