ಬೆಂಗಳೂರಿನ ರಸ್ತೆ ಮಧ್ಯೆಯೇ ಧಗಧಗನೆ ಹೊತ್ತಿ ಉರಿದ ಕಾರು; ಕೂದಲೆಳೆ ಅಂತರದಲ್ಲಿ ತಪ್ಪಿದ ಅನಾಹುತ

ಒಂದೇ ಕುಟುಂಬದ ಮೂರ್ನಾಲ್ಕು ಜನರು ರೆನಾಲ್ಟ್​ ಲೋಗಾನ್ ಕಾರಿನಲ್ಲಿ ಮೈಸೂರಿನ ಕಡೆಗೆ ಹೊರಟಿದ್ದರು. ಕುಟುಂಬ ಸಮೇತರಾಗಿ ತೆರಳುತ್ತಿದ್ದಾಗ ನೈಸ್ ರಸ್ತೆ ಬಳಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

news18-kannada
Updated:November 11, 2019, 11:04 AM IST
ಬೆಂಗಳೂರಿನ ರಸ್ತೆ ಮಧ್ಯೆಯೇ ಧಗಧಗನೆ ಹೊತ್ತಿ ಉರಿದ ಕಾರು; ಕೂದಲೆಳೆ ಅಂತರದಲ್ಲಿ ತಪ್ಪಿದ ಅನಾಹುತ
ಬೆಂಗಳೂರಿನ ನೈಸ್ ರಸ್ತೆಯಲ್ಲಿ ಹೊತ್ತಿ ಉರಿದ ಕಾರು
  • Share this:
ಬೆಂಗಳೂರು (ನ. 11): ನಗರದ ನೈಸ್ ರಸ್ತೆಯಲ್ಲಿ ಸಾಗುತ್ತಿದ್ದ ಕಾರಿನಲ್ಲಿ ಅಚಾನಕ್ಕಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಬೆಳಗ್ಗೆ ಮೈಸೂರು ರಸ್ತೆಯಿಂದ ಮೈಸೂರು ಮಾರ್ಗದ ನೈಸ್ ರಸ್ತೆಯಲ್ಲಿ ಕಾರು ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಕ್ಷಣಾರ್ಧದಲ್ಲಿ ಕಾರು ಹೊತ್ತಿ ಉರಿದ ಪರಿಣಾಮ ಗಾಬರಿಗೊಂಡ ಕಾರಿನಲ್ಲಿದ್ದವರು ಹೊರಗೆ ಜಿಗಿದಿದ್ದಾರೆ. ಇದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಬೆಂಗಳೂರಿನಲ್ಲಿ ಆ್ಯಕ್ಟಿವ್ ಆಗಿರುವ ಚಡ್ಡಿ ಗ್ಯಾಂಗ್​ಗೂ ರಾಯಚೂರಿಗೂ ಇದೆ ಸಂಬಂಧ?

ಒಂದೇ ಕುಟುಂಬದ ಮೂರ್ನಾಲ್ಕು ಜನರು ರೆನಾಲ್ಟ್​ ಲೋಗಾನ್ ಕಾರಿನಲ್ಲಿ ಮೈಸೂರಿನ ಕಡೆಗೆ ಹೊರಟಿದ್ದರು. ಕುಟುಂಬ ಸಮೇತರಾಗಿ ತೆರಳುತ್ತಿದ್ದಾಗ ನೈಸ್ ರಸ್ತೆ ಬಳಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರು ವೃಷಭಾವತಿ ಸೇತುವೆ ಬಳಿ ಹೋಗುತ್ತಿದ್ದಂತೆ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಕಾರಿನಲ್ಲಿದ್ದವರು ಗಾಬರಿಯಾಗಿದ್ದಾರೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ಹೊರಗೆ ಜಿಗಿದಿದ್ದರಿಂದ ಯಾರಿಗೂ ಹೆಚ್ಚಿನ ಗಾಯಗಳಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ಆರಿಸಿದ್ದಾರೆ.

(ವರದಿ: ಮುನಿರಾಜು)

First published: November 11, 2019, 11:02 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading