Congress: 2023ರ ವಿಧಾನಸಭೆ ಚುನಾವಣೆ ಮಾಸ್ಟರ್ ಪ್ಲ್ಯಾನ್ ರೂಪಿಸಿದ ಕಾಂಗ್ರೆಸ್​​

2023ರ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಈಗಿನಿಂದಲೇ ಕೆಲಸ ಆರಂಭಿಸಲಾಗಿದೆ.

ಸತೀಶ್ ಜಾರಕಿಹೊಳಿ.

ಸತೀಶ್ ಜಾರಕಿಹೊಳಿ.

  • Share this:
 ಬೆಳಗಾವಿ (ಆ .8): ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಖಾತೆ ಹಂಚಿಕೆ ಕಿರಿಕ್ ಆರಂಭವಾಗಿದೆ. ಅನೇಕರು ಸಚಿವರಾಗಲು ಒತ್ತಡ, ಲಾಬಿ ನಡೆಸಿದರು. ಇದೀಗ ಬಯಸಿದ ಖಾತೆ ಸಿಗುತ್ತಿಲ್ಲ ಎಂದು ಅಸಮಾಧಾನ ಹೊರ ಹಾಕುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆ ಮಧ್ಯದಲ್ಲಿ ಕಾಂಗ್ರೆಸ್ ಹೊಸ ಯೋಜನೆ ರೂಪಿಸಲು ಮುಂದಾಗಿದೆ.  2023ರ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಈಗಿನಿಂದಲೇ ಕೆಲಸ ಆರಂಭಿಸಲಾಗಿದೆ. ಪಕ್ಷದ ಸಂಘಟನೆ ದೃಷ್ಠಿಯಿಂದ ಹಲವು ಮಹತ್ವದ ನಿರ್ಧಾರಗಳನ್ನು ಕಾಂಗ್ರೆಸ್ ಕೈಗೊಳ್ಳಲು ಮುಂದಾಗಿದೆ. ಈ ಪೈಕಿ ಒಂದು ವರ್ಷದ ಮೊದಲೇ ಅಭ್ಯರ್ಥಿಗಳ ಘೋಷಣೆ ಅಸ್ತ್ರ ಪ್ರಮುಖವಾಗಿದೆ. ಇನ್ನೂ ಹಲವು ಸಮೂದಯಗಳಿಗೆ ನಾಯಕರಿಗೆ ಡಿಸಿಎಂ ನೀಡುವ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಎಷ್ಟರ ಮಟ್ಟಿಗೆ ಸಾದ್ಯವಾಗಲಿದೆ ಎಂಬುದು ಈಗ ಕಾದು ನೋಡಬೇಕು.

ಕಾಂಗ್ರೆಸ್ ಪಕ್ಷದಲ್ಲಿ ಕೆಪಿಸಿಸಿ ಅಧ್ಯಕ್ಷ  ಡಿಕೆಶಿ, ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾರ್ಯತಂತ್ರ ನಡೆಸಲಾಗುತ್ತಿದೆ. ರಾಜ್ಯದಲ್ಲಿ 224 ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಹಲವರು ಆಕಾಂಕ್ಷಿಗಳು ಇದ್ದಾರೆ. ಇನ್ನೂ ಒಂದೇ ಕ್ಷೇತ್ರದಲ್ಲಿ ಇಬ್ಬರು, ಮೂರು ಜನರಿಂದ ಟಿಕೆಟ್ ಗಾಗಿ ಲಾಭಿ ನಡೆಸುವುದು ಸಾಮಾನ್ಯ. ಮುಂದಿನ ಚುನಾವಣೆಯಲ್ಲಿ ಒಂದು ವರ್ಷ ಮೊದಲೇ ಟಿಕೆಟ್ ನೀಡಲು ಚಿಂತನೆ ನಡೆಸಲಾಗಿದೆ. ಪಕ್ಷದ ಮಟ್ಟದಲ್ಲಿ ಗಂಭೀರ ಚಿಂತನೆ ನಡೆಸಿರುವ ಕಾಂಗ್ರೆಸ್ ನಾಯಕರು. ಪಕ್ಷದ ವೇದಿಕೆಯಲ್ಲಿ ಹಲವು ಸುತ್ತಿನ ಚರ್ಚೆಗಳು ನಡೆಸಿದ್ದಾರೆ. ಒಂದು ವರ್ಷ ಮೊದಲೇ ಟಿಕೆಟ್ ಘೋಷಣೆ ಮಾಡೊದ್ರಿಂದ ಪಕ್ಷ ಸಂಘಟನೆ, ಗೊಂದಲ ನಿವಾರಣೆ ಅನಕೂಲ ಆಗಲಿದೆ ಎಂಬ ಲೆಕ್ಕಾಚಾರದಲ್ಲಿ ಇದ್ದಾರೆ.

ಇದನ್ನು ಓದಿ: ಚಿನ್ನ ಗೆದ್ದ ನೀರಜ್​ಗೆ ಬಹುಮಾನಗಳ ಸುರಿಮಳೆ; ಚೋಪ್ರಾಗೆ ಸಿಕ್ಕ ನಗದು ಪುರಸ್ಕಾರಗಳೆಷ್ಟು ಗೊತ್ತಾ?

ಮುಂದಿನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ದತೆಯ ಬಗ್ಗೆ ನ್ಯೂಸ್ 18ಕನ್ನಡ ಜತೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾತನಾಡಿದ್ದಾರೆ. ಒಂದು ವರ್ಷ ಮೊದಲೇ ಅಭ್ಯರ್ಥಿಗಳ ಹೆಸರು ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದ ವೇದಿಕೆಯಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ. ಮೊದಲೇ ಟಿಕೆಟ್ ಘೋಷಣೆಯಿಂದ ಗೊಂದಲ ನಿವಾರಣೆ ಆಗಲಿದೆ.  ಜತೆಗೆ ಪಕ್ಷ ಸಂಘಟನೆಗು ಹೆಚ್ಚಿನ ಸಮಯ ಸಿಗಲಿದೆ. ಈ ನಿಟ್ಟಿನಿಲ್ಲಿ ನಾಯಕರು, ಮುಖಂಡರ ಒತ್ತಡ ಸಹ ಇದೆ, ವಿಚಾರ ವರಿಷ್ಠರ ಗಮನದಲ್ಲಿ ಇದ್ದು ಬೇಗ ಘೋಷಣೆ ಮಾಡಿದ್ರೆ ಒಳ್ಳೆಯದು.

ಕಾಂಗ್ರೆಸ್ ಪಕ್ಷದಲ್ಲಿ ಡಿಸಿಎಂ ಘೋಷಣೆ ವಿಚಾರದ ಬಗ್ಗೆ ಮಾತನಾಡಿದ ಜಾರಕಿಹೊಳಿ, ಉಪಮುಖ್ಯಮಂತ್ರಿ ಸಾಂವಿಧಾನಿಕ ಹುದ್ದೆ ಅಲ್ಲ, ಸಚಿವರು ಇರೋದು ಒಂದೇ ಡಿಸಿಎಂ ಇರೋದು ಒಂದೆ ಎಂದರು. ಹುಕ್ಕೇರಿ ತಾಲೂಕಿನ ಹೆಬ್ಬಾಳ್ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಪುತ್ರಿ ಪ್ರೀಯಾಂಕ ಸ್ಪರ್ಧೆ ವಿಚಾರ. ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ, ಪ್ರೀಯಾಂಕ ಸದ್ಯ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ಜಿಪಂ ಚುನಾವಣೆಗೆ ಇನ್ನೂ  ಆರು ತಿಂಗಳು ಕಾಲವಕಾಶ ಇದೆ. ಕಾರ್ಯಕರ್ತರಿಂದ ಸ್ಪರ್ಧೆ ಮಾಡಬೇಕು ಎಂದು ಒತ್ತಡ ಇದೆ. ಆದರೇ ಇನ್ನೂ ಯಾವುದೇ ನಿರ್ಧಾರ ಈ ಬಗ್ಗೆ ಮಾಡಿಲ್ಲ ಎಂದರು.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು
Published by:Seema R
First published: