Belagavi Politics: ಅಪೆಕ್ಸ್ ಬ್ಯಾಂಕ್ ನಲ್ಲಿ 6 ಸಾವಿರ ಕೋಟಿ ಸಾಲ: ಪ್ರಭಾವಿಗಳ ವಿರುದ್ಧ ಕಾನೂನು ಕ್ರಮ ಇಲ್ಲವೇ?

ದಕ್ಷಿಣ ಕನ್ನಡ, ತುಮಕೂರು ಡಿಸಿಸಿ ಬ್ಯಾಂಕ್ ನಿಂದ ಸಾಲ ಪಡೆದಿದ್ದಾರೆ. ರಾಜ್ಯದಲ್ಲಿ 6 ಸಾವಿರ ಕೋಟಿ ರೂಪಾಯಿ ಸಾಲ ಬಾಕಿ ಉಳಿದಿದೆ. ಇದನ್ನು ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ರು.

ಸಾಂಕೇತಿಕ ಚಿತ್ರ

ಸಾಂಕೇತಿಕ ಚಿತ್ರ

  • Share this:
ಬೆಳಗಾವಿ: ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (KPCC President DK Shivakumar) ಬೆಳಗಾವಿಗೆ (Belagavi) ಭೇಟಿ ನೀಡಿದ ಸಂದರ್ಭದಲ್ಲಿ ರಾಜಕೀಯ ‌ವಿರೋಧಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ (Former Minister Ramesh Jarkiholi) ವಿರುದ್ಧ ವಾಗ್ದಾಳಿ ನಡೆಸಿದ್ದರು. ಸಾಹುಕಾರ್‌ ಗಳೆಲ್ಲ ಪಾಪರ್‌ ಗಳಾಗುತ್ತಿದ್ದಾರೆ. ನಮ್ಮನ್ನೆಲ್ಲ ಪಾಪರ್ ಮಾಡಿಕೊಳ್ಳಿ ಅಂತಾ ಮ್ಯಾಚ್ ಫಿಕ್ಸಿಂಗ್ (Match Fixing) ನಡೀತಿದೆ. ಯಾರೂ ಕೇಳವರಿಲ್ಲ ಮಾಡೋರಿಲ್ಲ, ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai), ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ (Minister ST Somashekhar) ಏನ್ ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದ್ದರು. ರಮೇಶ್ ಜಾರಕಿಹೊಳಿ ಒಡೆತನದ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆ (Soubhagya Laxmi Sugar Factory) 600 ಸಾಲ ಪಡೆದು ಮರುಪಾವತಿ ಮಾಡಿಲ್ಲ‌.‌ ಸಹಕಾರ ಸಚಿವರು (Minister) ಹಾಗೂ ಸಿಎಂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಡಿ ಕೆ ಶಿವಕುಮಾರ್ ಆರೋಪ ಮಾಡಿದ್ದರು.

ಅಫೆಕ್ಸ್ ಬ್ಯಾಂಕ್ ನಲ್ಲಿ (Apex Bank) ರಾಜ್ಯದ 25 ಸಕ್ಕರೆ ಕಾರ್ಖಾನೆಗಳ‌ ಮಾಲೀಕರು (Sugar Factory Owners) ಸಾಲ ಪಡೆದಿದ್ದಾರೆ. ಕೇವಲ ರಮೇಶ್ ಜಾರಕಿಹೊಳಿ ಅಲ್ಲ ಬದಲಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ‌ಜೆಡಿಎಸ್ ಶಾಸಕ ಬಂಡೆಪ್ಪ ಕಾಂಶಪೂರ್ ಸಹ ಸಾಲ ಪಡೆದಿದ್ದಾರೆ.

ರಾಜ್ಯದಲ್ಲಿ 6 ಸಾವಿರ ಕೋಟಿ ರೂ. ಸಾಲ ಬಾಕಿ

ಯಾರೆಲ್ಲ ಬಾಕಿ ಉಳಿಸಿಕೊಂಡಿದ್ದಾರೆ ಅವರಿಗೆಲ್ಲ ನೋಟಿಸ್ ನೀಡಲಾಗಿದೆ. ಸಾಲ ಕೊಟ್ಟಿದ್ದು, ಅದನ್ನು ಮರುಪಾವತಿ ಮಾಡಲು ನೋಟಿಸ್ ಕೊಟ್ಟಿದ್ದಾರೆ.  ಕೆಲವರು ಬಡ್ಡಿ ಹಾಗೂ ಅಸಲು ಕಟ್ಟಿಲ್ಲ. ಕೆಲವರು ಬಡ್ಡಿ, ಅಸಲು ಕಟ್ಟುತ್ತಿದ್ದಾರೆ.

ಇದನ್ನೂ ಓದಿ:  ನನ್ನನ್ನೇ ಟಾರ್ಗೆಟ್ ಮಾಡ್ತಿದ್ದಾರೆ! 4ನೇ ಸಲ ರಾಜೀನಾಮೆ ನೀಡಿದ ಹಿರಿಯ ಐಪಿಎಸ್ ಅಧಿಕಾರಿ

ದಕ್ಷಿಣ ಕನ್ನಡ, ತುಮಕೂರು ಡಿಸಿಸಿ ಬ್ಯಾಂಕ್ ನಿಂದ ಸಾಲ ಪಡೆದಿದ್ದಾರೆ. ರಾಜ್ಯದಲ್ಲಿ 6 ಸಾವಿರ ಕೋಟಿ ರೂಪಾಯಿ ಸಾಲ ಬಾಕಿ ಉಳಿದಿದೆ. ಇದನ್ನು ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ರು.

ಪ್ರಭಾವಿಗಳ ವಿರುದ್ಧ ಕಾನೂನು ಕ್ರಮ ಇಲ್ಲವೇ?

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಂಧರ್ಭ ಸಿಕ್ಕಾಗಲೆಲ್ಲ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸುತ್ತಾರೆ. ಅಫೆಕ್ಸ್ ಬ್ಯಾಂಕ್ ಸಾಲದ ವಿಚಾರದಲ್ಲಿ 25 ಜನರ ಪೈಕಿ ರಮೇಶ್ ಜಾರಕಿಹೊಳಿ‌ ವಿರುದ್ಧ ಮಾತ್ರ ಡಿಕೆಶಿ ವಾಗ್ದಾಳಿ ನಡೆಸಿದ್ದರು.

ಇನ್ನೂ ಅಫೆಕ್ಸ್ ಬ್ಯಾಂಕ್ ಹಾಗೂ ವಿವಿಧ ಡಿಸಿಸಿ ಬ್ಯಾಂಕ್ ಗಳ‌ ಮೂಲಕ ಸಕ್ಕರೆ ಕಾರ್ಖಾನೆಗಳ ಮಾಲೀಕರು ಸಾಲ‌ ಪಡೆದಿದ್ದು ಸಾಲ ಮರುಪಾವತಿಯನ್ನು ಅನೇಕರು ಮಾಡಿಲ್ಲ. ಪ್ರಭಾವಿಗಳ ವಿರುದ್ಧ  ಸರ್ಕಾರ ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವೇ ಎನ್ನುವ ಪ್ರಶ್ನೆ ಹುಟ್ಟು ಹಾಕಿದೆ.

ಸೋಮಶೇಖರ್ ಹೇಳಿಕೆಗೆ ಚನ್ನರಾಜ್ ಹಟ್ಟಿಹೊಳಿ ತಿರುಗೇಟು

ರಾಜ್ಯದಲ್ಲಿ ಅಫೆಕ್ಸ್ ಬ್ಯಾಂಕ್ ನಿಂದ ಸಕ್ಕರೆ ಕಾರ್ಖಾನೆ ಮಾಲೀಕರು‌ 6 ಸಾವಿರ ಕೋಟಿ ರೂಪಾಯಿ ಸಾಲ ಬಾಕಿ ಸಚಿವ ಎಸ್ ಸೋಮಶೇಖರ್ ಹೇಳಿಕೆ ವಿಚಾರ. ಸಚಿವರ ಹೇಳಿಕೆಗೆ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ (MLC Channaraj Hattiholi) ‌ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ:  MLC Election: ಜೂನ್ 3ರಂದು 7 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ

ಬಾಕಿ ಉಳಿಸಿಕೊಂಡಿಲ್ಲ

ಹರ್ಷ ಸಕ್ಕರೆ ಕಾರ್ಖಾನೆ ನಿರ್ಮಾಣದ ಸಂದರ್ಭದಲ್ಲಿ ಅಫೆಕ್ಸ್ ಬ್ಯಾಂಕ್ ‌ಹಾಗೂ ಡಿಸಿಸಿ ಬ್ಯಾಂಕ್ ನಿಂದ ಸಾಲ ಪಡೆಯಲಾಗಿದೆ. ಸರಿಯಾದ ಸಂದರ್ಭದಲ್ಲಿ ‌ಬಡ್ಡಿ, ಅಸಲು ಪಾವತಿ ಮಾಡಿದ್ದೇವೆ. ಯಾವುದೇ ಬಾಕಿ ಹಣವನ್ನು ಉಳಿಸಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದರು. ಸಚಿವರು ಬಾಕಿ ಉಳಿಸಿಕೊಂಡಿದ್ದಾರೆ ಎಂದಿಲ್ಲ, ಕೇವಲ ಸಾಲ ಪಡೆದಿದ್ದಾರೆ ಎಂದು ಹೇಳಿದ್ದಾರೆ.
Published by:Mahmadrafik K
First published: