Bengaluru Corona Cases: 4ನೇ ಅಲೆ ಭೀತಿ: ಬೆಂಗಳೂರಿನ ಶಾಲೆಗಳಲ್ಲಿ ಕೊರೋನಾ ಸ್ಫೋಟ; ಎಚ್ಚರ ಎಚ್ಚರ!

ದಾಸರಹಳ್ಳಿ ವಲಯದ ಪೀಣ್ಯ ಎರಡನೇ ಹಂತದ ಖಾಸಗಿ ಶಾಲೆಯ 5ನೇ ತರಗತಿಯ 10 ವಿದ್ಯಾರ್ಥಿಗಳಿಗೆ ಸೋಮವಾರ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಕಳೆದ ಗುರುವಾರ ರಾಜಗೋಪಾಲ ನಗರದ ಖಾಸಗಿ ಶಾಲೆಯ 5 ಮತ್ತು 6ನೇ ತರಗತಿಯ ಒಟ್ಟು 21 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿತ್ತು. 

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು: ಬಿಬಿಎಂಪಿಯ ದಾಸರಹಳ್ಳಿ ವಲಯದ (Dasarahalli, Bangalore) ಎರಡು ಶಾಲೆಯ (Schools in Bangalore) ಒಟ್ಟು 31 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು (Coronavirus) ಕಾಣಿಸಿಕೊಂಡಿದೆ. ಸೋಂಕಿತರು ಪತ್ತೆಯಾದ ತರಗತಿಯ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. ದಾಸರಹಳ್ಳಿ ವಲಯದ ಪೀಣ್ಯ ಎರಡನೇ ಹಂತದ ಖಾಸಗಿ ಶಾಲೆಯ 5ನೇ ತರಗತಿಯ 10 ವಿದ್ಯಾರ್ಥಿಗಳಿಗೆ ಸೋಮವಾರ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಕಳೆದ ಗುರುವಾರ ರಾಜಗೋಪಾಲ ನಗರದ ಖಾಸಗಿ ಶಾಲೆಯ 5 ಮತ್ತು 6ನೇ ತರಗತಿಯ ಒಟ್ಟು 21 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿತ್ತು.  ಉಳಿದ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಇತರೆ ಸಿಬ್ಬಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಕೊಠಡಿ ಹಾಗೂ ಆವರಣಕ್ಕೆ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಿ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗುತ್ತಿದೆ ಎಂದು ದಾಸರಹಳ್ಳಿ ವಲಯದ ಆರೋಗ್ಯ ವೈದ್ಯಾಧಿಕಾರಿ ಸುರೇಶ್ ರುದ್ರಪ್ಪ ಮಾಹಿತಿ ನೀಡಿದ್ದಾರೆ.

ಕಂಟೈನ್ಮೆಂಟ್ ವಲಯಗಳ ಸಂಖ್ಯೆ 21ಕ್ಕೆ ಏರಿಕೆ !

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾದರೂ ಕಂಟೈನ್ಮೆಂಟ್ ವಲಯಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಸೋಮವಾರ ಐದು ಹೊಸ ಕಂಟೈನ್ಮೆಂಟ್ ವಲಯ ಸೃಷ್ಟಿಯಾಗಿವೆ. ಈ ಮೂಲಕ ಒಟ್ಟು ಕಂಟೈನ್ಮೆಂಟ್ ವಲಯಗಳ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಮಹದೇವಪುರ ವಲಯದಲ್ಲಿ ನಾಲ್ಕು ಹಾಗೂ ದಾಸರಹಳ್ಳಿ ವಲಯದಲ್ಲಿ ಒಂದು ಹೊಸದಾಗಿ ಕಂಟೈನ್ಮೆಂಟ್ ವಲಯ ಸೃಷ್ಟಿಯಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

ಇದನ್ನೂ ಓದಿ: Covid19: ಜುಲೈ ಮೊದಲ ವಾರದಲ್ಲಿ ಕೊರೊನಾ 4ನೇ ಅಲೆ ಫಿಕ್ಸ್​! ಬೆಂಗಳೂರಲ್ಲೇ ಹೆಚ್ಚಾಗಿದೆ ಕೇಸ್

ನಗರದಲ್ಲಿ 500ರ ಗಡಿದಾಟಿದ ದೈನಂದಿನ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ ಕಳೆದ ಭಾನುವಾರ 429ಕ್ಕೆ ಇಳಿಕೆಯಾದರೆ, ಸೋಮವಾರ 400ಕ್ಕೆ ಕುಸಿದಿದೆ. ಉಳಿದಂತೆ ನಗರದಲ್ಲಿ ಸೋಮವಾರ 358 ಮಂದಿ ಗುಣಮುಖರಾಗಿದ್ದು, ಸೋಂಕಿತರ ಸಾವಿನ ಬಗ್ಗೆ ವರದಿಯಾಗಿಲ್ಲ. ನಗರದಲ್ಲಿ 3,542 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ 29 ಮಂದಿ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಮೂವರು ಐಸಿಯು ಮತ್ತು ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದೆಲ್ಲರೂ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜುಲೈನಲ್ಲಿ ನಾಲ್ಕನೇ ಸಂಭವ.. ಐಐಟಿ ತಜ್ಞರ ಅಭಿಪ್ರಾಯ !

ನಿನ್ನೆ ಕೊರೋನಾ ಸಂಬಂಧ ಆರೋಗ್ಯ ಸಚಿವ ಸುಧಾಕರ್ ಕೂಡ ಸಭೆ ನಡೆಸಿ ಅಗತ್ಯ ಕ್ರಮಗಳ ಭರವಸೆ ನೀಡಿದ್ದಾರೆ. ಐಐಟಿ ತಜ್ಞರ ಪ್ರಕಾರ ಜುಲೈನಲ್ಲಿ ನಾಲ್ಕನೇ ಸಾಧ್ಯತೆ ಎಂದಿದ್ದಾರೆ. ಈ ನಡುವೆ ಬೆಂಗಳೂರಲ್ಲಿ ರಾಜ್ಯದ ಸಿಂಹಪಾಲು ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಆಸ್ಪತ್ರೆ ದಾಖಲಾತಿ ಕಡಿಮೆಯಿದ್ದರೂ ಕೂಡ ಕೊರೋನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದಾರೆ. ಹೀಗಾಗಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಪಾಲನೆ ಕಡ್ಡಾಯವಾಗಿದೆ. ಮಾಸ್ಕ್ ಧರಿಸದೇ ಇದ್ದರೆ ದಂಡದ ಪ್ರಸ್ತಾಪ ಇದ್ದರೂ ಕೂಡ, ಸದ್ಯಕ್ಕೆ ಅದರ ಅಗತ್ಯ ಇಲ್ಲ ಎಂದು ಸಚಿವರ ಸ್ಪಷ್ಟಪಡಿಸಿದ್ದಾರೆ.

ಬಿಬಿಎಂಪಿ ಅಧಿಕಾರಿಗಳ ಪ್ರತ್ಯೇಕ ಸಭೆ

ಅದರ ಜತೆ ಡೆಂಗಿ ಪ್ರಕರಣಗಳ ಸಂಖ್ಯೆ ಕೂಡ ಉಲ್ಬಣಿಸಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರು.ಬೆಂಗಳೂರು ಮೆಡಿಕಲ್‌ ಕಾಲೇಜಿನಲ್ಲಿ ಜಿನೋಮಿಕ್‌ ಸಿಕ್ವೆನ್ಸಿಂಗ್‌ ಲ್ಯಾಬ್‌ ಆರಂಭಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೊಸ ರೂಪಾಂತರಿ ತಳಿಗಳ ಪತ್ತೆಗೆ ಲ್ಯಾಬ್‌ನಿಂದ ಸಹಾಯವಾಗುತ್ತದೆ. ಉಳಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಇಲಾಖೆ ತೆಗೆದುಕೊಂಡಿದೆ ಎಂದು ವಿವರಿಸಿದರು. ತಾಂತ್ರಿಕ ಸಲಹಾ ಸಮಿತಿ ಸಭೆ ನಂತರ ಇಲಾಖೆಯ ಪರಿಶೀಲನಾ ಸಭೆಯನ್ನೂ ನಡೆಸಲಾಗಿದೆ. ವಿಶೇಷವಾಗಿ ನಮ್ಮ ಕ್ಲಿನಿಕ್‌ಗಳ ಆರಂಭಕ್ಕೆ ಕಾಲಮಿತಿಯಲಲಿ ತ್ವರಿತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
Published by:Kavya V
First published: