ಬೆಳಗಾವಿ: (Belagavi) ಸಹೋದರರು ಟಿಕೆಟ್ ವಿಚಾರದ ಅನಿಸಿಕೆಯನ್ನು ಹೇಳಿದ್ದರು. ನಮ್ಮ ಬೆಂಬಲಿಗರು, ಕಾರ್ಯಕರ್ತರು ಹೇಳಿದ್ದಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ (Independent Candidate) ಸ್ಪರ್ಧೆ ಮಾಡಿದ್ದೇನೆ. ಈ ಚುನಾವಣೆಯಲ್ಲಿ ನಮಗೆ ಕಾಂಪಿಟೇಟರ್ ಯಾರು ಇಲ್ಲ. ಅವರ ಬಗ್ಗೆ ವಿಚಾರ ಮಾಡುವುದಿಲ್ಲ. ಸಹೋದರರು ಪಕ್ಷದ ಪರವಾಗಿ ಕೆಲಸ ಮಾಡುತ್ತಾರೆ. ಸತೀಶ್ ಜಾರಕಿಹೊಳಿ (Satish Jarkiholi) ಏನೇ ಹೇಳಿದರೂ ಅವರು ನಮ್ಮ ಅಣ್ಣ ಎಂದು ಬೆಳಗಾವಿಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ (Lakhan Jarkiholi) ಹೇಳಿದರು.
ನಾಮಪತ್ರ ಸಲ್ಲಿಗೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಲಖನ್ ಜಾರಕಿಹೊಳಿ, ಪಂಚಾಯಿತಿ ಅಭಿವೃದ್ಧಿಗೋಸ್ಕರ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ. ಇವತ್ತು ಶಕ್ತಿ ಪ್ರದರ್ಶನ ಅಲ್ಲಾ. ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದಾರೆ ಎಂದರು. ಹಾಗೆಯೇ ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಬಳಿಕ ನಾಮಪತ್ರ ವಾಪಸ್ ಪಡೆಯುತ್ತಾರೆ ಎಂಬ ಸತೀಶ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ನಾನು ನಾಮಪತ್ರ ವಾಪಸ್ ತೆಗೆದುಕೊಳ್ಳುವ ಚಾನ್ಸೆ ಇಲ್ಲ. ಸತೀಶ್ ಜಾರಕಿಹೊಳಿ ಸುತ್ತಮುತ್ತ ಇದ್ದವರು ಊಹಾಪೋಹಗಳನ್ನು ಎಬ್ಬಿಸುತ್ತಿದ್ದಾರೆ ಎಂದರು.
ಹಿಂದೆ ಸರಿಯಬಹುದು ಎಂದು ಹೇಳಿದ್ದ ಸತೀಶ್ ಜಾರಕಿಹೊಳಿ
ಬಿಜೆಪಿ ವರಿಷ್ಠರಿಂದ ಸರಿಯಾದ ಸ್ಥಾನಮಾನ ಸಿಕ್ಕರೆ ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ಹಿಂದೆ ಸರಿಯಬಹುದು. ಲಖನ್ ಸ್ಪರ್ಧೆ ಅದು ಅವರ ವೈಯಕ್ತಿಕ ವಿಚಾರ. ಆದರೆ, ನಾವು ಪಕ್ಷದ ಆಧಾರದ ಮೇಲೆ ಚುನಾವಣೆ ಎದುರಿಸುತ್ತೇವೆ. ನಮ್ಮ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡುತ್ತೇವೆ. ಅದನ್ನೇ ಪ್ರಚಾರದಲ್ಲೂ ಹೇಳುತ್ತಿದ್ದೇನೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಗೆಲ್ಲಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹೇಳಿದ್ದಾರೆ.
ಇದನ್ನು ಓದಿ: Samvidhan Gaurav: ನ.26 ರಿಂದ ಡಿ.6 ರವರೆಗೆ ಬಿಜೆಪಿಯಿಂದ ಸಂವಿಧಾನ ಗೌರವಿಸಿ ಅಭಿಯಾನ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಸಹೋದರರಾದ ರಮೇಶ್ ಜಾರಕಿಹೊಳಿ ಹಾಗೂ ಲಖನ್ ಜಾರಕಿಹೊಳಿ ಮತದಾರರಿಗೆ ಹಣ ನೀಡಿ ನನ್ನನ್ನು ಸೋಲಿಸಿದರು. ಆ ನೋವು ಇಂದಿಗೂ ನನ್ನಲ್ಲಿ ಇದೆ. ಈಗ ಬಿಜೆಪಿಯಲ್ಲಿರುವ ಲಖನ್ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. ಆದರೆ, ಅವರು ಕಣದಲ್ಲಿ ಉಳಿಯುತ್ತಾರೆ ಎಂಬುದು ಅನುಮಾನ. ಅವರು ಚುನಾವಣಾ ಕಣದಿಂದ ಹಿಂದಕ್ಕೆ ಸರಿಯಲೂಬಹುದು. ಅವರು ಬಿಜೆಪಿ ಪಕ್ಷದಲ್ಲಿ ಇರುವುದರಿಂದ ಚುನಾವಣೆಯಲ್ಲಿ ಸ್ಪರ್ಧಿಸಿ, ಅಥವಾ ಸ್ಪರ್ಧಿಸಬೇಡಿ ಎಂದು ನಾನು ಹೇಳಲಾಗುವುದಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ