ನೆಲಮಂಗಲ ಬಳಿ ಅಪಘಾತ; ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದು ಮಾಜಿ ಸಚಿವರ ಕಾರು ಜಖಂ

Bangalore Road Accident: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಮಾಜಿ ಸಚಿವ ಸೊಗಡು ಶಿವಣ್ಣ ಅವರ ಇನ್ನೋವಾ ಕಾರು ಜಖಂ ಆಗಿದೆ.

news18-kannada
Updated:January 11, 2020, 12:12 PM IST
ನೆಲಮಂಗಲ ಬಳಿ ಅಪಘಾತ; ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದು ಮಾಜಿ ಸಚಿವರ ಕಾರು ಜಖಂ
ಪ್ರಾತಿನಿಧಿಕ ಚಿತ್ರ
  • Share this:
ಬೆಂಗಳೂರು (ಜ. 11): ನೆಲಮಂಗಲ ಬಳಿ ಕೆಎಸ್​ಆರ್​ಟಿಸಿ ಬಸ್, ಕ್ಯಾಂಟರ್ ಮತ್ತು ಇನೋವಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಕೆಎಸ್ಆರ್​ಟಿಸಿ ಬಸ್​ನ ಅತಿ ವೇಗವೇ ದುರಂತಕ್ಕೆ ಕಾರಣ ಎನ್ನಲಾಗಿದೆ. 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅವಘಡ ಸಂಭವಿಸಿದೆ. ರಾಯರಪಾಳ್ಯದ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಮಾಜಿ ಸಚಿವ ಸೊಗಡು ಶಿವಣ್ಣ ಅವರ ಇನ್ನೋವಾ ಕಾರು ಜಖಂ ಆಗಿದೆ. ಕೆಎಸ್​ಆರ್​ಟಿಸಿ ಬಸ್, ಇನ್ನೋವಾ ಕಾರು, ಕ್ಯಾಂಟರ್ ನಡುವೆ ಅಪಘಾತ ನಡೆದಿದೆ. ಘಟನೆಗೆ ಬಸ್​ ಚಾಲಕನ ವೇಗದ ಚಾಲನೆಯೇ ಕಾರಣ ಎನ್ನಲಾಗಿದೆ. ಘಟನೆಯಲ್ಲಿ ತುಮಕೂರಿನ ಮಾಜಿ ಸಚಿವ ಸೊಗಡು ಶಿವಣ್ಣಗೆ ಸೇರಿದ ಇನ್ನೋವಾ ಕಾರು ಜಖಂ ಆಗಿದೆ.

ಇದನ್ನೂ ಓದಿ: ಮಹಿಳಾ ಪೊಲೀಸ್ ಅಧಿಕಾರಿಗೂ ಕಾಮುಕನ ಕಾಟ; ಬೆಂಗಳೂರಿನ ಪಿಎಸ್​ಐಯನ್ನೇ ಮಂಚಕ್ಕೆ ಕರೆದ ಭೂಪ!

ಮೂರು ವಾಹನಗಳ ನಡುವೆ ಡಿಕ್ಕಿಯಾಗಿದ್ದರಿಂದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನೆಲಮಂಗಲ ಸಂಚಾರಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನೋವಾ ಕಾರಿನಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಅವರ ಸಂಬಂಧಿಕರು ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗಿಲ್ಲ.

(ವರದಿ: ಅಭಿಷೇಕ್ ಡಿ.ಆರ್)
First published:January 11, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ