Council Electionನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಸ್ಪರ್ಧೆ; ರಂಗೇರಲಿದೆ ಬೆಳಗಾವಿ ರಾಜಕೀಯ

ಪಿ ಎಲ್ ಡಿ ಬ್ಯಾಂಕ್ ಬಳಿಕ ಬೆಳಗಾವಿ ಪರಿಷತ್ ಎರಡು ಸ್ಥಾನಗಳ ಚುನಾವಣೆ ಜಿದ್ದಾಜಿದ್ದಿನ ಹೋರಾಟಕ್ಕೆ ವೇದಿಕೆ ಆಗಲಿದೆ. ಜಾರಕಿಹೊಳಿ ಹಾಗೂ ಹೆಬ್ಬಾಳ್ಕರ್ ನಡುವೆ ಹೋರಾಟ ನಡೆಯಲಿದೆ.

ಜಾರಕಿಹೊಳಿ ಸೋದರರು

ಜಾರಕಿಹೊಳಿ ಸೋದರರು

  • Share this:
ಬೆಳಗಾವಿ: ಡಿಸೆಂಬರ್ 10ರಂದು  ಬೆಳಗಾವಿ ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್​ನ ((Karnataka Legislative Council) ಎರಡು ಸ್ಥಾನಗಳಿಗೆ ಚುನಾವಣೆ ( Council Election) ನಡೆಯಲಿದೆ. ಇದು  ಜಿಲ್ಲೆಯಲ್ಲಿ ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಲಿದೆ. ಕಾಂಗ್ರೆಸ್ (Congress), ಬಿಜೆಪಿ(BJP)  ಇನ್ನೂ ತಮ್ಮ ಅಧಿಕೃತ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಆದರೆ ಕಾಂಗ್ರೆಸ್ ನಿಂದ ಚನ್ನರಾಜ್ ಹಟ್ಟಿಹೊಳಿ ಹಾಗೂ ಬಿಜೆಪಿಯಿಂದ ಮಹಾಂತೇಶ ಕವಟಗಿಮಠ ಕಣಕ್ಕೆ ಇಳಿಯೋದು ಬಹುತೇಕ ಖಚಿತವಾಗಿದೆ. ಇಬ್ಬರಿಗೆ ಪಕ್ಷೇತರ ಅಭ್ಯರ್ಥಿಯಾಗಿ(independent candidate ) ಲಖನ್ ಜಾರಕಿಹೊಳಿ ( Lakhan jarkiholi ) ಕಣಕ್ಕೆ ಇಳಿಯುತ್ತಿರೋದು ದೊಡ್ಡ ತಲೆನೋವು ಆಗಿದೆ. ಫಲಿತಾಂಶದ ಮೇಲೆ ಪರಿಣಾಮ ಬೀರಲಿದ್ದು, ಇಬ್ಬರು ಆಕಾಂಕ್ಷಿಗಳನ್ನು ಗೊಂದಲ ಸೃಷ್ಟಿಯಾಗಿದೆ. ಮೂರು ಜನ ಜಾರಕಿಹೊಳಿ ಸಹೋದರರು ಈಗಾಗಲೇ ವಿಧಾನಸಭೆ ಸದಸ್ಯರಾಗಿ ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಈಗ ಮತ್ತೊಬ್ಬ ಸಹೋದರ ಪರಿಷತ್ ಮೂಲಕ ರಾಜಕೀಯ ಪ್ರವೇಶಕ್ಕೆ ತಾಲೀಮು ‌ಆರಂಭಿಸಿದ್ದಾರೆ. ಈ ಚುನಾವಣೆ ‌ಜಾರಕಿಹೊಳಿ ಸಹೋದರರು ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಮತ್ತೊಂದು ಹೋರಾಟಕ್ಕೆ ಸಾಕ್ಷಿ‌ ಆಗಲಿದೆ.

ಲಖನ್​ ಸ್ಪರ್ಧೆ ಖಚಿತ 

ಪಿ ಎಲ್ ಡಿ ಬ್ಯಾಂಕ್ ಬಳಿಕ ಬೆಳಗಾವಿ ಪರಿಷತ್ ಎರಡು ಸ್ಥಾನಗಳ ಚುನಾವಣೆ ಜಿದ್ದಾಜಿದ್ದಿನ ಹೋರಾಟಕ್ಕೆ ವೇದಿಕೆ ಆಗಲಿದೆ. ಜಾರಕಿಹೊಳಿ ಹಾಗೂ ಹೆಬ್ಬಾಳ್ಕರ್ ನಡುವೆ ಹೋರಾಟ ನಡೆಯಲಿದೆ. ಕುಟುಂಬ ರಾಜಕೀಯ ವಿಸ್ತರಣೆಗೆ ಪರಿಷತ್ ಚುನಾವಣೆ ವೇದಿಕೆಯಾಗಿದೆ. ಮೂರು ಜನ ಜಾರಕಿಹೊಳಿ ಸಹೋದರರು ಶಾಸಕರಾಗಿ ಕೆಲಸ ಮಾಡುತ್ತಿದ್ದು, ನಾಲ್ಕನೇ ಸಹೋದರ ಪರಿಷತ್ ಕಣಕ್ಕೆ ಇಳಿಸಲು ಭರ್ಜರಿ ತಯಾರಿ ನಡೆದಿದೆ.

ರಾಜಕೀಯ ರಣತಂತ್ರ ಹೆಣೆದ ಸಹೋದರರು

ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯೋದು ಫಿಕ್ಸ್ ಆಗಿದ್ದು,  ಡಿಸೆಂಬರ್ 23ರಂದು ಸಂಕಷ್ಟ ಚತುರ್ಥಿಯಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈಗಾಗಲೇ ಒಂದು ಸುತ್ತು ಪ್ರಚಾರ ನಡೆಸಿರೋ ಲಖನ ಜಾರಕಿಹೊಳಿ ಬೆನ್ನಿಗೆ ರಮೇಶ, ಬಾಲಚಂದ್ರ ಜಾರಕಿಹೊಳಿ ನಿಂತಿದ್ದಾರೆ. ಲಖನ್ ಗೆಲ್ಲಿಸಲು ಎಲ್ಲಾ ರೀತಿಯ ರಾಜಕೀಯ ರಣತಂತ್ರ ಹೆಣೆದ ಸಹೋದರರು. ಗೋಕಾಕ್, ಮೂಡಲಗಿ, ಯಮಕನಮರಡಿ, ಸವದತ್ತಿ, ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಲ್ಲಿ ಹೆಚ್ಚಿನ ಮತ ಪಡೆಯಲು ಪ್ಲ್ಯಾನ್ ಮಾಡಿದ್ದಾರೆ.

ಕಾಂಗ್ರೆಸ್​​-ಬಿಜೆಪಿ ಅಭ್ಯರ್ಥಿಗಳು ಫೈನಲ್​​? 

ಕಾಂಗ್ರೆಸ್ ನಿಂದ ಚನ್ನರಾಜ್ ಹಟ್ಟಿಹೊಳಿ ಬಹುತೇಕ ಫಿಕ್ಸ್ ಆಗಿದೆ. ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಹೆಬ್ಬಾಳ್ಕರ್ ಪ್ರಭಾವ ಬಳಿಸಿ ಸಹೋದರನಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿ ಆಗಿದ್ದಾರೆ. ಲೋಕಸಭಾ ಉಪಚುವಾವಣೆ, ಡಿಸಿಸಿ ಬ್ಯಾಂಕ್ ಸಂದರ್ಭದಲ್ಲಿ ಚನ್ನರಾಜ್ ಹೆಸರು ಪ್ರಸ್ತಾಪ ಆಗಿತ್ತು. ಕೊನೆಗು ಪರಿಷತ್ ಚುನಾವಣೆಯಲ್ಲಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿಯಿಂದ ಮಹಾಂತೇಶ ಕವಟಗಿಮಠಗೆ ಟಿಕೆಟ್ ಬಹುತೇಕ ಖಚಿತವಾಗಿದ್ದು, ಇನ್ನೂ ಅಧಿಕೃತ ಘೋಷಣೆ ಆಗಿಲ್ಲ. ಕಳೆದ ಎರಡು ಸಲ ವಿಧಾನ ಪರಿಷತ್ ಗೆ ಆಯ್ಕೆ ಆಗಿರೋ ಕವಟಗಿಮಠಗೆ ಅನುಭವ ಇದೆ. ಜಾರಕಿಹೊಳಿ, ಹೆಬ್ಬಾಳ್ಕರ್ ಫೈಟ್ ನಡುವೆ ಹೋರಾಟ ನಡೆಸಲು ಕವಟಗಿಮಠ ಸಿದ್ದತೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ.

ಇದನ್ನೂ ಓದಿ: ನನಗೆ ಸಚಿವ ಸ್ಥಾನ ಸಿಗಲು ಬಿಡುತ್ತಿಲ್ಲ, ಇನ್ನು Chief Ministe ಮಾಡೋದು ದೂರದ ಮಾತು: Yatnal ಬೇಸರ

ಕರ್ನಾಟಕ ವಿಧಾನಮಂಡಲದ ಮೇಲ್ಮನೆ ವಿಧಾನ ಪರಿಷತ್​ಗೆ ಚುನಾವಣೆ ಘೋಷಣೆಯಾಗಿದೆ. 2022ರ ಜನವರಿ 5ರಂದು 25 ಪರಿಷತ್​ ಸದಸ್ಯರ ಅಧಿಕಾರ ಅವಧಿ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ತೆರವಾಗಲಿರುವ 25 ವಿಧಾನ ಪರಿಷತ್ ಸ್ಥಾನಗಳಿಗೆ ಡಿಸೆಂಬರ್ ‌10ರಂದು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಡಿ.10ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 14ಕ್ಕೆ ಮತ ಎಣಿಕೆ (vote counting) ನಡೆದು, ಫಲಿತಾಂಶ ಹೊರ ಬೀಳಲಿದೆ. ನವೆಂಬರ್ 16ರಂದು ಅಧಿಸೂಚನೆ ಹೊರಡಿಸಲಾಗುವುದು. ನವೆಂಬರ್ 23 ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿರುತ್ತದೆ.
Published by:Kavya V
First published: