ಈ ಚುನಾವಣೆ ಹೆಬ್ಬಾಳ್ಕರ್ Vs ಜಾರಕಿಹೊಳಿ ರೀತಿ ಆಗುತ್ತಾ? ಪ್ರಶ್ನೆಗೆ ಥೂ.. ಥೂ... ಎಂದ Ramesh Jarkiholi

ಬೆಳಗಾವಿ ಪರಿಷತ್ ಚುನಾವಣೆ ಮತ್ತೊಂದು ಸುತ್ತಿನ ರಾಜಕೀಯ ಕಾದಾಟಕ್ಕೆ ಸಾಕ್ಷಿಯಾಗುವ ಎಲ್ಲ ಸಾಧ್ಯತೆಗಳು ಕಾಣುತ್ತಿವೆ. ಇಂದು ಚುನಾವಣೆ ಹೆಬ್ಬಾಳ್ಕರ್ ವರ್ಸಸ್ ಜಾರಕಿಹೊಳಿ ಎಂಬ ಪ್ರಶ್ನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ (Former Minister Ramesh Jarkiholi) ಉತ್ತರ ನೀಡಿದ್ದಾರೆ.

ರಮೇಶ್ ಜಾರಕಿಹೊಳಿ

ರಮೇಶ್ ಜಾರಕಿಹೊಳಿ

  • Share this:
ವಿಧಾನ ಪರಿಷತ್ ಚುನಾವಣೆಗೆ (MLC Election) ನಾಮಪತ್ರ (Nomination) ಸಲ್ಲಿಕೆ ಮಾಡಲು ಇವತ್ತು ಕೊನೆಯ ದಿನ. ಹೀಗಾಗಿ ನಾಮಪತ್ರ ಸಲ್ಲಿಕೆಯ ದಿನವಾದ ಇಂದು ಅಭ್ಯರ್ಥಿಗಳು (Candidates) ಒಂದು ರೀತಿ ತಮ್ಮ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ. ಆದ್ರೆ ಈ ಬಾರಿ ರಾಜ್ಯದ ಜನರ ಚಿತ್ತ ಮತ್ತೆ ಬೆಳಗಾವಿಯತ್ತ (Belagavi Politis) ಕೇಂದ್ರಿಕೃತವಾಗಿದೆ. ಬಿಜೆಪಿ ಟಿಕೆಟ್ (BJP) ವಂಚಿತ ಲಖನ್ ಜಾರಕಿಹೊಳಿ (Lakhan Jarkiholi) ಪಕ್ಷೇತರ ಅಭ್ಯರ್ಥಿಯಾಗಿದ್ದಾರೆ. ಇತ್ತ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (MLA Laxmi Hebbalkar) ಸೋದರ ಚನ್ನರಾಜ್ ಹಟ್ಟಿಹೊಳಿ (Channaraj Hattiholi) ಅವರಿಗೆ ಕಾಂಗ್ರೆಸ್ (Congress) ಟಿಕೆಟ್ ಕೊಡಿಸಲು ಯಶಸ್ವಿಯಾಗಿದ್ದಾರೆ.  ಹೀಗಾಗಿ ಬೆಳಗಾವಿ ಪರಿಷತ್ ಚುನಾವಣೆ ಮತ್ತೊಂದು ಸುತ್ತಿನ ರಾಜಕೀಯ ಕಾದಾಟಕ್ಕೆ ಸಾಕ್ಷಿಯಾಗುವ ಎಲ್ಲ ಸಾಧ್ಯತೆಗಳು ಕಾಣುತ್ತಿವೆ. ಇಂದು ಚುನಾವಣೆ ಹೆಬ್ಬಾಳ್ಕರ್ ವರ್ಸಸ್ ಜಾರಕಿಹೊಳಿ ಎಂಬ ಪ್ರಶ್ನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ (Former Minister Ramesh Jarkiholi) ಉತ್ತರ ನೀಡಿದ್ದಾರೆ.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಪ್ರಶ್ನೆ ಕೇಳುತ್ತಿದ್ದಂತೆ ಮಧ್ಯ ಪ್ರವೇಶಿದ ರಮೇಶ್ ಜಾರಕಿಹೊಳಿ ಥೂ ಥೂ ಎಂದರು. ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಮೊದಲು ಸುತ್ತಿನಲ್ಲಿ ಗೆಲ್ಲಿಸಲು ಪ್ರಯತ್ನ ಮಾಡಲಾಗುತ್ತದೆ. ಬಿಜೆಪಿಯಲ್ಲಿ ನಾನು ಸಾಮಾನ್ಯ ಕಾರ್ಯಕರ್ತ ಎಂದು ಬಹಿರಂಗವಾಗಿ ಹೇಳಿದ್ದೇನೆ.

ಮೊದಲ ಮತ ಬಿಜೆಪಿ ಮಹಾಂತೇಶ ಕವಟಗಿಮಠ ಗೆಲ್ಲಿಸಲು. ಕಾಂಗ್ರೆಸ್ ಸೋಲಿಸಲು ಎರಡನೇ ಮತ. ನವೆಂಬರ್ 21ರಂದು ದೆಹಲಿಗೆ ಹೋಗಿ ವರಿಷ್ಠರ ಭೇಟಿ ಮಾಡುತ್ತೇನೆ. ಎರಡನೇ ಮತ ಕಾಂಗ್ರೆಸ್ ಸೋಲಿಸಲು ವರಿಷ್ಠರ ಒಪ್ಪಿಗೆ ಮೇರೆಗೆ ಅಭ್ಯರ್ಥಿಗೆ ಬೆಂಬಲ ನೀಡಲಾಗುವುದ ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.

ಇದನ್ನೂ ಓದಿ:  ಇಂದ್ರ, ಚಂದ್ರ ಅಂತ ಹೇಳಿ ಮತದಾರರನ್ನು ನಂಬಿಸಿ ಮೋಸ ಮಾಡಿದೆ ಅಂತ ಅರಿವಾಗಿದೆ: MLA Goolihatti Shekar

ನಾನು ಬಂಡಾಯ ಅಭ್ಯರ್ಥಿ ಅಲ್ಲ

ಕಾರ್ಯಕರ್ತರು ಹಾಗೂ ಮತದಾರರ ಬೆಂಬಲ ನಮಗಿಗೆ ಅದೆ ಭರವಸೆ ಮೇಲೆ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೇನೆ. ನನ್ನ ಸ್ಪರ್ಧೆಯಿಂದ ಬೆಜೆಪಿಗೆ ಲಾಭವಾಗಲಿದೆ. ನನ್ನಿಂದ ನಷ್ಟ ಆಗುತ್ತದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ನಾನು ಯಾರ ಬಂಡಾಯ ಅಭ್ಯರ್ಥಿಯ ಅಲ್ಲ ಎಂದು ಲಖನ್ ಜಾರಕಿಹೊಳಿ ಕಾಂಗ್ರೆಸ್ ಆರೋಪಗಳಿಗೆ ಉತ್ತರ ನೀಡಿದರು.

ನಾನು ಯಾವತ್ತು ಬಿಜೆಪಿ ಪಕ್ಷದಿಂದ ಟಿಕೆಟ್ ಕೇಳಿಲ್ಲಾ, ಗೊಂದಲ ನಿರ್ಮಾಣ ಆಗಿದೆ ಅಷ್ಟೇ. ಮೊದಲಿಂದಲೂ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೆ .  ನಮಗೆ ಮತ ಹಾಕಿ ಗೆಲ್ಲುಸಿದ್ರೆ ಅಭಿವೃದ್ಧಿ ಮಾಡುವ ಭರವಸೆ ನೀಡಿದ್ದೇವೆ ಎಂದರು.ನಾಮಪತ್ರ ಸಲ್ಲಿಸಲು ಬಂದ ಲಖನ್ ಜಾರಕಿಹೊಳಿಗೆ ಸೋದರ ರಮೇಶ್ ಪುತ್ರ ಅಮರನಾಥ್, ಅಳಿಯ ಅಂಬಿರಾವ್ ಪಾಟೀಲ್ ಸಾಥ್ ನೀಡಿದರು. ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ನಾಮಪತ್ರ ಸಲ್ಲಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್ ಸಾಥ್ ನೀಡಿದರು.

ಇದನ್ನೂ ಓದಿ: HDKಗೆ ಶಂಖನಾದ ಭಾರತೀಯ ಸಂಸ್ಕೃತಿಯ ಪ್ರತೀಕ ಅನ್ನೋದು ಗೊತ್ತಿಲ್ಲ: ಸಚಿವ R Ashok

ಸಿಂಗಲ್ ಅಭ್ಯರ್ಥಿ, ಸಿಂಗಲ್ ಮತ

ಈಗಾಗಲೇ ಕ್ಷೇತ್ರದಲ್ಲಿ ಅರ್ಧದಷ್ಟು ಪ್ರಚಾರ ಕಾರ್ಯ ಮಾಡಿದ್ದೇವೆ. ಸಿಂಗಲ್ ಅಭ್ಯರ್ಥಿ, ಸಿಂಗಲ್ ಮತ ಎಂದು ಕಾಂಗ್ರೆಸ್ ಪ್ರಚಾರ ಮಾಡುತ್ತಿದೆ.  ಚುನಾವಣೆಯನ್ನು ಪಕ್ಷದ ಮೇಲೆ ಮಾಡುತ್ತಿದ್ದೇವೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಚುನಾವಣೆಯಲ್ಲಿ ಗೆಲ್ಲಲೇಬೇಕು. ಲೋಕಸಭಾ ಉಪಚುವಾವಣೆ ನನ್ನ ವಿರುದ್ಧ ಹಣ ಹಂಚಿ ನನ್ನನ್ನು ಸೋಲಿಸಿದ್ದಾರೆ. ಆ ನೋವು ನಮಗೆ ಹಾಗೂ ನಮ್ಮ ಕಾರ್ಯಕರ್ಯರಿಗೂ ಇದೆ ಎಂದು ಸತೀಶ್ ಜಾರಕಿಹೊಳಿ ಆರೋಪಿಸಿದರು.

ಸೋದರ ಲಖನ್ ಜಾರಕಿಹೊಳಿ ಚುನಾವಣೆ ನಿಲ್ಲೋದು ಡೌಟು. ಪಕ್ಷದ ವರಿಷ್ಠರು ಒಳ್ಳೆಯ ಅವಕಾಶ ಕೊಡ್ತಿವಿ ಅಂದ್ರೆ ವಾಪಸ್ ಪಡಿಯುತ್ತಾರೆ. ಲಖನ್ ಜಾರಕಿಹೊಳಿ ಜತೆಗೆ ಮಾತನಾಡುವ ಪ್ರಶ್ನೆ ಇಲ್ಲ. ಪಕ್ಷ ಆಧಾರದ ಮೇಲೆ ಚುನಾವಣೆ ಇದು. ಕುಟುಂಬ ಆಧಾರದ ಮೇಲೆ ಚುನಾವಣೆ ಅಲ್ಲ. ಜಾರಕಿಹೊಳಿ ಕುಟುಂಬ, ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಫೈಟ್ ಅಲ್ಲ ಎಂದು ಸ್ಪಷ್ಟಪಡಿಸಿದರು.

ರಮೇಶ್ ಜಾರಕಿಹೊಳಿ ಹೇಳಿಕೆಗೆ ಪರೋಕ್ಷವಾಗಿ ತಿರುಗೇಟು

ಸಹೋದರರ ಸವಾಲ್, ರಾಜಕೀಯ ಸವಾಲ್ ಇದ್ದೇ ಇರುತ್ತದೆ. ರಮೇಶ್ ಜಾರಕಿಹೊಳಿ ಎಂದಿಗೂ ಸಿರಿಯಸ್ ಆಗೇ ಇರ್ತಾರೆ. ಅವರು ತಣ್ಣಗೆ ಇರೋದು ನಾವು, ನೀವು ಎಂದೂ ನೋಡಿಲ್ಲ. ಬಿಜೆಪಿಯಿಂದ ಇಬ್ಬರು ಸ್ಪರ್ಧೆ, ಚಾಲೆಂಜ್ ಇರೋದು ಅವರಿಗೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ, ಒಂದೇ ಮತ, ಒಂದೇ ಅಭ್ಯರ್ಥಿ ಎಂದು ರಮೇಶ್ ಜಾರಕಿಹೊಳಿ ಹೇಳಿಕೆಗೆ ಪರೋಕ್ಷವಾಗಿ ತಿರುಗೇಟು ನೀಡಿದರು.
Published by:Mahmadrafik K
First published: