ಆನೇಕಲ್: ಪೊಲೀಸ್ ಕಾನ್ಸ್ಟೇಬಲ್ (Police Constable) ರಂಗನಾಥ್ ಎಂಬವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ರೌಡಿಗಳ ಕಾಲನ್ನು ಪೊಲೀಸರ (Police Firing) ಗುಂಡು ಸೀಳಿದೆ. ಬೆಂಗಳೂರು ಹೊರವಲಯ ಆನೇಕಲ್ (Anekal Police) ಉಪವಿಭಾಗದ ಪೊಲೀಸರು ಕ್ರಿಮಿನಲ್ಸ್ಗಳಿಗೆ ತುಪಾಕಿ ಮೂಲಕ ಖಡಕ್ ವಾರ್ನಿಂಗ್ ನೀಡಿದ್ದಾರೆ. ನಡು ರಸ್ತೆಯಲ್ಲಿ ಬೈಕ್ ನಿಲ್ಲಿಸಬೇಡ ಎಂದು ಬುದ್ಧಿವಾದ ಹೇಳಿದ್ದ ಆನೇಕಲ್ ಠಾಣೆ ಪೊಲೀಸ್ ಪೇದೆ ರಂಗನಾಥ್ ಎಂಬವರ ಮೇಲೆ ಮಾರಣಾಂತಿಕವಾಗಿ ಹಲ್ಲೆ (Assualt) ನಡೆಸಿದ್ದ ವರುಣ್ ಅಲಿಯಾಸ್ ಕೆಂಚನಿಗೆ ತಕ್ಕಶಾಸ್ತಿಯಾಗಿದೆ. ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ತಲೆ ಮರೆಸಿಕೊಂಡಿದ್ದ ವರುಣ್ ಜಿಗಣಿ ಸಮೀಪದ ಕಲ್ಲುಬಾಳು ಬಳಿ ಆನೇಕಲ್ ಠಾಣೆ ಇನ್ಸ್ಪೆಕ್ಟರ್ ಚಂದ್ರಪ್ಪ ಕಾಲಿಗೆ ಗುಂಡು ಹೊಡೆದು ಬಂದಿಸಿದ್ದಾರೆ.
ಮನೆಯೊಂದರಲ್ಲಿ ಆರೋಪಿ ವರುಣ್ ಅವಿತುಕೊಂಡಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಬಂಧಿಸಲು ಮುಂದಾದಾಗ
ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಪ್ರಕರಣದಲ್ಲಿ ಕಿಶೋರ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಹಾವಳಿ ಕೃಷ್ಣ ಆಂಡ್ ಗ್ಯಾಂಗ್ ಅರೆಸ್ಟ್!
ಇನ್ನೂ ಕಳೆದ ಹದಿನೈದು ದಿನಗಳಲ್ಲಿ ಬನ್ನೇರುಘಟ್ಟ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೀರಿಯಲ್ ಕಿಡ್ನಾಪ್ ಮತ್ತು ರಾಬರಿ ಮಾಡಿ ಜನಸಾಮಾನ್ಯರಿಗೆ ಆತಂಕ ಮೂಡಿಸಿತ್ತು. ಪೊಲೀಸರಿಗೆ ತಲೆ ನೋವಾಗಿದ್ದ ಕೃಷ್ಣ ಅಲಿಯಾಸ್ ಹಾವಳಿ ಕೃಷ್ಣ ಅಂಡ್ ಟೀಮ್ ಅನ್ನು ಸಹ ಜಿಗಣಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಅಜಯ್ ಅಲಿಯಾಸ್ ಮೆಂಟಲ್ ಕಾಲಿಗೆ ಗುಂಡೇಟು
ಆದರೆ ಹಾವಳಿ ಕೃಷ್ಣನ ಸಹಚರ ಅಜಯ್ ಅಲಿಯಾಸ್ ಮೆಂಟಲ್ ಹಾರಗದ್ದೆ ಸಮೀಪದ ನಾಯನಹಳ್ಳಿ ಬಳಿ ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅರೆಸ್ಟ್ ಮಾಡಲು ಮುಂದಾದ ಜಿಗಣಿ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಕ್ರೈಂ ಸಿಬ್ಬಂದಿ ಮಹೇಶ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.
ಕೂಡಲೇ ಇನ್ಸ್ಪೆಕ್ಟರ್ ಸುದರ್ಶನ್ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದ್ದು, ಜಗ್ಗದಿದ್ದಾಗ ಕಾಲಿಗೆ ಗುಂಡು ಹೊಡೆದು ಬಂದಿಸಿರುವುದಾಗಿ ತಿಳಿಸಿದ್ದಾರೆ.
ಈಗಾಗಲೇ ಕಳ್ಳ ಕೃಷ್ಣ ಸೇರಿದಂತೆ ನಾಲ್ವರು ಸಹಚರರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ತಿಳಿಸಿದ್ದಾರೆ.
ಒಟ್ನಲ್ಲಿ ಆನೇಕಲ್ ಉಪವಿಭಾಗದಲ್ಲಿ ಹದ್ದು ಮೀರಿದ್ದ ಹರಾಮಿಗಳಿಗೆ ಪೊಲೀಸರು ತಮ್ಮದೇ ಶೈಲಿಯಲ್ಲಿ ಉತ್ತರ ನೀಡಿದ್ದು, ಮುಂದಿನ ದಿನಗಳಲ್ಲಿ ಸಮಾಜಘಾತುಕ ಕೃತ್ಯಗಳಲ್ಲಿ ಭಾಗಿಯಾಗುವವರಿಗೆ ಎಚ್ಚರಿಕೆ ಗಂಟೆಯಾಗಿದೆ.
ಇದನ್ನೂ ಓದಿ: Anekal: ಪೊಲೀಸ್ ಪೇದೆ ಮೇಲೆ ಗಾಂಜಾ ಮತ್ತಿನಲ್ಲಿದ್ದ ಗ್ಯಾಂಗ್ನಿಂದ ಮಾರಣಾಂತಿಕ ಹಲ್ಲೆ
ಮಂಗಳೂರಿನ ಸುರತ್ಕಲ್ನಲ್ಲಿ ಭೀಕರ ಕೊಲೆ ನಡೆದಿದೆ. ಅಂಗಡಿಯೊಂದರ ಮಾಲೀಕ ಅಬ್ದುಲ್ ಜಲೀಲ್ ಅಂಗಡಿ ಬಾಗಿಲು ಮುಚ್ಚಿ ಮನೆಗೆ ಹೋಗಬೇಕಿತ್ತು. ಆಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು, ಕ್ಷುಲ್ಲಕ ವಿಚಾರಕ್ಕೆ ತಗಾದೆ ತೆಗೆದಿದ್ದಾರೆ. ಮಾತಿಗೆ ಮಾತು ಬೆಳೆದು ಕಿಡಿಗೇಡಿಗಳು ಚಾಕುವಿನಿಂದ ಇರಿದು ಜಲೀಲ್ನನ್ನು ಹತ್ಯೆಗೈದ್ದಾರೆ.
‘ಕಾಂಗ್ರೆಸ್ ರಾಜಕೀಯ ಲಾಭ ಪಡೆಯಲು ಯತ್ನ’
ಇನ್ನು ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದು, ಪೊಲೀಸರು ಸ್ವತಂತ್ರ್ಯವಾಗಿ ತನಿಖೆ ಮಾಡುತ್ತಾರೆ. ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿದ್ದು, ಕಾಂಗ್ರೆಸ್ ಇಂತಹ ಕೃತ್ಯದಿಂದ ರಾಜಕೀಯ ಲಾಭ ಪಡೆಯಲು ಯತ್ನಿಸ್ತಿದೆ. ನಮ್ಮ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕ್ರಮಕೈಗೊಳ್ಳುತ್ತೆ ಅಂತ ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ