Karnataka Weather Today:: ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯ ನಿರೀಕ್ಷೆ- ಆರೆಂಜ್ ಅಲರ್ಟ್ ಘೋಷಣೆ ..

ಕರಾವಳಿ ಮತ್ತು ಮಲೆನಾಡು ಮಾತ್ರವಲ್ಲದೇ, ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಹ ಭಾರೀ ಮಳೆಯ ನಿರೀಕ್ಷೆ ಇದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Rains Today( ಸೆ.15):ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ  ಇನ್ನು ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದ್ದು(Heavy Rainfall), ಆರೆಂಜ್ ಅಲರ್ಟ್(Orange Alert) ಘೋಷಣೆ ಮಾಡಲಾಗಿದೆ.  ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್(Yellow Alert) ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತ  ಹೆಚ್ಚಾಗಲಿದ್ದು, ಇನ್ನೆರಡು ದಿನಗಳಲ್ಲಿ ಉತ್ತರ ಹಾಗೂ ನೈಋತ್ಯ ಭಾಗದೆಡೆಗೆ ಮಾರುತಗಳು ಚಲಿಸಲಿದ್ದು, ಇನ್ನು ಮೂರರಿಂದ ನಾಲ್ಕು ದಿನಗಳವರೆಗೂ ರಾಜ್ಯದ ಹಲವೆಡೆ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹೊನ್ನಾವರ, ಭಾಗಮಂಡಲ, ಸಂತಹಳ್ಳಿ, ಆಗುಂಬೆ, ಸಿದ್ದಾಪುರ, ಅಗ್ರಹಾರ ಕೋಣಂದೂರು, ಕದ್ರ, ತೀರ್ಥಹಳ್ಳಿ, ತಾಳಗುಪ್ಪ, ಮಾಣಿ, ಧರ್ಮಸ್ಥಳ, ಅಂಕೋಲ, ಗೋಕರ್ಣ, ಸೋಮವಾರಪೇಟೆ, ಪೊನ್ನಂಪೇಟೆ, ಸಕಲೇಶಪುರ, ಮಂಡಗದ್ದೆ, ವಿರಾಜಪೇಟೆ, ಮಂಚಿಕೆರೆ, ಯಲ್ಲಾಪುರ, ಕಳಸ, ನಿಪ್ಪಾಣಿ, ಬೈಲಹೊಂಗಲ, ಲಕ್ಷ್ಮೇಶ್ವರ, ಸಕೇಶ್ವರ, ಆನವಟ್ಟಿ, ಶಿಕಾರಿಪುರ, ಬಾಳೆಹೊನ್ನೂರು, ಪುತ್ತೂರು, ಮತ್ತಿಕೊಪ್ಪದಲ್ಲಿ  ಭಾರೀ ಮಳೆಯಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ- ಇಲ್ಲಿದೆ ಇಂದಿನ ಹವಾಮಾನ ವರದಿ..

ಬೆಂಗಳೂರಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿ ಮತ್ತು ಮಲೆನಾಡು ಮಾತ್ರವಲ್ಲದೇ, ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಹ ಭಾರೀ ಮಳೆಯ ನಿರೀಕ್ಷೆ ಇದೆ.

ಕಳೆದ 24 ಗಂಟೆಗಳಲ್ಲಿ, ಗುಜರಾತ್ ಮತ್ತು ಒಡಿಶಾದಲ್ಲಿ ಮುಂಗಾರು ಚುರುಕಾಗಿದ್ದು, ಛತ್ತೀಸ್‌ಗಢ್, ಮಧ್ಯಪ್ರದೇಶದ ಕೆಲವು ಭಾಗಗಳು, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ.

ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಪಂಜಾಬ್, ಹರಿಯಾಣದ ಉಳಿದ ಭಾಗಗಳು, ಬಿಹಾರ, ಪಶ್ಚಿಮ ಬಂಗಾಳ, ಛತ್ತೀಸ್‌ಗಢದ ಉಳಿದ ಭಾಗಗಳು, ರಾಜಸ್ಥಾನದಲ್ಲಿ ಸಾಧಾರಣ ಮಳೆಯಾಗಿದೆ.

ಕರ್ನಾಟಕ, ಕೇರಳ, ಅಂಡಮಾನ್ ನಿಕೋಬಾರ್ ದ್ವೀಪಗಳು ಮತ್ತು ತೆಲಂಗಾಣದ ಕೆಲವು ಭಾಗಗಳಲ್ಲಿ ಕೂಡ ಭಾರೀ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ, ಒಡಿಶಾ, ಛತ್ತೀಸ್‌ಗಢ್, ಮಧ್ಯಪ್ರದೇಶ, ಗುಜರಾತ್, ಆಗ್ನೇಯ ರಾಜಸ್ಥಾನ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಬಹುದು. ಕರಾವಳಿ ಕರ್ನಾಟಕ, ಕೇರಳ  ಪಶ್ಚಿಮ ಬಂಗಾಳ, ಜಾರ್ಖಂಡ್, ಕೊಂಕಣ ಮತ್ತು ಗೋವಾ, ವಿದರ್ಭದ ಕೆಲವು ಭಾಗಗಳು, ತೆಲಂಗಾಣ, , ಉತ್ತರಾಖಂಡದ ಕೆಲವು ಭಾಗಗಳು, ಸಿಕ್ಕಿಂ ಮತ್ತು ಕರಾವಳಿ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಯಾದಗಿರಿ ಜಿಲ್ಲೆಯಲ್ಲಿ ಭೀಮಾ ನದಿಯಲ್ಲಿ ಪ್ರವಾಹದ ಭೀತಿ ಎದುರಾಗಿದ್ದು.  ನದಿ ತೀರಕ್ಕೆ ಜನರು ತೆರಳಬಾರದು, ಮೀನುಗಾರಿಕೆ ಮಾಡಬಾರದು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ಇದನ್ನೂ ಓದಿ: ಮೈದುಂಬಿ ಹರಿಯುತ್ತಿವೆ ನದಿಗಳು, ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಜುಲೈ ತಿಂಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಧಾರಾಕಾರ ಮಳೆಗೆ ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸುಮಾರು 31,360 ಮಂದಿಯನ್ನು ತಗ್ಗು ಪ್ರದೇಶಗಳಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸುಮಾರು 22,417 ಜನರು 237 ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಸುಮಾರು 283 ಗ್ರಾಮಗಳು, 45 ತಾಲೂಕುಗಳು ಮಳೆಯ ಹೊಡೆತಕ್ಕೆ ಸಿಕ್ಕಿದ್ದು, 36,498 ಜನರು ಅಕ್ಷರಶಃ ನಲುಗಿದ್ದಾರೆ.
Published by:Sandhya M
First published: