HOME » NEWS » State » BENGALURU LOCKDOWN UPDATES CONGRESS LEADERS CALLED MEETING TO DISCUSS ABOUT BANGALORE LOCKDOWN SCT

Bengaluru Lockdown: ಬೆಂಗಳೂರಿನಲ್ಲಿ ಲಾಕ್​ಡೌನ್ ಹಿನ್ನೆಲೆ; ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಸಭೆ

Bangalore Lockdown: ಬೆಂಗಳೂರಿನಲ್ಲಿ ಲಾಕ್​ಡೌನ್​ ಅವಧಿಯಲ್ಲಿ ಸರ್ಕಾರದ ಲೋಪದೋಷಗಳನ್ನು ಎತ್ತಿ ಹಿಡಿಯುವುದು, ಸಂಕಷ್ಟಕ್ಕೆ ಒಳಗಾಗಿರುವ ಜನರ ಸಮಸ್ಯೆಗೆ ಸ್ಪಂದನೆ, ವೈದ್ಯಕೀಯ ಪರಿಕರಗಳ ಖರೀದಿ ಅಕ್ರಮದ ವಿರುದ್ಧ ಹೋರಾಟದ ಬಗ್ಗೆಯೂ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

news18-kannada
Updated:July 14, 2020, 2:28 PM IST
Bengaluru Lockdown: ಬೆಂಗಳೂರಿನಲ್ಲಿ ಲಾಕ್​ಡೌನ್ ಹಿನ್ನೆಲೆ; ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಸಭೆ
ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಕಾಂಗ್ರೆಸ್ ನಾಯಕರ ಸಭೆ
  • Share this:
ಬೆಂಗಳೂರು (ಜು. 14): ಬೆಂಗಳೂರಿನಲ್ಲಿ ಕಳೆದ 1 ವಾರದಿಂದ ಪ್ರತಿದಿನ 1 ಸಾವಿರಕ್ಕೂ ಹೆಚ್ಚು ಕೊರೋನಾ ಕೇಸ್​ಗಳು ಪತ್ತೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ರಾತ್ರಿಯಿಂದ 1 ವಾರದವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್​ಡೌನ್ ಘೋಷಣೆ ಮಾಡಿದೆ. ಈ ಬಗ್ಗೆ ಚರ್ಚಿಸಲು ಇಂದು ಖಾಸಗಿ ಹೋಟೆಲ್​ನಲ್ಲಿ ಕಾಂಗ್ರೆಸ್ ಮುಖಂಡರು ಸಭೆ ನಡೆಸುತ್ತಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ನಾಯಕರ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಕೃಷ್ಣಭೈರೇ ಗೌಡ, ಯು.ಟಿ. ಖಾದರ್, ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡುರಾವ್, ಸಂಸದ ಡಿ.ಕೆ. ಸುರೇಶ್, ಹೆಚ್.ಸಿ. ಮಹದೇವಪ್ಪ, ಸೌಮ್ಯಾ ರೆಡ್ಡಿ, ಹ್ಯಾರೀಸ್, ನಾರಾಯಣಸ್ವಾಮಿ ಸೇರಿ ಹಲವರು ಭಾಗಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಲಾಕ್​ಡೌನ್ ಘೋಷಣೆ ಮಾಡಿರುವುದರಿಂದ ಜನಸಾಮಾನ್ಯರಿಗೆ ಕಷ್ಟವಾಗುತ್ತಿದೆ. ಎರಡು ದಿನಗಳಿಂದ ಬೆಂಗಳೂರಿನಲ್ಲಿರುವ ಜನರು ತಮ್ಮ ಊರುಗಳತ್ತ ಹೋಗುತ್ತಿದ್ದಾರೆ. ಬಡವರ್ಗದವರಿಗೆ ಲಾಕ್​ಡೌನ್​ನಿಂದಾಗಿ ಕೆಲಸವಿಲ್ಲದೆ, ಊಟಕ್ಕೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಹೀಗಾಗಿ, ಬಡವರ ಸಮಸ್ಯೆಗೆ ಸ್ಪಂದಿಸುವ ಬಗ್ಗೆ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಇದನ್ನೂ ಓದಿ:ಬೆಂಗಳೂರು ನಗರ, ಗ್ರಾಮಾಂತರದ ಜೊತೆಗೆ ಉಳಿದ‌ 6 ಜಿಲ್ಲೆಗಳು ಲಾಕ್‌ಡೌನ್?; ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಟ್ಟ ಸಿಎಂ

ಬೆಂಗಳೂರಿನಲ್ಲಿ ಲಾಕ್​ಡೌನ್​ ಅವಧಿಯಲ್ಲಿ ಉದ್ಭವಿಸಬಹುದಾದ ಸಮಸ್ಯೆಯ ಬಗ್ಗೆ ಗಮನಹರಿಸುವ ಬಗ್ಗೆ,  ಸರ್ಕಾರದ ಲೋಪದೋಷಗಳನ್ನು ಎತ್ತಿ ಹಿಡಿಯುವುದು, ಸಂಕಷ್ಟಕ್ಕೆ ಒಳಗಾಗಿರುವ ಜನರ ಸಮಸ್ಯೆಗೆ ಸ್ಪಂದನೆ, ವೈದ್ಯಕೀಯ ಪರಿಕರಗಳ ಖರೀದಿ ಅಕ್ರಮದ ವಿರುದ್ಧ ಹೋರಾಟದ ಬಗ್ಗೆಯೂ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ.

ಬೆಂಗಳೂರಿನಲ್ಲಿ 1 ವಾರ ಲಾಕ್​ಡೌನ್ ಘೋಷಣೆ ಮಾಡಿರುವುದರಿಂದ ಮುನ್ನೆಚ್ಚರಿಕೆಯಿಂದ ಜನರು ತಮ್ಮ ಊರುಗಳತ್ತ ಹೊರಟಿದ್ದಾರೆ. ಊರುಗಳಿಗೆ ಹೋಗುವವರಿಗಾಗಿ ನಿನ್ನೆ ಒಂದೇ ದಿನ 1 ಸಾವಿರಕ್ಕೂ ಅಧಿಕ ಕೆಎಸ್​ಆರ್​ಟಿಸಿ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ಇಂದು ಕೂಡ ಬೆಳಗ್ಗೆಯಿಂದ ಬಸ್​, ಕಾರು, ಬೈಕ್​ಗಳಲ್ಲಿ ಬೆಂಗಳೂರಿನಲ್ಲಿರುವ ವಲಸಿಗರು ತಮ್ಮ ಊರುಗಳತ್ತ ಹೋಗುತ್ತಿದ್ದಾರೆ. ಟ್ರಾಫಿಕ್ ಜಾಮ್ ಉಂಟಾಗಬಹುದೆಂಬ ಕಾರಣಕ್ಕೆ ನೆಲಮಂಗಲದ ಟೋಲ್​ನಲ್ಲಿ ಉಚಿತ ಸಂಚಾರಕ್ಕೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ.
ಲಾಕ್​ಡೌನ್ ಬಗ್ಗೆ ಘೋಷಣೆಯಾಗುತ್ತಿದ್ದಂತೆ ಗುರುವಾರದಿಂದಲೇ ಜನರು ಬೆಂಗಳೂರು ಬಿಡಲಾರಂಭಿಸಿದ್ದಾರೆ. ಬೆಂಗಳೂರಿನಲ್ಲಿ ಕೊರೋನಾ ಕೇಸ್​ಗಳು ಹೆಚ್ಚಾಗುತ್ತಿರುವುದರಿಂದ ಮೊದಲೇ ಆತಂಕಗೊಂಡಿದ್ದ ಜನರಿಗೆ ಲಾಕ್​ಡೌನ್​ನಿಂದಾಗಿ ಇನ್ನಷ್ಟು ಆತಂಕ ಎದುರಾಗಿದೆ. ಇಂದು ರಾತ್ರಿ 8 ಗಂಟೆಯಿಂದ ಇನ್ನೊಂದು ವಾರದವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲಿ ಲಾಕ್​ಡೌನ್ ಜಾರಿಯಾಗಲಿದೆ.
Published by: Sushma Chakre
First published: July 14, 2020, 2:28 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories