Bengaluru Rain: ಸಿಲಿಕಾನ್ ಸಿಟಿಯಲ್ಲಿ ವರುಣ ಸಿಂಚನ; ಬೇಸಿಗೆಯ ಆರಂಭದ ಮಳೆಗೆ ತಂಪಾದ ಉದ್ಯಾನ ನಗರಿ

ನಗರದ ಕಾರ್ಪೋರೇಷನ್, ಮೆಜೆಸ್ಟಿಕ್, ಮೈಸೂರು ಬ್ಯಾಂಕ್, ಕೆ.ಆರ್.​ ಮಾರುಕಟ್ಟೆ ಸೇರಿದಂತೆ ಹಲವೆಡೆ ಮಳೆಯಾಗಿದೆ

G Hareeshkumar | news18-kannada
Updated:March 6, 2020, 11:03 PM IST
Bengaluru Rain: ಸಿಲಿಕಾನ್ ಸಿಟಿಯಲ್ಲಿ ವರುಣ ಸಿಂಚನ; ಬೇಸಿಗೆಯ ಆರಂಭದ ಮಳೆಗೆ ತಂಪಾದ ಉದ್ಯಾನ ನಗರಿ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು(ಮಾ.06) : ಬೆಂಗಳೂರು ನಗರದ ಹಲವು ಕಡೆ ಶುಕ್ರವಾರ ರಾತ್ರಿ ಮಳೆಯ ಸಿಂಚನವಾಗಿದೆ. ನಗರದ ಕಾರ್ಪೋರೇಷನ್, ಮೆಜೆಸ್ಟಿಕ್, ಮೈಸೂರು ಬ್ಯಾಂಕ್, ಕೆ.ಆರ್.​ ಮಾರುಕಟ್ಟೆ ಸೇರಿದಂತೆ  ಹಲವೆಡೆ ಮಳೆಯಾಗಿದೆ. ಬೇಸಿಗೆಯ ಆರಂಭದಲ್ಲಿಯೇ ಉತ್ತಮ ಮಳೆಯಾಗುವ ಮೂಲಕ ಸಿಲಿಕಾನ್ ಸಿಟಿಯನ್ನು ತಂಪಾಗಿಸಿದೆ. 

ಇಂದು ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಇದ್ದು, ಇನ್ನೂ ಮೂರು ದಿನ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕಳೆದ ನಾಲ್ಕು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದ್ದು, ಜನರು ಈ ವರ್ಷ ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ : ಬಿಜೆಪಿ ಸಿದ್ಧಾಂತ ಒಪ್ಪದವರಿಗೆ, ಪ್ರಶ್ನೆ ಮಾಡುವವರಿಗೆ ದೇಶದ್ರೋಹಿ ಪಟ್ಟ; ಮಾಜಿ ಸಚಿವ ಪ್ರಿಯಾಂಕ್​​​ ಖರ್ಗೆ ಕಿಡಿ

ರಾಜ್ಯದ ಬೇರೆ ಬೇರೆ ಕಡೆ ಹಲವು ದಿನಗಳಿಂದ ಸುರಿಯುತ್ತಿರುವ ಮಳೆ ಕರ್ನಾಟಕದ ಕರಾವಳಿ ಪ್ರದೇಶ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮಾರ್ಚ್ 7 ರವರೆಗೆ ಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 
First published: March 6, 2020, 9:55 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading