Ramesh Jarkiholi : ರಾಜೀನಾಮೆ ನೀಡುವುದು ನಿಜ; ಇನ್ನು ಹತ್ತು ದಿನಗಳಲ್ಲಿ ನಿರ್ಧಾರ; ರಮೇಶ್​ ಜಾರಕಿಹೊಳಿ

ಇವತ್ತೇ ರಾಜೀನಾಮೆ ಇಲ್ಲ, ನಮ್ಮ ಹಿತೈಷಿಗಳು ಕೆಲವರ ಬಳಿ ಈ ಬಗ್ಗೆ ಮಾತಾಡಿದ್ದು, ಸಮಯ ಪಡೆದು ಈ ಬಗ್ಗೆ ತೀರ್ಮಾನ ಮಾಡುತ್ತೇನೆ

ಮಾಜಿ ಸಚಿವ ರಮೇಶ್ ಜಾರಕಿಹೊಳಿ

ಮಾಜಿ ಸಚಿವ ರಮೇಶ್ ಜಾರಕಿಹೊಳಿ

 • Share this:
  ಮೈಸೂರು / ಬೆಳಗಾವಿ (ಜೂ: 25): ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮಾಡಿದ್ದು ಸತ್ಯ. ಮನನೊಂದು ಈ ನಿರ್ಧಾರ ಮಾಡಿದ್ದೆ. ಆದರೆ ಕೆಲವು ಹಿರಿಯರ ಸಲಹೆ ಮೇರೆಗೆ ಈಗ ಅದನ್ನ ಕೈಬಿಟ್ಟಿದ್ದೇನೆ. ಈ ಬಗ್ಗೆ ಇನ್ನ 8-10 ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ ಎಂದ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ತಿಳಿಸಿದ್ದಾರೆ. ಸುತ್ತೂರು ಮಠಕ್ಕೆ ಭೇಟಿ ನೀಡಿದ ವೇಳೆ ತಮ್ಮ ರಾಜೀನಾಮೆ ವಿಚಾರ ಕುರಿತ ಪ್ರತಿಕ್ರಿಯಿಸಿದ ಅವರು, ಇನ್ನು 8 ರಿಂದ 10 ದಿನ ನನಗೆ ಮಾಧ್ಯಮದವರು ಬಿಟ್ಟು ಬಿಡಿ. ಬಳಿಕ ಈ ಬಗ್ಗೆ ತಿಳಿಸುತ್ತೇನೆ ಎಂದು ಮನವಿ ಮಾಡಿದರು. ಇದೇ ವೇಳೆ ರಾಜೀನಾಮೆ ಕೊಟ್ಟರೂ ನಾನೊಬ್ಬನೇ ಕೊಡ್ತೇನೆ. ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಮುಳುಗುವ ಹಡಗು ನಾನೇಕೆ ಆ ಪಕ್ಷಕ್ಕೆ ಹೋಗಲಿ. ಬಿಜೆಪಿ ಪಕ್ಷ ನನ್ನನ್ನು ಬಹಳ ಗೌರವಯುತವಾಗಿ ನಡೆಸಿಕೊಂಡಿದೆ. ನಾನು ಬಿಜೆಪಿಗೆ ದ್ರೋಹ ಮಾಡುವ ಕೆಲಸ ಎಂದಿಗು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು

  ಇನ್ನು ಸಚಿವ ಸ್ಥಾನದ ಲಾಬಿಗಾಗಿ ಮುಂಬೈಗೆ ಹೋಗಿದ್ದ ಕುರಿತು ಮಾತನಾಡಿದ ಅವರು, ನಾನು ಮುಂಬೈಗೆ ಹೋಗಿದ್ದು ಸತ್ಯ. ದೇವೇಂದ್ರ ಫಡ್ನವಿಸ್ ನನ್ನ ರಾಜಕೀಯ ಗಾಡ್ ಫಾದರ್. ಅವರ ಬಳಿ ನನ್ನ ಮನಸ್ಸಿನ ನೋವುಗಳನ್ನ ಹೇಳಿಕೊಂಡಿದ್ದೇನೆ ಎಂದರುರ್ಕಾರ ಬೀಳಿಸಿ ಸರ್ಕಾರ ರಚಿಸುವ ಶಕ್ತಿ ದೇವರು ಕೊಟ್ಟಿದ್ದಾನೆ.

  ಸುತ್ತೂರು ಶ್ರೀಗಳ ಮೂಲಕ ಸಚಿವ ಸ್ಥಾನಕ್ಕೆ ಒತ್ತಡ ಹಾಕಲು ಮುಂದಾಗಿದ್ದಾರಾ ಎಂಬ ಕುರಿತು ಪ್ರತಿಕ್ರಿಯಿಸಿದ ಅವರು, ಸರ್ಕಾರವನ್ನೇ ಬೀಳಿಸುವ ಶಕ್ತಿ ಇರುವ ನಾನು, ಸಚಿವನಾಗುವುದಕ್ಕೆ ಲಾಭಿ ಮಾಡುತ್ತೇನಾ? ನನಗೆ ಇನ್ನು ಆ ಸ್ಥಿತಿ ಬಂದಿಲ್ಲ. ಸ್ವಾಮೀಜಿ ಅವರ ಬಳಿ ಬಂದು ಸಚಿವ ಸ್ಥಾನಕ್ಕೆ ಒತ್ತಡ ಹಾಕಿಸುವ ಸ್ಥಿತಿಗೆ ನಾನು ಬಂದಿಲ್ಲ. ನಾನು ಸ್ವಾಮೀಜಿ ಬಳಿ ಬಂದಿದ್ದು ಅವರ ಮಾತೃ ಶ್ರೀ ನಿಧನಕ್ಕೆ ಸಂತಾಪ ಸೂಚಿಸಲು ಬಂದಿದ್ದೆ. ಇಲ್ಲಿ ಯಾವ ರಾಜಕಾರಣವನ್ನು ಚರ್ಚೆ ಮಾಡಿಲ್ಲ.

  ಇದನ್ನು ಓದಿ: ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು; 365ದಿನ ಜೋಗ ಜಲಪಾತಕ್ಕೆ ನೀರು ಬಿಡಲು ಯೋಜನೆ

  ಇರುವ ಶಾಸಕ ಸ್ಥಾನವನ್ನೇ ಬಿಡುವ ಚಿಂತನೆ‌ ಮಾಡಿದ್ದವನು ನಾನು. ಇಲ್ಲಿ ಸಚಿವ ಸ್ಥಾನದ ಲಾಬಿ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

  ಇದನ್ನು ಓದಿ: ಆರು ತಿಂಗಳಿಗೆ ಮುರುಟಿದ ಫೇಸ್​ಬುಕ್​ ಪ್ರೇಮ; ವರದಕ್ಷಿಣೆ ಕಿರುಕುಳ ಕಾರಣವಾಯ್ತಾ ಯುವತಿ ಸಾವಿಗೆ

  ಸ್ವಾಮೀಜಿ ಎಲ್ಲ ಪಕ್ಷದ ನಾಯಕರಿಗೂ ಆಶೀರ್ವಾದ ಮಾಡುತ್ತಾರೆ. ಅದರಲ್ಲಿ ರಾಜಕೀಯವಿಲ್ಲ. ನಾನು ರಾಜೀನಾಮೆ ಕೊಡುವುದು ನಿಜ, ಅದರಲ್ಲಿ ಎರಡು ಮಾತಿಲ್ಲ. ಇದನ್ನು ನನ್ನ ಆಪ್ತರ ಮುಂದೆ ಹೇಳಿಕೊಂಡಿದ್ದೆ. ಇವತ್ತೇ ರಾಜೀನಾಮೆ ಇಲ್ಲ, ನಮ್ಮ ಹಿತೈಷಿಗಳು ಕೆಲವರ ಬಳಿ ಈ ಬಗ್ಗೆ ಮಾತಾಡಿದ್ದು, ಸಮಯ ಪಡೆದು ಈ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದರು.

  ಅಸಮಾಧಾನ ಏನು ಎಂದು ಬಹಿರಂಗವಾಗಿ ಮಾತನಾಡಲು ಆಗೋದಿಲ್ಲ ಸಾಕಷ್ಟು ತಾಂತ್ರಿಕ ಸಮಸ್ಯೆಗಳಿವೆ. ನಾಟಕ ಮಾಡುವ ವ್ಯಕ್ತಿ ನಾನಲ್ಲ, ಸಿಎಂ ಯಡಿಯೂರಪ್ಪ ಮುಂದಿನ ಎರಡು ವರ್ಷ ಇರಲಿದ್ದಾರೆ ಎಂದು ಹೇಳಿದ್ದೇನೆ. ಹೈಕಮಾಂಡ್ ನಿರ್ಧಾರಕ್ಕೆ ನಾನು‌ ಬದ್ದ. ಯಾರಿಂದ ನನಗೆ ನೋವಾಗಿದೆ, ಅವರನ್ನ ಮನೆಗೆ ಕಳಿಸದೇ ಬಿಡುವುದಿಲ್ಲ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
  Published by:Seema R
  First published: