ಬೆಳಗಾವಿ: ಗೋಕಾಕ್ ಮುಖಂಡ ಅಶೋಕ್ ಪೂಜಾರಿ(Ashok Pujari) ಜೆಡಿಎಸ್ ತೊರೆದು ಇಂದು ಅಧಿಕೃತವಾಗಿ ಕಾಂಗ್ರೆಸ್ (Congress) ಪಕ್ಷ ಸೇರ್ಪಡೆಗೊಂಡರು. ಗೋಕಾಕ್ನಲ್ಲಿ ರಮೇಶ್ ಜಾರಕಿಹೊಳಿ (Ramesh Jarkiholi ) ಸೋಲಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ರಣತಂತ್ರ ಎಣೆದಿದ್ದಾರೆ ಎನ್ನಲಾಗುತ್ತಿದೆ. MLC ಚುನಾವಣೆ ಗೆಲುವಿನ ಬಳಿಕ ಡಿಕೆಶಿಗೆ ವಿಧಾನಸಭೆ ಚುನಾವಣೆಯೇ ಟಾರ್ಗೆಟ್ ಆಗಿದ್ದು, ಈ ಹಿನ್ನೆಲೆಯಲ್ಲಿ ಅಶೋಕ್ ಪೂಜಾರಿ ಅವರನ್ನು ಪಕ್ಷಕ್ಕೆ ಸೆಳೆದಿದ್ದಾರಂತೆ. ಗೋಕಾಕ್ ಕ್ಷೇತ್ರದ ಪ್ರಭಾವಿ ಲಿಂಗಾಯತ ಮುಖಂಡ ಆಗಿರುವ ಅಶೋಕ್ ಪೂಜಾರಿ ಕಾಂಗ್ರೆಸ್ ಸೇರ್ಪಡೆಯಿಂದ ಬಲ ಹೆಚ್ಚಾಗಿದೆ. ಈ ರಾಜಕೀಯ ಲೆಕ್ಕಾಚಾರದ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್ , ಕಾಂಗ್ರೆಸ್ಗೆ ಸೇರ್ಪಡೆ ಆಗುವವರ ಲಿಸ್ಟ್ ಇನ್ನೂ ಇದೆ. ಲಿಸ್ಟ್ ಇಲ್ಲ ಅಂತಾ ಅನ್ನೋದಿಲ್ಲ ಎಂದರು.
ಇದನ್ನೂ ಓದಿ: ಏ ಅಧ್ಯಕ್ಷ.. ಬಾರಯ್ಯ.. ನನ್ನ ಜಿಲ್ಲೆಯಲ್ಲಿ ನೀನು ಸಭೆ ಮಾಡಬೇಡ: ಡಿಕೆಶಿಗೆ ಸಿದ್ದರಾಮಯ್ಯ ತಾಕೀತು..!
ಗೋಕಾಕ್ ಕಾಂಗ್ರೆಸ್ನದ್ದು
ನಮಗೆ ಬರೋ ಲಿಸ್ಟ್ ಎಲ್ಲ ಸ್ಕ್ರೀನಿಂಗ್ ಕಮೀಟ್ಗೆ ಕಳಿಸುತ್ತೇವೆ. ಯಾರ್ಯಾರು ಬರ್ತಾರೆ ಅನ್ನೋ ರಹಸ್ಯ ಅನೌನ್ಸ್ ಮಾಡಬಾರದು ಸದ್ಯಕ್ಕೆ. ಅಶೋಕ್ ಪೂಜಾರಿ ಪ್ರಬಲ ನಾಯಕರು, ಎಲ್ಲಾ ಪಕ್ಷದಿಂದ ನಿಂತಿದ್ದಾರೆ. ಅವರ ನಾಯಕತ್ವ ಕೆಲಸ ನೋಡಿ ಕಾಂಗ್ರೆಸ್ ಪಕ್ಷಕ್ಕೆ ಹೋಗುವಂತೆ ಅವರ ಬೆಂಬಲಿಗರ ಒತ್ತಾಯ ಮಾಡಿದ್ದಾರೆ. ನಮ್ಮ ಪಕ್ಷ ಕೂಡ ಉತ್ತಮವಾಗಿ ಬೆಳೆಯುತ್ತಿದೆ. ಮುಂದೆ ಕಾಂಗ್ರೆಸ್ ಪಕ್ಷ ಆಯ್ಕೆ ಮಾಡಬೇಕೆಂದು ಗೋಕಾಕ್ ಜನತೆ ತೀರ್ಮಾನ ಮಾಡಿದ್ದಾರೆ. ಯಾವಾಗಲೂ ಗೋಕಾಕ್ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರೇ ಆಯ್ಕೆ ಆಗ್ತಿದ್ರು. ಮುಂದೆಯೂ ಕೂಡ ಕಾಂಗ್ರೆಸ್ ಶಾಸಕರೇ ಆಯ್ಕೆ ಆಗ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾವೇ ಗೆಲ್ಲುತ್ತೇವೆ
ಮುಂಬರುವ ಚುನಾವಣೆಯಲ್ಲಿ ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅಶೋಕ್ ಪೂಜಾರಿ ನೀಡ್ತೀರಾ ಎಂಬ ಪ್ರಶ್ನೆಗೆ, ನಾವು ಬೇಷರತ್ತಾಗಿ ಅಶೋಕ್ ಪೂಜಾರಿ ಸೇರ್ಪಡೆ ಮಾಡಿಕೊಂಡಿದ್ದೇವೆ. ನಾವು ಯಾರನ್ನೂ ಸೋಲಿಸೋದು ಅಲ್ಲ, ನಮ್ಮ ಗುರಿ ಕಾಂಗ್ರೆಸ್ ಪಕ್ಷ ಗೆಲ್ಲಬೇಕು. ನಮ್ಮ ಗುರಿ 224 ಕ್ಷೇತ್ರದಲ್ಲಿ ಗೆಲ್ಲೋದು. ಅಧಿವೇಶನ ಆದಮೇಲೆ ಯಾರು ಪಕ್ಷಕ್ಕೆ ಸೇರ್ಪಡ ಹೇಳ್ತೀನಿ. ಪಕ್ಷ ಬಿಟ್ಟವರನ್ನು ಮತ್ತೆ ಸೇರಿಸಿಕೊಳ್ತೀರಾ ಎಂಬ ಪ್ರಶ್ನೆಗೆ ಅರ್ಜಿ ಓಪನ್ ಇದೆ. ಯಾರ ಬೇಕಾದರೂ ಕಾಂಗ್ರೆಸ್ ಪಕ್ಷಕ್ಕೆ ಅರ್ಜಿ ಹಾಕಬಹುದು ಎಂದರು.
ರಮೇಶ್ ಜಾರಕಿಹೊಳಿಗೆ ಟಾಂಗ್
ಅಶೋಕ ಪೂಜಾರಿ ಕುಟುಂಬ ಒಟ್ಟು ಆರು ಬಾರಿ ಸ್ಪರ್ಧೆ ಮಾಡಿ ಸೋತಿದ್ದಾರೆ. ಅಶೋಕ ಪೂಜಾರಿ ತಂದೆ ಎರಡು ಬಾರಿ, ಅಶೋಕ ಪೂಜಾರಿ ನಾಲ್ಕು ಬಾರಿ ಸೋತಿದ್ದಾರೆ. ಗೋಕಾಕ್ ಕಾಂಗ್ರೆಸ್ ಪಕ್ಷದ ತವರು ಮನೆ ಎನ್ನುವ ಮೂಲಕ ಪರೋಕ್ಷವಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಟಾಂಗ್ ನೀಡಿದರು. ಕಾಂಗ್ರೆಸ ಪಕ್ಷದಲ್ಲಿ ವ್ಯಕ್ತಿ ಗಳು ಬರ್ತಾರೆ, ವ್ಯಕ್ತಿ ಗಳು ಹೋಗ್ತಾರೆ. ಕಾಂಗ್ರೆಸ ಪಕ್ಷದಲ್ಲಿ ವ್ಯಕ್ತಿಗಳಲ್ಲ ಪಕ್ಷ ದೊಡ್ಡದು ಎಂದರು.
ಇದನ್ನೂ ಓದಿ: New Year ಸಂಭ್ರಮಾಚರಣೆಯನ್ನ ನುಂಗಿದ ಓಮಿಕ್ರಾನ್; ಡಿ.30 - ಜ.2 ರವರೆಗೆ ಯಾವುದಕ್ಕೆಲ್ಲಾ ನಿರ್ಬಂಧ?
ಇನ್ನೊಂದು ದಿನ ನಾವು ಗೋಕಾಕ್ಗೆ ಬರ್ತಿವಿ. ಸತೀಶ್ ಜಾರಕಿಹೊಳಿ ಯಾವಾಗ ದಿನಾಂಕ ನಿಗದಿ ಮಾಡ್ತಾರೋ ಅವತ್ತು ಗೋಕಾಕ ಬಂದು ಉಳಿದೆಲ್ಲ ಕಾರ್ಯಕರ್ತರನ್ನ ಕಾಂಗ್ರೆಸ್ಗೆ ಸೇರ್ಪಡೆ ಮಾಡ್ಕೊತ್ತಿವಿ. ಗೋಕಾಕನಲ್ಲಿ ಕಾಂಗ್ರೆಸ ಪಕ್ಷಕ್ಕೆ ಇನ್ನಷ್ಟು ಶಕ್ತಿ ತಂದುಕೊಡುವ ಕೆಲಸ ಮಾಡಬೇಕು. ಬೆಳಗಾವಿ ಜಿಲ್ಲೆ ಹಾಲಿ ಮಾಜಿ ಶಾಸಕರು ಒಮ್ಮತದಿಂದ ಅಶೋಕ ಪೂಜಾರಿ ಕಾಂಗ್ರೆಸ ಸೇರ್ಪಡೆ ಮಾಡ್ಕೊಂಡಿದ್ದೇವೆ ಎಂದರು.
ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಅಶೋಕ ಪೂಜಾರಿ ಯಾವತ್ತಿದ್ದರೂ ಹೋರಾಟದಿಂದ ಬಂದವರು. ಮೂರು ಬಾರಿ ಚುನಾವಣೆಯಲ್ಲಿ ಸೋತರೂ ಜನರ ಪರ ಕೆಲಸ ಮಾಡಿದ್ದಾರೆ. ನಮ್ಮ ಗುರಿ 2023 ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಸ್ಥಾನ ಗೆದ್ದು ಬೆಂಗಳೂರಲ್ಲಿ ಕಾಂಗ್ರೆಸ್ ಬಾವುಟ ಹಾರಿಸಲು ಸಜ್ಜಾಗಬೇಕಿದೆ. ಅಶೋಕ್ ಪೂಜಾರಿ ಭವಿಷ್ಯ ನಮ್ಮ ಪಕ್ಷದಲ್ಲಿ ಉಜ್ವಲ ಆಗುತ್ತೆ ಎಂಬ ಭರವಸೆ ಇದೆ ಎಂದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ