Zameer Ahmed Khan: ಕಾಂಗ್ರೆಸ್​ ಶಾಸಕ ಜಮೀರ್ ಅಹ್ಮದ್​ ಮನೆ ಮೇಲೆ ಐಟಿ ದಾಳಿ

IT Raid on Zameer Ahmed Khan house: ಕಾಂಗ್ರೆಸ್​ ಶಾಸಕ ಜಮೀರ್ ಅಹ್ಮದ್ ಖಾನ್​ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಬಗ್ಗೆ ಆದಾಯ ತೆರಿಗೆ ಇಲಾಖೆ ಅನಾಮಧೇಯ ಮೂಲಗಳಿಂದ ಮಾಹಿತಿ ಸಂಗ್ರಹ ಮಾಡಿತ್ತು. 

ಜಮೀರ್ ಅಹ್ಮದ್

ಜಮೀರ್ ಅಹ್ಮದ್

 • Share this:
  ಬೆಂಗಳೂರು(ಆ.05): ಕಾಂಗ್ರೆಸ್​ ಶಾಸಕ ಜಮೀರ್ ಅಹ್ಮದ್​​ಗೆ ಬೆಳ್ಳಂ ಬೆಳಗ್ಗೆ ಐಟಿ ಅಧಿಕಾರಿಗಳು ಶಾಕ್​ ನೀಡಿದ್ದಾರೆ. ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಬಂಬೂ ಬಜಾರ್ ರಸ್ತೆಯಲ್ಲಿರುವ ಜಮೀರ್ ಅಹ್ಮದ್ ಮನೆ ಮೇಲೆ ಇಂದು ಬೆಳಗ್ಗೆ ಐಟಿ ದಾಳಿ ನಡೆದಿದೆ.  

  ಐಟಿ ಅಧಿಕಾರಿಗಳು ಎರಡು ಕಾರುಗಳಲ್ಲಿ ಬಂದಿದ್ದು, ಜಮೀರ್​ ಮನೆ ಮೇಲೆ ದಾಳಿ ನಡೆಸಿದ್ದಾರೆ. ಜಮೀರ್ ಅಹ್ಮದ್ ಸದ್ಯ ಮನೆಯಲ್ಲೇ ಇದ್ದಾರೆ ಎಂದು ತಿಳಿದು ಬಂದಿದೆ. ಐಟಿ ಅಧಿಕಾರಿಗಳು ಮನೆಯೊಳಗೆ ಎಂಟ್ರಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

  ಐಟಿ ಅಧಿಕಾರಿಗಳು  ಬೆಳಗ್ಗೆ 5. 45ಕ್ಕೆ  ಜಮೀರ್ ಮನೆಗೆ ಲಗ್ಗೆ ಇಟ್ಟಿದ್ದಾರೆ. ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಜಮೀರ್ ಅಹ್ಮದ್ ಮನೆ  ಹಾಗೂ ಫ್ಲಾಟ್​​ ಮೇಲೆ ದಾಳಿ ನಡೆಸಿ, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

  ಜಮೀರ್ ಅಹ್ಮದ್ ಖಾನ್ ಇತ್ತೀಚೆಗಷ್ಟೇ ಭವ್ಯವಾದ ಮನೆಯನ್ನು ಕಟ್ಟಿಸಿದ್ದರು. ಟ್ರಾವೆಲ್ಸ್ ಹೊರತುಪಡಿಸಿ ಜಮೀರ್ ಅಹಮದ್ ಅವರ ಇನ್ನಿತರ ವ್ಯವಹಾರಗಳ ಬಗ್ಗೆ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

  ಇದನ್ನೂ ಓದಿ:Karnataka Weather Today: ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮುಂಗಾರು; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ

  ಕಾಂಗ್ರೆಸ್​ ಶಾಸಕ ಜಮೀರ್ ಅಹ್ಮದ್ ಖಾನ್​ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಬಗ್ಗೆ ಆದಾಯ ತೆರಿಗೆ ಇಲಾಖೆ ಅನಾಮಧೇಯ ಮೂಲಗಳಿಂದ ಮಾಹಿತಿ ಸಂಗ್ರಹ ಮಾಡಿತ್ತು.  ಜಮೀರ್​​ ಕಳೆದ ಹಣಕಾಸು ವರ್ಷದಲ್ಲಿ ಘೋಷಿಸಿಕೊಂಡ ಆಸ್ತಿಗಿಂತ ದುಪ್ಪಟ್ಟು ಆಸ್ತಿ ಹೊಂದಿರುವ ಬಗ್ಗೆ ಐಟಿ ಮಾಹಿತಿಯನ್ನು ಕಲೆ ಹಾಕಿತ್ತು.

  ಹೀಗಾಗಿ ಇಂದು ಬೆಳ್ಳಂ ಬೆಳಗ್ಗೆ ಐಟಿ ಅಧಿಕಾರಿಗಳು ಜಮೀರ್​ ಅಹ್ಮದ್​ ಖಾನ್ ನಿವಾಸದ ಮೇಲೆ ದಾಳಿ ಮಾಡಿ, ಶೋಧ ನಡೆಸುತ್ತಿದ್ದಾರೆ. ಮನೆಯಲ್ಲಿರುವ ದಾಖಲಾತಿಗಳು, ಹಣ ಒಡವೆ, ಆಸ್ತಿ-ಪತ್ರಗಳನ್ನು ಹುಡುಕುತ್ತಿದ್ದಾರೆ.

  ಐಟಿ ಅಧಿಕಾರಿಗಳು ಜಮೀರ್​​​ಗೆ ಸೇರಿದ ಕಲಾಸಿಪಾಳ್ಯ ಟ್ರಾವೆಲ್ಸ್ ಕಚೇರಿ ಮತ್ತು ಬಂಬೂಬಜಾರ್ ಮನೆ ಮೇಲೆ ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ.
  Published by:Latha CG
  First published: