ಬೆಂಗಳೂರು: ಕಾಲೇಜ್ ಕಾರ್ಯಕ್ರಮದಲ್ಲಿ (College Program) ವಿದ್ಯಾರ್ಥಿಯ ಭೀಕರ ಕೊಲೆ ನಡೆದಿರುವ ಘಟನೆ ಬೆಂಗಳೂರಿನ ಬಾಗಲೂರು (Bagalur) ಠಾಣಾ ವ್ಯಾಪ್ತಿಯ ಖಾಸಗಿ ಕಾಲೇಜಿನಲ್ಲಿ ಘಟನೆ ನಡೆದಿದೆ. ಕಾಲೇಜು ಫೆಸ್ಟ್ನಲ್ಲಿ (College Fest) ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿಯ (Student) ಹತ್ಯೆಯಾಗಿದೆ. ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ. ಭಾಸ್ಕರ್ ಶೆಟ್ಟಿ ಪ್ರತಿಷ್ಟಿತ ಖಾಸಗಿ ಕಾಲೇಜಿನಲ್ಲಿ (Private College) ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದನು. ಈ ವಿಷಯವನ್ನು ಭಾಸ್ಕರ್ ಶೆಟ್ಟಿ ಪೋಷಕರಿಗೆ ತಿಳಿಸಲಾಗಿದೆ.
ಶುಕ್ರವಾರ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಗಲಾಟೆಯಲ್ಲಿ ಒಂದು ಗುಂಪು ಭಾಸ್ಕರ್ ಶೆಟ್ಟಿಗೆ ಚಾಕುವಿನಿಂದ ಇರಿಯಲಾಗಿದೆ. ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಬಾಗಲೂರು ಪೊಲೀಸರು ಆಗಮಿಸಿದ್ದು, ಕಾಲೇಜಿನಲ್ಲಿರುವ ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಬಾಗಲೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: Vote from Home: 80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನ; ನಾಳೆಯಿಂದ ಬ್ಯಾಲೆಟ್ ಪೇಪರ್ ವೋಟಿಂಗ್ ಶುರು
ತಾಯಿ –ಮಗಳ ಸಾವು
ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಯಿ –ಮಗಳು ಸಾವನ್ನಪ್ಪಿದ್ದಾರೆ. ತಾಯಿಯನ್ನು ಕೊಂದು ಮಗಳು ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಂಡೇಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಎಟಿಎಂನಲ್ಲಿ ಬೆಂಕಿ
ಮೈಸೂರು ಜಿಲ್ಲೆ ಕೆ.ಆರ್ ನಗರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸಂಜೆ ವೇಳೆಗೆ ಇದ್ದಕ್ಕಿದ್ದಂತೆ ಎಟಿಎಂನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣ ಮಾತ್ರದಲ್ಲೇ ಎಟಿಎಂನಲ್ಲಿ ಬೆಂಕಿ ಧಗಧಗನೇ ಉರಿದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ