ನಾನು ಮಂತ್ರಿ ಸ್ಥಾನ ಕೇಳಿಲ್ಲ, ರಮೇಶ್ ಜಾರಕಿಹೊಳಿ ಮತ್ತೆ ಸಚಿವರಾಗಲು ಪ್ರಯತ್ನಿಸುತ್ತೇವೆ; ಬಾಲಚಂದ್ರ ಜಾರಕಿಹೊಳಿ

ಸಿಡಿ ಪ್ರಕರಣ ಸಂಬಂಧ ರಮೇಶ್ ಜಾರಕಿಹೊಳಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಏತನ್ಮಧ್ಯೆ ರಮೇಶ್ ಜಾರಕಿಹೊಳಿ ಮತ್ತೆ ಸಚಿವರಾಗಲು ಸಕಲ ಪ್ರಯತ್ನ ನಡೆಸುತ್ತಿದ್ದಾರೆ.

ಬಾಲಚಂದ್ರ ಜಾರಕಿಹೊಳಿ.

ಬಾಲಚಂದ್ರ ಜಾರಕಿಹೊಳಿ.

  • Share this:
ಬೆಳಗಾವಿ (ಜುಲೈ 1): ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಮತ್ತೆ ಸ್ಥಾನ ಪಡೆಯಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇನ್ನಿಲ್ಲದ ಕಸರತ್ತು ಆರಂಭಿಸಿದ್ದಾರೆ.  ಮುಂಬೈ, ಅಥಣಿ, ಬೆಂಗಳೂರು ಬಳಿಕ ದೆಹಲಿಯಲ್ಲಿ ಹಲವು ನಾಯಕರನ್ನು ಭೇಟಿಯಾಗಿ ಈ ವಿಷಯವಾಗಿ ಚರ್ಚೆ ನಡೆಸಿದ್ದಾರೆ. ಈ ನಡುವೆ ರಮೇಶ್ ಜಾರಕಿಹೊಳಿ ಬದಲಾಗಿ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ವದಂತಿ ಹಬ್ಬಿಸಲಾಗಿತ್ತು. ಆದರೆ ಇದಕ್ಕೆ ತೆರೆ ಎಳೆದಿರುವ ಕೆ ಎಂ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನಾನು ಮಂತ್ರಿ ಸ್ಥಾನ ಕೇಳಿಲ್ಲ. ನೀಡುವ ಬಗ್ಗೆ ಸಹ ಯಾರು ನನ್ನ ಜತೆಗೆ ಚರ್ಚೆ ಮಾಡಿಲ್ಲ. ನಮ್ಮೆಲ್ಲರಿಗೂ ರಮೇಶ್ ಜಾರಕಿಹೊಳಿ ಮತ್ತೊಮ್ಮೆ ರಾಜ್ಯದಲ್ಲಿ ಸಚಿವರಾಗಲಿ ಎಂಬ ಆಸೆ ಇದೆ. ಈ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ.

ಅರಬಾವಿಯಲ್ಲಿ ಇಂದು ಕೆ ಎಂ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಧ್ಯಮಗಳ ಜತೆಗೆ ಮಾತನಾಡಿದ್ರು. ರಮೇಶ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ, ರಾಜಕೀಯದಲ್ಲಿ ಅಸಮಾಧಾನ, ಬೇಜಾರು ಇರೋದು ಸಹಜ. ಇದೇನು ದೊಡ್ಡ ವಿಷಯವೇನಲ್ಲ. ನಾನು ಮೊದಲು ರಮೇಶ್ ಜಾರಕಿಹೊಳಿ ಜತೆಗೆ ಚರ್ಚೆ ಮಾಡುತ್ತೇನೆ. ನಂತರ ಮಾಧ್ಯಮಗಳ ಮುಂದೆ ಎಲ್ಲವನ್ನು ಹೇಳುತ್ತೇವೆ. ರಮೇಶ ಜಾರಕಿಹೊಳಿ ಜತೆಗೆ ಮೊದಲು ಚರ್ಚೆ ಮಾಡಿ ನಂತರ ಸುದ್ದಿಗೋಷ್ಠಿ ನಡೆಸಿ ಎಲ್ಲಾ ಗೊಂದಲಕ್ಕೆ ತೆರೆ ಎಳೆಯುತ್ತೇವೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಸಿಡಿ ಪ್ರಕರಣ ಸಂಬಂಧ ರಮೇಶ್ ಜಾರಕಿಹೊಳಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಏತನ್ಮಧ್ಯೆ ರಮೇಶ್ ಜಾರಕಿಹೊಳಿ ಮತ್ತೆ ಸಚಿವರಾಗಲು ಸಕಲ ಪ್ರಯತ್ನ ನಡೆಸುತ್ತಿದ್ದಾರೆ.

ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಇಂದು ರಾಷ್ಟ್ರೀಯ ವೈದ್ಯರ ದಿನ ಹಿನ್ನೆಲೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಶ್ಲಾಘನೀಯ ಕೆಲಸ ಮಾಡಿದ ವೈದ್ಯರಿಗೆ ಸನ್ಮಾನ ಸಮಾರಂಭ ಆಯೋಜನೆ ಮಾಡಲಾಗಿತ್ತು. ಅರಬಾವಿಯ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗೋಕಾಕ್ ಹಾಗೂ ಅರಬಾವಿ ತಾಲೂಕಿನ ಪಿ ಎಚ್ ಸಿ, ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂಧಿಗೆ ಸನ್ಮಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. 580 ಜನ ಸಿಬ್ಬಂಧಿ ಹೋಳಿಗೆ ಊಟ ಮಾಡಿಸಿ ಎಲ್ಲರಿಗೂ ಸನ್ಮಾನ ಮಾಡಿ ಅಭಿನಂದನೆ ಸಲ್ಲಿಸಲಾಯಿತು.

ಇದನ್ನು ಓದಿ: ಲಾಕ್​ಡೌನ್ 2.0 ಬಳಿಕ ಕೊರೋನಾ ಮುಂಜಾಗ್ರತಾ ಕ್ರಮಗಳೊಂದಿಗೆ ಬನ್ನೇರುಘಟ್ಟ ಪಾರ್ಕ್ ಪ್ರವಾಸಿಗರಿಗೆ ಮುಕ್ತ!

ಶಾಸಕರ ಅನುದಾನ ಎಲ್ಲಾ ಹಣವನ್ನು ಆರೋಗ್ಯ ಇಲಾಖೆಗೆ ಬಳಸಲು ನಿರ್ಧರಿಸಲಾಗಿದ್ದು. 9 ಆ್ಯಂಬುಲೆನ್ಸ್ ಖರೀದಿ ಮಾಡಲಾಗಿದೆ. ಮೂಡಲಗಿ , ಮಲ್ಲಾಪುರ ಪಿ ಜಿ ಗ್ರಾಮದಲ್ಲಿ ಆಕ್ಸಿಜನ್ ಸೆಂಟರ್ ಓಪನ್ ಮಾಡಲಾಗಿದೆ. ಆ್ಯಂಬುಲೆನ್ಸ್ ಬಳಸಲು ಕಾಲ್ ಸೆಂಟರ್ ಸಹ ತೆರೆಯಲಾಗುವುದ, ಇದಕ್ಕಾಗಿ ಮೂರು ಜನ ಸಿಬ್ಬಂದಿಯನ್ನು ಸಹ ನೇಮಕ ಮಾಡಿಕೊಳ್ಳಲಾಗುವುದು. ಕೋವಿಡ್ ಮೂರನೆ ಅಲೆ ಬರದೇ ಇರಲೇ ಬಾರದು ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ. ಕೋವಿಡ್ ಟೆಸ್ಟಿಂಗ್ ಸೆಂಟರ್ ಗೋಕಾಕ್ ನಲ್ಲಿ ಆರಂಭಿಸುವ ಬಗ್ಗೆ ಆರೋಗ್ಯ ಸಚಿವರ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
Published by:HR Ramesh
First published: