Bengaluru Rains: ಬಿಜೆಪಿ ಪ್ರಣಾಳಿಕೆಯ ಭರವಸೆಗಳು ಆಕರ್ಷಕ, ಮನಮೋಹಕ, ಆಡಳಿತ ಯಾತನಾದಾಯಕ; ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರನ್ನು ವಿಶ್ವದರ್ಜೆಯ ನಗರ ಮಾಡುವೆವು ಎಂದ ಬಿಜೆಪಿ ಈಗ ರಸ್ತೆಗುಂಡಿಗಳ ನಗರ, ಮುಳುಗುವ ನಗರವನ್ನಾಗಿ ಮಾಡಿದೆ. ಐಟಿ ಕಂಪೆನಿಗಳು ಗುಳೆ ಹೊರಟರೂ ಕೊಟ್ಟ ಭರವಸೆ ನೆನಪಾಗಲಿಲ್ಲವೇ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಬೆಂಗಳೂರು ಮಳೆ

ಬೆಂಗಳೂರು ಮಳೆ

  • Share this:
ರಾಜಧಾನಿ ಬೆಂಗಳೂರಿನಲ್ಲಿ (Bengaluru Rain Effect) ಉಂಟಾಗಿರುವ ಮಳೆ ಹಾನಿಗೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಸರ್ಕಾರದ (BJP Government) ವಿರುದ್ಧ ಕಾಂಗ್ರೆಸ್ ನಾಯಕರು (Congress Leaders) ವಾಗ್ದಾಳಿ ನಡೆಸಿದ್ದಾರೆ. ಮುಳುಗುವುದರಲ್ಲಿ ಹಲವು ವಿಧಗಳಿವೆ. ರಾಜ್ಯದ ಜನ ಮಳೆಯಲ್ಲಿ (Rain) ಮುಳುಗಿದ್ದಾರೆ, ಸಚಿವರು (Minister) ನಿದ್ದೆಯಲ್ಲಿ ಮುಳುಗಿದ್ದಾರೆ. ಪ್ರವಾಹ (Flood) ಪರಿಶೀಲನೆಯ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಸಚಿವ  ಆರ್​ ಅಶೋಕ್ (Minister R Ashok) ಅವರ ಭರ್ಜರಿ ನಿದ್ದೆ. 'ಹಲಾಲ್ ಕಟ್' ಎಂದರೆ ಥಟ್‌ನೆ ಎಚ್ಚರಾಗುತ್ತಾರೆ! 'ಚಿಂತೆ ಇಲ್ಲದವಗೆ ಸಂತೆಲೂ ನಿದ್ದೆ' ಎಂಬ ಮಾತು ಸಚಿವರಿಗೇ ಹೇಳಿದ್ದೇನೋ ಎಂದು ಆರ್​. ಅಶೋಕ್ ಅವರ ಫೋಟೋ ಹಂಚಿಕೊಂಡು ಕಾಂಗ್ರೆಸ್ (Congress) ವಾಗ್ದಾಳಿ ನಡೆಸಿದೆ.

ಬಿಜೆಪಿ ಪ್ರಣಾಳಿಕೆಯ ಭರವಸೆಗಳು ಆಕರ್ಷಕ, ಮನಮೋಹಕ. ಆಡಳಿತ ಮಾತ್ರ ಜನತೆಗೆ ಯಾತನಾದಾಯಕ, ಭ್ರಷ್ಟಾಚಾರವೇ ಕಾಯಕ.  ಬೆಂಗಳೂರನ್ನು ವಿಶ್ವದರ್ಜೆಯ ನಗರ ಮಾಡುವೆವು ಎಂದ ಬಿಜೆಪಿ ಈಗ ರಸ್ತೆಗುಂಡಿಗಳ ನಗರ, ಮುಳುಗುವ ನಗರವನ್ನಾಗಿ ಮಾಡಿದೆ. ಐಟಿ ಕಂಪೆನಿಗಳು ಗುಳೆ ಹೊರಟರೂ ಕೊಟ್ಟ ಭರವಸೆ ನೆನಪಾಗಲಿಲ್ಲವೇ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಸರ್ಕಾರವೇ ಹೊಣೆ: ಡಿಕೆಶಿ ವಾಗ್ದಾಳಿ

ರಾಜ್ಯ ಸರ್ಕಾರಕ್ಕೆ ಬೆಂಗಳೂರಿನ ಬೆಲೆ ಗೊತ್ತಿಲ್ಲ. ಬಿಜೆಪಿಯವರು ಬ್ರ್ಯಾಂಡ್ ಬೆಂಗಳೂರನ್ನು ಹಾಳು ಮಾಡಿದ್ದಾರೆ. ಮಳೆಯಿಂದ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದ್ದರೂ ಏನಾದರೂ ಕ್ರಮ ಕೈಗೊಂಡಿದ್ದಾರಾ? ಬಿಜೆಪಿ ಬೆಂಗಳೂರಿನ ಗೌರವ ಉಳಿಸುವ ಕೆಲಸ ಮಾಡಬೇಕಿತ್ತು. ಈ ಅವಾಂತರಕ್ಕೆ ಮುಖ್ಯಮಂತ್ರಿಗಳು ಹಾಗೂ ಸರ್ಕಾರವೇ ಹೊಣೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

ಇದನ್ನೂ ಓದಿ:  Bengaluru Rains: ರಸ್ತೆಗಳು ಜಲಾವೃತ, ಟ್ರ್ಯಾಕ್ಟರ್​ಗಳಲ್ಲಿ ಪ್ರಯಾಣ; ಗುಡ್ಡ ಕುಸಿತ, ಎಲ್ಲಿ ನೋಡಿದ್ರೂ ಟ್ರಾಫಿಕ್ ಜಾಮ್

ಬೆಂಗಳೂರು ಉಸ್ತುವಾರಿ ಸಚಿವರಿಲ್ಲ ಯಾಕೆ?

ಈ ಸರ್ಕಾರದಲ್ಲಿ ಬೆಂಗಳೂರು ಉಸ್ತುವಾರಿ ಸಚಿವರಿಲ್ಲ ಯಾಕೆ? 50% ಕಮಿಷನ್ ಇದೆ ಎಂದು ಅವರು ಉಸ್ತುವಾರಿಗಾಗಿ ಕಿತ್ತಾಡುತ್ತಿದ್ದಾರಾ?  ಮಳೆ ಸುರಿದು ವ್ಯವಸ್ಥೆ ಇಷ್ಟು ಹದಗೆಟ್ಟಿದ್ದರೂ ಒಂದು ಟಾಸ್ಕ್ ಫೋರ್ಸ್ ರಚಿಸಲು ಸಾಧ್ಯವಾಗಿಲ್ಲ ಯಾಕೆ? ಇವರು ಜನೋತ್ಸವ ಹಾಗೂ ಭ್ರಷ್ಟೋತ್ಸವದಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರಾ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.ನಾಳೆಯಿಂದ ಕೇಂದ್ರ ಅಧ್ಯಯನ ತಂಡದಿಂದ ಮಳೆ ಹಾನಿ ಪ್ರದೇಶದ ಪರಿಶೀಲನೆ ನಡೆಸಲಿದೆ. ಇಂದು ರಾತ್ರಿ ಬೆಂಗಳೂರಿಗೆ ಕೇಂದ್ರದ ತಂಡ ಬರಲಿದ್ದು,  ಸೆಪ್ಟೆಂಬರ್ 7, 8, 9 ರಂದು  ರಾಜ್ಯದ ವಿವಿಧ ಭಾಗಗಳಲ್ಲಿ ಸದಸ್ಯರು ಪ್ರವಾಸ ಮಾಡಲಿದ್ದಾರೆ.  ಬುಧವಾರ ಬೆಳಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಜೊತೆ ಕೇಂದ್ರ ತಂಡದ ಸದಸ್ಯರು ಸಭೆ ನಡೆಸಲಿದ್ದಾರೆ.

ಮೂರು ದಿನ ಕೇಂದ್ರ ತಂಡದಿಂದ ಅಧ್ಯನ

ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿರುವ ಕೇಂದ್ರದ ತಂಡ ಮಳೆಯಿಂದಾದ ಹಾನಿ ಬಗ್ಗೆ ಪರಿಶೀಲನೆ ನಡೆಸಲಿದೆ. ಈಗಾಗಲೇ ಆಗಸ್ಟ್​ನಲ್ಲಿ ಸುರಿದ ಮಳೆಯಿಂದಾಗಿ 11 ಸಾವಿರ ಕೋಟಿ ನಷ್ಟವಾಗಿದೆ ಎಂದು ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಈ ವರದಿ ಆಧರಿಸಿಯೇ ಮೂರು ದಿನ ಕೇಂದ್ರದ ತಂಡ ಅಧ್ಯಯನ ನಡೆಸಲಿದೆ.

ಸೆಪ್ಟೆಂಬರ್ ಮೊದಲ ವಾರದಲ್ಲಿ ಸುರಿದ ಮಳೆಯಿಂದಾಗಿ ಆಗಿರುವ ಹಾನಿ ಬಗ್ಗೆ  ಕೇಂದ್ರದ ಅಧ್ಯಯನ ತಂಡದ ಜೊತೆ ಚರ್ಚಿಸಲು ಸಿಎಂ ಬೊಮ್ಮಾಯಿ ಹಾಗೂ ಸಚಿವರು ಮುಂದಾಗಿದ್ದಾರೆ.

ಇದನ್ನೂ ಓದಿ:  Bellary: ಮೃತ ಮಗನನ್ನು ಬದುಕಿಸಿಕೊಳ್ಳಲು ಶವವನ್ನ ಉಪ್ಪಿನ ರಾಶಿಯಲ್ಲಿಟ್ರು; ಬಳ್ಳಾರಿಯಲ್ಲೊಂದು ವಿಚಿತ್ರ ಘಟನೆ

ಸೆ.8ರಂದು ಸಂಪುಟ ಸಭೆ

ಇತ್ತ ಸೆಪ್ಟೆಂಬರ್ 8ರಂದು ಸಂಜೆ ನಾಲ್ಕು ಗಂಟೆಗೆ ಮುಖ್ಯಮಂತ್ರಿಗಳು ಸಭೆ ಕರೆದಿದ್ದಾರೆ. ಮಳೆ ಹಾನಿಗೆ ಪರಿಹಾರವಾಗಿ ವಿಶೇಷ ಪ್ಯಾಕೇಜ್ ಘೋಷಣೆ ಸಂಬಂಧ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ.
Published by:Mahmadrafik K
First published: