Bengaluru Gangrape Case: ಯುವತಿಯ ಹೇಳಿಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಿರುವ ಪೊಲೀಸರು

ಯುವತಿಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಪೊಲೀಸರ ಸಿದ್ದತೆ ನಡೆಸಿದ್ದಾರೆ. ವೈದ್ಯಕೀಯ ಪರೀಕ್ಷೆ ಬಳಿಕ ಪೊಲೀಸರು ಸ್ಥಳ ಮಹಜರು ಮಾಡಲಿದ್ದಾರೆ.

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

 • Share this:
  ಬೆಂಗಳೂರು(ಮೇ 29): ಬೆಂಗಳೂರಿನಲ್ಲಿ ಬಾಂಗ್ಲಾ ಯುವತಿನ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ರಾಮಮೂರ್ತಿನಗರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಈ ಕೇಸ್​ಗೆ ಸಂಬಂಧಿಸಿದಂತೆ ನಿನ್ನೆ ಮೂವರು ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಲಾಗಿದೆ.  ಗ್ಯಾಂಗ್‌ರೇಪ್‌ ಪ್ರಕರಣಕ್ಕೆ ಸಂಬಂಧ ರಾಮಮೂರ್ತಿ ನಗರ ಪೊಲೀಸರು ಈಗಾಗಲೇ ಐವರನ್ನು ಬಂಧಿಸಿದ್ದಾರೆ. ಬಾಂಗ್ಲಾದ ಓರ್ವ ಯುವತಿ, ಸಾಗರ್, ರಿದಾಯ್ ಬಾಬು, ಮೊಹಮ್ಮದ್ ಬಾಬಾಶೇಕ್, ಹೈದರಾಬಾದ್‌ನ ಹಕೀಲ್ ಬಂಧಿತ ಆರೋಪಿಗಳು.

  ರಾಮಮೂರ್ತಿನಗರ ಪೊಲೀಸರು ಇಂದು ಯುವತಿಯ ಹೇಳಿಕೆಯನ್ನು ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ. ಯುವತಿಗೆ ಕಿರುಕುಳ ನೀಡದವರು ಯಾರು? ವಿಡಿಯೋದಲ್ಲಿ ಇರುವ ಅಷ್ಟು ಮಂದಿಯೇ ದೌರ್ಜನ್ಯ ಎಸಗಿದ್ದಾರಾ? ಅಥವಾ ಇನ್ನೂ ಬೇರೆಯವರು ಭಾಗಿಯಾಗಿದ್ದಾರಾ? ಯಾವ ಕಾರಣಕ್ಕಾಗಿ ಗಲಾಟೆಯಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರು? ಆರೋಪಿಗಳು ಹೇಗೆ ಪರಿಚಯ? ದೂರು ಕೊಡದೇ ಇರಲು ಕಾರಣವೇನು?ಯಾರಾದರೂ ಬೆದರಿಕೆ ಹಾಕಿದ್ದಾರಾ ಎಂದು ಕೃತ್ಯದ ಬಗ್ಗೆ ಪೊಲೀಸರು ಯುವತಿಯ ಹೇಳಿಕೆ ಪಡೆಯಲಿದ್ದಾರೆ. ಯುವತಿ ಹೇಳಿಕೆ ಪಡೆದ ಬಳಿಕ ಮ್ಯಾಜಿಸ್ಟ್ರೇಟ್ ಮುಂದೆ 164 ಸ್ಟೇಟ್ಮೆಂಟ್ ಮಾಡಿಸಲು ಪೊಲೀಸರು ಚಿಂತನೆ ನಡೆಸಿದ್ದಾರೆ.

  ಜೊತೆಗೆ ಯುವತಿಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಪೊಲೀಸರ ಸಿದ್ದತೆ ನಡೆಸಿದ್ದಾರೆ. ವೈದ್ಯಕೀಯ ಪರೀಕ್ಷೆ ಬಳಿಕ ಪೊಲೀಸರು ಸ್ಥಳ ಮಹಜರು ಮಾಡಲಿದ್ದಾರೆ. ನಿನ್ನೆ ರಾತ್ರಿ ಪೊಲೀಸರು ಕೆಲಕಾಲ ಯುವತಿ ವಿಚಾರಣೆ ನಡೆಸಿದ್ದರು. ರಾಮಮೂರ್ತಿನಗರ ಪೊಲೀಸರು ಅತ್ಯಾಚಾರ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ನಿನ್ನೆ ರಾಮಮೂರ್ತಿನಗರ ಪೊಲೀಸರು ಕೇರಳದಲ್ಲಿದ್ದ ಯುವತಿಯನ್ನು ಬೆಂಗಳೂರಿಗೆ ಕರೆತಂದಿದ್ದಾರೆ.

  ಇದನ್ನೂ ಓದಿ:Petrol Diesel Price Hike: 3 ನಗರಗಳಲ್ಲಿ 100 ರೂ. ದಾಟಿದರೂ ಪೆಟ್ರೋಲ್-ಡೀಸೆಲ್ ಬೆಲೆ ಏರಿಸುವುದನ್ನು ಬಿಡದ ಕೇಂದ್ರ ಸರ್ಕಾರ

  ಬಂಧಿತ ಬಾಂಗ್ಲಾ ಆರೋಪಿಗಳ ಬಳಿ ಯಾವುದೇ ದಾಖಲೆ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಪಾಸ್ ಪೋರ್ಟ್, ಐಡಿ ಕಾರ್ಡ್ ಆಗಲಿ ಏನು ಪತ್ತೆಯಾಗಿಲ್ಲ. ಆರೋಪಿಗಳು ಅಕ್ರಮವಾಗಿ ಭಾರತಕ್ಕೆ ನುಸುಳಿ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರ ವಿಚಾರಣೆ ವೇಳೆ ಪಾಸ್ ಪೋರ್ಟ್ ಸೇರಿದಂತೆ ಯಾವುದೇ ದಾಖಲೆ ಬಗ್ಗೆ ಆರೋಪಿಗಳು ಬಾಯಿ ಬಿಡಲಿಲ್ಲ. ಆರೋಪಿಗಳು ನಾಲ್ಕೈದು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿದ್ದಾರೆ. ಆರೋಪಿ ಮೊಹಮ್ಮದ್‌ ಬಾಬು ಶೇಕ್, ತಾನು ಬಡಗಿ ಕೆಲಸ ಮಾಡುತ್ತಿರುವ ಮಾಹಿತಿ ನೀಡಿ ಆಧಾರ್ ಕಾರ್ಡ್ ಮಾಡಿಸಿಕೊಂಡಿದ್ದ ಎನ್ನಲಾಗಿದೆ.

  ರಿದಯ್ ಬಾಬು ಯೂಟ್ಯೂಬರ್ ಆಗಿದ್ದ ಎಂದು ಮಾಹಿತಿ  ಲಭ್ಯವಾಗಿದೆ. ಹೈದರಾಬಾದ್ ಮೂಲದ ಹಕೀಲ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದನಂತೆ . ಆರೋಪಿಗಳು ಅಕ್ರಮ ವಲಸೆ ಬಂದು ಬೆಂಗಳೂರು ನಗರದಲ್ಲಿ ನೆಲೆಸಿದ್ದರು.  ಫಾರಿನರ್ಸ್ ಆಕ್ಟ್ ಅಡಿಯಲ್ಲಿ ಆರೋಪಿಗಳ ಮೇಲೆ ಕ್ರಮ ಕೈಗೊಳ್ಳಲು ಪೊಲೀಸರು ಸಿದ್ದತೆ ನಡೆಸಿದ್ದಾರೆ.

  ಇದನ್ನೂ ಓದಿ:Gold Price Today: ಇಂದೂ ಕೂಡ ಚಿನ್ನದ ಬೆಲೆಯಲ್ಲಿ ಇಳಿಕೆ; ಬಂಗಾರ ಖರೀದಿಗೆ ಇದೇ ಸೂಕ್ತ ಸಮಯ

  ಆರೋಪಿಗಳು ಯುವತಿ ಮೇಲಿನ ದ್ವೇಷಕ್ಕೆ ಆಕೆಯ ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದರು ಎಂದು ತಿಳಿದು ಬಂದಿದೆ. ಆರೋಪಿಗಳು ಚಿತ್ರೀಕರಿಸಿದ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಬಾಂಗ್ಲಾದೇಶ ಸೇರಿದಂತೆ ಭಾರತದ ಈಶಾನ್ಯ ರಾಜ್ಯಗಳಲ್ಲಿ ವಿಡಿಯೋ ವೈರಲ್ ಆಗಿತ್ತು. ಅಸ್ಸಾಂ ರಾಜ್ಯದ ಪೊಲೀಸರಿಂದಲೂ ವಿಡಿಯೋ ಕುರಿತಾಗಿ ತನಿಖೆ ನಡೆದಿತ್ತು. ಕೃತ್ಯದಲ್ಲಿ ಬಾಂಗ್ಲಾದೇಶದ ಪ್ರಜೆಗಳು ಭಾಗಿಯಾರುವುದು ಬೆಳಕಿಗೆ ಬಂದಿತ್ತು. ಹೀಗಾಗಿ ಬಾಂಗ್ಲಾ ದೇಶದ ಪೊಲೀಸರಿಗೆ ಮಾಹಿತಿ ರವಾನೆ ಮಾಡಲಾಗಿತ್ತು. ಆ ಬಳಿಕ ಬಾಂಗ್ಲಾ ಪೊಲೀಸರು ಸಂತ್ರಸ್ಥೆ ಕುಟುಂಬದ ಸದಸ್ಯರನ್ನು ಪತ್ತೆಮಾಡಿದ್ದರು. ಆರೋಪಿಗಳ ಕುರಿತು ಬೆಂಗಳೂರು ಪೊಲೀಸರಿಗೆ ಮಾಹಿತಿ ರವಾನಿಸಲಾಗಿತ್ತು. ಬಾಂಗ್ಲಾ ಪೊಲೀಸರು ಬೆಂಗಳೂರು ಪೊಲೀಸ್ ಕಮೀಷನರ್ ಕಮಲ್ ಪಂತ್ ಗೆ ಮಾಹಿತಿ ನೀಡಿದ್ದರು.

  ಕೂಡಲೇ ಪೂರ್ವ ವಿಭಾಗ ಡಿಸಿಪಿ ಡಾ. ಶರಣಪ್ಪ ಅವರಿಗೆ ತನಿಖೆ ನಡೆಸಲು ಕಮಲ್​ ಪಂತ್​ ಸೂಚನೆ ನೀಡಿದ್ದರು. ಅದರಂತೆ ತನಿಖೆ ನಡೆಸಲು ಮುಂದಾದ ಪೊಲೀಸರು ಆರೋಪಿಗಳ ಇರುವಿಕೆಯನ್ನು ಪತ್ತೆಹಚ್ಚಿದ್ದರು. ಆವಲಹಳ್ಳಿಯಲ್ಲಿ ಆರೋಪಿಗಳು ತಲೆಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿ ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದರು. ಸದ್ಯ ಆರೋಪಿಗಳನ್ನ ಬಂಧಿಸಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.
  Published by:Latha CG
  First published: