HOME » NEWS » State » BENGALURU BED SCAM CCB POLICE ARREST ONE MORE ACCUSED RELATED BED SCAM LG

Bengaluru Bed Scam: ಬೆಂಗಳೂರು ಬೆಡ್​ ಬ್ಲಾಕಿಂಗ್​ ದಂಧೆ; ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

ಪ್ರಕರಣ ಸಂಬಂಧ ಇದುವರೆಗೂ 8 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಳಿದ ಇಬ್ಬರು ಆರೋಪಿಗಳಿಗೆ ಕೋವಿಡ್ ಪಾಸಿಟಿವ್ ಆಗಿದೆ.  ಚೇತರಿಕೆ ಕಂಡ ಬಳಿಕ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ.

news18-kannada
Updated:May 12, 2021, 12:41 PM IST
Bengaluru Bed Scam: ಬೆಂಗಳೂರು ಬೆಡ್​ ಬ್ಲಾಕಿಂಗ್​ ದಂಧೆ; ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು
ಆರೋಪಿ ಆಂಥೋನಿ
  • Share this:
ಬೆಂಗಳೂರು(ಮೇ 12): ಬೆಂಗಳೂರಿನಲ್ಲಿ ಬೆಡ್​ ಬ್ಲಾಕಿಂಗ್​ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಂದು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆಂಥೋನಿ ಎಂಬಾತ ಬಂಧಿತ ಆರೋಪಿ. ಈತ ಸಪ್ತಗಿರಿ ಆಸ್ಪತ್ರೆಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್​ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. 

ಆರೋಪಿ ಆಂಥೋನಿ ರೋಗಿ ಕಡೆಯಿಂದ ಹಣ ಪಡೆದು ಬೆಡ್ ಬ್ಲಾಕಿಂಗ್ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಈತ ಒಬ್ಬೊಬ್ಬ ರೋಗಿಯಿಂದ ಸುಮಾರು 40-50 ಸಾವಿರ ಹಣ ಪಡೆಯುತ್ತಿದ್ದ ಎನ್ನಲಾಗಿದೆ. ಸದ್ಯ ಆರೋಪಿ‌‌ ಆಂಥೋನಿಯನ್ನು ಸಿಸಿಬಿ ಪೊಲೀಸರು  ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರಕರಣ ಸಂಬಂಧ ಇದುವರೆಗೂ 8 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಳಿದ ಇಬ್ಬರು ಆರೋಪಿಗಳಿಗೆ ಕೋವಿಡ್ ಪಾಸಿಟಿವ್ ಆಗಿದೆ.  ಚೇತರಿಕೆ ಕಂಡ ಬಳಿಕ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ.

Coronavirus India Updates: ದೇಶದಲ್ಲಿ ಮತ್ತೆ ಮೂರೂವರೆ ಲಕ್ಷದಷ್ಟು ಕೊರೋನಾ ಪ್ರಕರಣಗಳು ಪತ್ತೆ!

ಇತ್ತೀಚೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಬೆಡ್​ ಬ್ಲಾಕಿಂಗ್​​​ ದಂಧೆಯನ್ನು ಬಯಲಿಗೆಳೆದಿದ್ದರು. ಜೊತೆಗೆ ಈ ಪ್ರಕರಣದ ಕುರಿತು ಸಿಎಂ ಬಿಎಸ್​ ಯಡಿಯೂರಪ್ಪ ಸಿಸಿಬಿ ತನಿಖೆಗೆ ಆದೇಶಿಸಿದ್ದರು. ಪ್ರಕರಣ ಸಂಬಂಧ ಬೆಂಗಳೂರಿನ ಇಬ್ಬರು ಡಾಕ್ಟರ್ ಸೇರಿ ಒಟ್ಟು 8 ಮಂದಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದರು.
ಡೇಟಾ ಎಂಟ್ರಿ ಆಪರೇಟರ್​ಗಳು ಹಾಗೂ ಅಸಿಸ್ಟೆಂಟ್​​ಗಳಮನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
Youtube Video
ಬಿಬಿಎಂಪಿ ದಕ್ಷಿಣ ವಲಯದ ಕೋವಿಡ್​ ವಾರ್​ ರೂಂ ಅಧಿಕಾರಿಗಳು ಸೇರಿದಂತೆ ಅನೇಕರ ಹೆಸರಿನಲ್ಲಿ ಸುಮಾರು 4,000ಕ್ಕೂ ಹೆಚ್ಚು ಬೆಡ್​ಗಳನ್ನು ಬುಕ್​ ಮಾಡಿದ್ದು, ಇವುಗಳನ್ನು ಲಕ್ಷ ಲಕ್ಷಕ್ಕೆ ಮಾರಾಟ ಮಾಡುತ್ತಿದ್ದರು. ಇವರೆಲ್ಲಾ ಐಸಿಯು, ವೆಂಟಿಲೇಟರ್​ ಆಕ್ಸಿಜನ್​ ಬೆಡ್​ಗಳನ್ನು ಬ್ಲಾಕ್​ ಮಾಡಿಕೊಳ್ಳುತ್ತಿದ್ದರು ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದರು.
Published by: Latha CG
First published: May 12, 2021, 12:41 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories