Operation Congress: ಬೆಳಗಾವಿಯಲ್ಲಿ ಆಪರೇಷನ್ ಕಾಂಗ್ರೆಸ್; ರಮೇಶ್​​ ಜಾರಕಿಹೊಳಿಗೆ‌ ಫೈಟ್‌ ಕೊಡಲು ಪೂಜಾರಿಗೆ ಗಾಳ..!

ಬೆಳಗಾವಿ ಜಿಲ್ಲೆಯಲ್ಲಿ ‌ಜೆಡಿಎಸ್ ಪಕ್ಷ ಸಂಪೂರ್ಣವಾಗಿ ನೆಲಕಚ್ಚಿದೆ. ಇದೀಗ ಪಕ್ಷಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ರಾಜಕೀಯ ಧೃವೀಕರಣ ಆರಂಭವಾಗಿದೆ.

ಕೆಪಿಸಿಸಿ ಆಧ್ಯಕ್ಷ ಡಿಕೆ ಶಿವಕುಮಾರ್ ಭೇಟಿಯಾದ ಅಶೋಕ್ ಪೂಜಾರಿ

ಕೆಪಿಸಿಸಿ ಆಧ್ಯಕ್ಷ ಡಿಕೆ ಶಿವಕುಮಾರ್ ಭೇಟಿಯಾದ ಅಶೋಕ್ ಪೂಜಾರಿ

  • Share this:
ಬೆಳಗಾವಿ(ಅ. 18): 2023ರ ವಿಧಾನಸಭೆ (Karnataka Assembly Poll 2023)ಚುನಾವಣೆಗೆ ಈಗಿನಿಂದಲೇ ಬೆಳಗಾವಿ ಜಿಲ್ಲೆಯಲ್ಲಿ(Belagavi Politics) ರಾಜಕೀಯ ಧೃವೀಕರಣ ಆರಂಭವಾಗಿದೆ. ಜೆಡಿಎಸ್ ಮುಖಂಡ ಅಶೋಕ ಪೂಜಾರಿ(JDS Leader Ashok Poojari) ಕಾಂಗ್ರೆಸ್​​ನತ್ತ ಮುಖ ಮಾಡಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ(Opposition Leader Siddaramaiah) ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆಶಿ(KPCC President DK Shivakumar) ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.  ರಮೇಶ್ ಜಾರಕಿಹೊಳಿ(Ramesh Jarkiholi) ವಿರುದ್ಧ ಕಾಂಗ್ರೆಸ್(Congress)​​ ನಿಂದ ಸ್ಪರ್ಧೆ ಮಾಡಲು ಈಗಿನಿಂದಲೇ ತಯಾರಿ ಆರಂಭಿಸಿದ್ದಾರೆ.

ಕಾಂಗ್ರೆಸ್​ ಸೇರ್ತಾರಾ ಗೋಕಾಕ್​ ಪ್ರಭಾವಿ ನಾಯಕ

ಬೆಳಗಾವಿ ಜಿಲ್ಲೆಯಲ್ಲಿ ‌ಜೆಡಿಎಸ್ ಪಕ್ಷ ಸಂಪೂರ್ಣವಾಗಿ ನೆಲಕಚ್ಚಿದೆ. ಇದೀಗ ಪಕ್ಷಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ರಾಜಕೀಯ ಧೃವೀಕರಣ ಆರಂಭವಾಗಿದೆ. ಗೋಕಾಕ್ ಪ್ರಭಾವಿ ನಾಯಕ, ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ. ಈಗಾಗಲೇ ಅಶೋಕ ಪೂಜಾರಿ ಕಾಂಗ್ರೆಸ್ ಸೇರುವುದು ಪಕ್ಕಾ ಆಗಿದೆ. ಹೀಗಾಗಿಯೇ ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನ ಖುದ್ದಾಗಿ ಭೇಟಿ ಮಾಡಿದ್ದು, ಕಾಂಗ್ರೆಸ್ ಸೇರ್ಪಡೆ ಇಂಗಿತವನ್ನ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ತೊರೆಯಲಿರುವ ಅಶೋಕ್ ಪೂಜಾರಿ

ಕೈ ನಾಯಕರು ಅಶೋಕ ಪೂಜಾರಿಗೆ ಅನೇಕ ಬಾರಿ ಪಕ್ಷಕ್ಕೆ ಸೇರ್ಪಡೆ ಆಗಲು ಆಹ್ವಾನ ನೀಡಿದ್ರು. ಈಗ ಅಶೋಕ ಪೂಜಾರಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಸನ್ನಿಹಿತವಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಮ್ಮುಖದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ.

ಇದನ್ನೂ ಓದಿ:Siddaramaiah: ಅಧಿಕಾರಲ್ಲಿರೋರ ಮನೆ ಬಾಗಿಲಿಗೆ ನಾನು ಯಾವತ್ತೂ ಹೋಗಿಲ್ಲ; ಬಿಎಸ್​ವೈ ಭೇಟಿ ವಿಚಾರಕ್ಕೆ ಸಿದ್ದರಾಮಯ್ಯ ಉತ್ತರ

ಪಕ್ಷಾಂತರ ಪರ್ವ ಶುರು

ಅಶೋಕ ಪೂಜಾರಿ ಗೋಕಾಕ್ ಮತಕ್ಷೇತ್ರದಲ್ಲಿ ನಿರಂತರವಾಗಿ ರಮೇಶ್ ಜಾರಕಿಹೊಳಿ ವಿರುದ್ಧ ಸ್ಪರ್ಧೆ ಮಾಡುತ್ತಲೇ ಬಂದಿದ್ದಾರೆ. ರಮೇಶ್ ಜಾರಕಿಹೊಳಿ ವಿರುದ್ಧ ಪೂಜಾರಿ ಜೆಡಿಎಸ್ ಮತ್ತು ಬಿಜೆಪಿಯಿಂದ ಸ್ಪರ್ಧೆ ಮಾಡಿ ಸೋಲು ಅನುಭವಿಸಿದ್ದಾರೆ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ರಮೇಶ್ ಜಾರಕಿಹೊಳಿ ಬಿಜೆಪಿ ಸೇರ್ಪಡೆ ಆಗುತ್ತಿದ್ದಂತೆ ಅಶೋಕ ಪೂಜಾರಿ ಮತ್ತೆ ಬಿಜೆಪಿ ತೊರೆದು ಜೆಡಿಎಸ್ ನಿಂದ ಅಖಾಡಕ್ಕೆ ಧುಮುಕಿದ್ದರು. ಈಗ ಅಶೋಕ ಪೂಜಾರಿ ಮತ್ತೆ ಪಕ್ಷಾಂತರ ಪರ್ವಕ್ಕೆ ಮುಂದಾಗಿದ್ದಾರೆ.

ಲಖನ್ ಜಾರಕಿಹೊಳಿ ಬಿಜೆಪಿ ಸೇರಿದ್ದರಿಂದ ಅಶೋಕ್ ಕಾಂಗ್ರೆಸ್​​ಗೆ

ಕಾಂಗ್ರೆಸ್ ನಲ್ಲಿದ್ದ ಲಖನ್ ಜಾರಕಿಹೊಳಿ ಬಿಜೆಪಿ ಸೇರ್ಪಡೆ ಆಗಿದ್ದರಿಂದ ಅಶೋಕ್ ಪೂಜಾರಿ ಕಾಂಗ್ರೆಸ್​ನತ್ತ ಮುಖ ಮಾಡಿದ್ದಾರೆ. ಈ ಹಿಂದೆ ಬೆಳಗಾವಿ ಲೋಕಸಭೆ ಉಪ ಚುನಾವಣೆ ಸಂದರ್ಭದಲ್ಲಿಯೇ ಸತೀಶ್ ಜಾರಕಿಹೊಳಿ ಅಶೋಕ ಪೂಜಾರಿ ಮನೆಗೆ ಹೋಗಿ ಕಾಂಗ್ರೆಸ್ ಗೆ ಆಹ್ವಾನ ನೀಡಿದರು. ಆದ್ರೆ ಈಗ ಅಶೋಕ ಪೂಜಾರಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಜೆಡಿಎಸ್​ನ ಮತ್ತೊಂದು ವಿಕೆಟ್ ಪತನ

ಈಗ ಜೆಡಿಎಸ್ ಗೆ ಕಾಂಗ್ರೆಸ್ ನಿಂದ ಮತ್ತೊಂದು ಶಾಕ್ ಎದುರಾಗಿದೆ. ಜೆಡಿಎಸ್ ನ ಪ್ರಭಾವಿ ಮುಖಂಡ ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ. ಈ ಮೂಲಕ ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾಗುತ್ತಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ 2023 ರ ಚುನಾವಣೆಯಲ್ಲಿ ಅಶೋಕ ಪೂಜಾರಿ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಲು ಸಿದ್ಧತೆ ಯನ್ನ‌ ಈಗಿನಿಂದಲೇ ಆರಂಭಿಸಿದ್ದಾರೆ.
Published by:Latha CG
First published: