ಬೆಂಗಳೂರು (ಜು 1): ಭೂ ವ್ಯಾಜ್ಯಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಹಾಗೂ ಲಂಚ ಪಡೆದ ಆರೋಪ ಎದುರಿಸುತ್ತಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ (DC of Bangalore City) ಜೆ. ಮಂಜುನಾಥ್ (J Manjunath) ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಜಿಲ್ಲಾಧಿಕಾರಿ ವಿರುದ್ಧ ಹೈಕೋರ್ಟ್ (High Court) ಚಾಟಿ ಬೀಸಿದ ಬಳಿಕ ನಿನ್ನೆಯಷ್ಟೇ ಎಸಿಬಿ ತಂಡವು ಡಿಸಿ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಈ ಬೆನ್ನಲ್ಲೇ ಮುಖ್ಯಮಂತ್ರಿಗಳ (Chief Ministers) ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಮಂಜುನಾಥ್ ಅವರನ್ನು ರಾಜ್ಯ ಸರ್ಕಾರ (State Govt) ವರ್ಗಾವಣೆ ಮಾಡಿ ಇಂದು ಆದೇಶ ಹೊರಡಿಸಿದೆ.
ಜಿಲ್ಲಾಧಿಕಾರಿ ಸ್ಥಾನದಿಂದ ಎತ್ತಂಗಡಿ
ಬೆಂಗಳೂರು ನಗರ ಜಿಲ್ಲಾಧಿಕಾರಿ ಸ್ಥಾನದಿಂದ ಎತ್ತಂಗಡಿ ಮಾಡಿರುವ ಜೆ ಮಂಜುನಾಥ್ ಅವರನ್ನು ಮಕ್ಕಳ ಹಕ್ಕುಗಳ ಸಂರಕ್ಷಣೆ ಯೋಜನೆಯ ನಿರ್ದೇಶಕರ ಹುದ್ದೆಗೆ ವರ್ಗಾಯಿಸಿದೆ. ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಂಗಪ್ಪ ಅವರಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಎಸಿಬಿ ಅಧಿಕಾರಿಗಳಿಂದ ಮಂಜುನಾಥ್ ವಿಚಾರಣೆ
ಬೆಂಗಳೂರಿನ ಎಸಿಬಿ ಕಚೇರಿಯಲ್ಲಿ ಇಬ್ಬರು ಡಿವೈಎಸ್ಪಿ ಗಳ ತಂಡವು
ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ್ ವಿಚಾರಣೆ ನಡೆಸುತ್ತಿದೆ. ಇಂದು ಬೆಳಗ್ಗೆ 10 ಗಂಟೆಯಿಂದ ಸತತ 8 ಗಂಟೆಗಳ ಕಾಲ
ವಿಚಾರಣೆ ನಡೆಸಿದ್ದು, ಇನ್ನೂ ಮುಂದುವರಿದಿದೆ. ಇಡೀ ಪುಕCollectorರಣ ಸಂಬಂಧ ವಿಸ್ತ್ರತ ತನಿಖೆ ನಡೆಸಿ ಜುಲೈ 4 ರಂದು ವರದಿ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿದೆ.
ಇದನ್ನೂ ಓದಿ: Maharashtra Politics: ಕೊಟ್ಟ ಮಾತಿಗೆ ತಪ್ಪಿದ ಅಮಿತ್ ಶಾ; ಉದ್ಧವ್ ಠಾಕ್ರೆ ಆರೋಪ
ಡಿವೈಎಸ್ ಪಿ ಬಸವರಾಜ್ ಅವರು ಭ್ರಷ್ಟಾಚಾರ ಪುಕರಣದ ಸಂಬಂಧ ಡಿಸಿ ಮಂಜುನಾಥ್ ರಿಂದ ಹೇಳಿಕೆ
ದಾಖಲಿಸಿಕೊಳ್ಳುತ್ತಿದ್ದಾರೆ. ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಡಿ ಸಿ ಮಂಜುನಾಥ್ ವಿಚಾರಣೆ ನಡೆದಿದೆ.
ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಅವರು ದಾಳಿಗೆ ಸಂಬಂಧಿಸಿದಂತೆ ಎಸ್ ಪಿ ಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಭ್ರಷ್ಟಾಚಾರ ಆರೋಪ
ಎಸಿಬಿ ಎಸ್ ಪಿ ಗಳಾದ ಉಮಾ ಪುಶಾಂತ್, ಹರೀಶ್ ಪಾಂಡೆ, ಯತೀಶ್ ಚಂದ್ರ ಎಡಿಜಿಪಿಗೆ ಮಾಹಿತಿ ಒದಗಿಸುತ್ತಿದ್ದಾರೆ. ದಾಳಿ ವೇಳೆ
ಹಾಗೂ ಆ ಬಳಿಕ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಜಮೀನು ಸ್ವಾಮ್ಯದ ವಿಷಯದಲ್ಲಿ ಬೆಂಗಳೂರು
ಜಿಲ್ಲಾಧಿಕಾರಿ ಕಚೇರಿಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಲಂಚ ಸ್ವೀಕರಿಸುವಾಗಲೇ ಎಸಿಬಿ ಅಧಿಕಾರಿಗಳು ದಾಳಿ
ನಡೆಸಿ ಉಪ ತಹಶೀಲ್ದಾರ್ ಮಹೇಶ್ ಮತ್ತು ಸಹಾಯಕ ಸಿಬ್ಬಂದಿಯನ್ನು ಬಂಧಿಸಿದ್ದರು.
5 ಲಕ್ಷ ರೂಪಾಯಿ ಲಂಚ ಪಡೆದು ಸಿಕ್ಕಿಬಿದ್ದ ಜಿಲ್ಲಾಧಿಕಾರಿ
ಕಳೆದ ಮೇ 21ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಉಪ ತಹಶೀಲ್ದಾರ್ ಮಹೇಶ್ ಎಂಬುವರು ಗುತ್ತಿಗೆ ನೌಕರ ಚೇತನ್ ಆಲಿಯಾಸ್ ಚಂದ್ರು ಎಂಬುವರಿಂದ 5 ಲಕ್ಷ ರೂಪಾಯಿ ಲಂಚ ಪಡೆದು ಎಸಿಬಿ ಕೈಗೆ ಸಿಕ್ಕಿಬಿದ್ದಿದ್ದರು. ಈ ಪ್ರಕರಣದಲ್ಲಿ ಜಿಲ್ಲಾಧಿಕಾರಿ ಪಾತ್ರದ ಬಗ್ಗೆ ಆರೋಪ ಕೇಳಿಬಂದಿತ್ತು.
ಇದನ್ನೂ ಓದಿ: Karnataka Politics: ದೇವೇಗೌಡರ ಪರ ನಿಂತ್ರು ಡಿಕೆ ಬ್ರದರ್ಸ್; ಕೆ.ಎನ್ ರಾಜಣ್ಣಗೆ ನೋಟಿಸ್
ಹೀಗಾಗಿ ಎಸಿಬಿ ತನಿಖಾಧಿಕಾರಿಗಳು ಡಿಸಿ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದರು. ಈ ಪ್ರಕರಣದಲ್ಲಿ ಜಿಲ್ಲಾಧಿಕಾರಿಗಳ ಪಾತ್ರವಿರಬಹುದೆಂದು ಸಂಶಯ ವ್ಯಕ್ತಪಡಿಸಿದ ಹೈಕೋರ್ಟ್, ಭೂ ವ್ಯಾಜ್ಯ ಪ್ರಕರಣದಲ್ಲಿ ಜಿಲ್ಲಾಧಿಕಾರಿ ಮಂಜುನಾಥ್ ಅವರನ್ನೂ ಆರೋಪಿಯನ್ನಾಗಿ ಸೇರಿಸುವಂತೆ ಆದೇಶಿಸಿತ್ತು. ಜಿಲ್ಲಾಧಿಕಾರಿಗಳ ಪಾತ್ರದ ಬಗ್ಗೆ ಸರಿಯಾಗಿ ತನಿಖೆ ನಡೆಸದ ಎಸಿಬಿಯನ್ನು ಹೇಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ