HOME » NEWS » State » BENGALURU PRIVATE SCHOOLS RISES FEES IN THIS YEAR AMID OF COVID 19 PANDEMIC BANGALORE NEWS SCT

ಕೊರೋನಾ ಬೆನ್ನಲ್ಲೇ ಪೋಷಕರಿಗೆ ಮತ್ತೊಂದು ಶಾಕ್; ಖಾಸಗಿ ಶಾಲೆಗಳಲ್ಲಿ ಶುಲ್ಕ ಹೆಚ್ಚಳ

ಕೊರೊನಾ ಸಂಕಷ್ಟದಲ್ಲಿ ಪೋಷಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಮುಂದಿನ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಆರಂಭವಾಗಿದ್ದು, ಖಾಸಗಿ ಶಾಲೆಗಳು ಶುಲ್ಕ ಹೆಚ್ಚಳ ಮಾಡಿವೆ.

news18-kannada
Updated:April 26, 2021, 8:47 AM IST
ಕೊರೋನಾ ಬೆನ್ನಲ್ಲೇ ಪೋಷಕರಿಗೆ ಮತ್ತೊಂದು ಶಾಕ್; ಖಾಸಗಿ ಶಾಲೆಗಳಲ್ಲಿ ಶುಲ್ಕ ಹೆಚ್ಚಳ
ಪ್ರಾತಿನಿಧಿಕ ಚಿತ್ರ
  • Share this:
ಬೆಂಗಳೂರು (ಏ. 26): ಇಡೀ ದೇಶಾದ್ಯಂತ ಕೊರೋನಾ ಅಟ್ಟಹಾಸ ನಿಲ್ಲುವ ಲಕ್ಷಣಗಳೇ ಕಾಣುತ್ತಿಲ್ಲ. ಇದರಿಂದ ಜನರು ಕಂಗೆಟ್ಟಿದ್ದಾರೆ. ಕರ್ನಾಟಕದಲ್ಲೂ ಕೊರೋನಾ ಸೋಂಕಿನ ಸಂಖ್ಯೆ ವಿಪರೀತವಾಗುತ್ತಿದೆ. ಶಾಲಾ-ಕಾಲೇಜುಗಳಲ್ಲಿ ಆನ್​ಲೈನ್ ಮೂಲಕ ಪಾಠ ಮಾಡಲಾಗುತ್ತಿದೆ. ಹಲವು ತರಗತಿಗಳ ಪರೀಕ್ಷೆಯನ್ನೇ ರದ್ದುಪಡಿಸಲಾಗಿದೆ. ಈ ಕೊರೊನಾ ಸಂಕಷ್ಟದಲ್ಲಿ ಪೋಷಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಮುಂದಿನ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಆರಂಭವಾಗಿದ್ದು, ಖಾಸಗಿ ಶಾಲೆಗಳು ಶುಲ್ಕ ಹೆಚ್ಚಳ ಮಾಡಿವೆ.

ಖಾಸಗಿ ಶಾಲೆಗಳು ಬರೋಬ್ಬರಿ ಶೇ. 25ರಷ್ಟು ಶುಲ್ಕ ಏರಿಕೆ ಮಾಡಿವೆ. ಬೆಂಗಳೂರಿನ‌ ಬಹುತೇಕ ಖಾಸಗಿ ಶಾಲೆಗಳಲ್ಲಿ ಶುಲ್ಕ ಹೆಚ್ಚಳದ ಆರೋಪ ಕೇಳಿಬಂದಿದೆ. ಪ್ರತಿಷ್ಟಿತ ಶಾಲೆಗಳಲ್ಲಿ ಶುಲ್ಕ ಹೆಚ್ಚಳ ಮಾಡಕಾಗಿದೆ. ಕಳೆದ ವರ್ಷ ಕೊರೋನಾದಿಂದಾಗಿ ಪೂರ್ತಿ ಶುಲ್ಕ ಕಟ್ಟದ ಹಿನ್ನೆಲೆಯಲ್ಲಿ ಈ ವರ್ಷ ಶೇ. 25ರಷ್ಟು ಶುಲ್ಕ ಹೆಚ್ಚುವರಿಯಾಗಿ ನೀಡುವಂತೆ ಸೂಚನೆ ನೀಡಲಾಗಿದೆ. ಪೋಷಕರ ಸಭೆಯಲ್ಲಿ ಮಾಹಿತಿ ನೀಡುತ್ತಿರುವ ಶಾಲಾ ಆಡಳಿತ ಮಂಡಳಿ ಪೋಷಕರಿಗೆ ಮೌಖಿಕವಾಗಿ ಶುಲ್ಕ ಹೆಚ್ಚಳದ ಮಾಹಿತಿ ನೀಡಿದೆ.

ಹಲವು ಕಂತುಗಳಲ್ಲಿ ಶುಲ್ಕ ಕಟ್ಟುವಂತೆ ಸೂಚನೆ ನೀಡಲಾಗಿದೆ. ಮೊದಲು ಕಂತಿನ ಶುಲ್ಕ ಕಟ್ಟುವಂತೆ ಒತ್ತಾಯ ಮಾಡಲಾಗುತ್ತಿದೆ. ಕಳೆದ ವರ್ಷ ಶುಲ್ಕ ಸಂಪೂರ್ಣ ಕಟ್ಟದೇ ಇರುವುದರಿಂದ ಸಂಕಷ್ಟದಲ್ಲಿದ್ದರೂ ಸರಕಾರ ನೆರವಿಗೆ ಬಂದಿಲ್ಲ. ಆನ್​ಲೈನ್ ಕ್ಲಾಸ್ ನಡೆಸಲು ಆರ್ಥಿಕ ಹೊರೆ ಇದೆ. ಈ ಕಾರಣಕ್ಕೆ ಶುಲ್ಕ ಹೆಚ್ಚಳ ಮಾಡಲಾಗಿದೆ ಎಂದು ಹಲವು ಖಾಸಗಿ ಶಾಲೆಗಳು ಹೇಳುತ್ತಿವೆ.

ರಾಜ್ಯ ಬಜೆಟ್ ಶಾಲೆಯಲ್ಲಿ ಶುಲ್ಕ ಹೆಚ್ಚಳವಿಲ್ಲ. ಆದರೆ ಬೆಂಗಳೂರಿನ ಪ್ರತಿಷ್ಟಿತ, ದೊಡ್ಡ ಶಾಲೆಗಳಲ್ಲಿ ಶುಲ್ಕ ಹೆಚ್ಚಳ ಮಾಡಲಾಗಿದೆ. ರಾಜ್ಯದ ಇತರೆ ಪ್ರಸಿದ್ಧ ಶಾಲೆಗಳಲ್ಲಿಯೂ ಶುಲ್ಕ ಹೆಚ್ಚಳ ಮಾಡಲಾಗಿದೆ. ಶುಲ್ಕ ಹೆಚ್ಚಳಕ್ಕೆ ಪೋಷಕರ ವಿರೋಧ ವ್ಯಕ್ತವಾಗಿದೆ. ಈ ವರ್ಷ ಶುಲ್ಕ ಹೆಚ್ಚಳ ಮಾಡಿದರೆ ಕಷ್ಟವಾಗುತ್ತದೆ. ಮತ್ತೆ ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿ ನಾವೇನು ಮಾಡಬೇಕು? ನಮ್ಮ ಮಕ್ಕಳನ್ನು ಹೇಗೆ ಓದಿಸಬೇಕು? ಎಂದು ಪೋಷಕರು ಆಕ್ರೋಶ ಹೊರಹಾಕಿದ್ದಾರೆ.
Youtube Video

ಕಳೆದ ವರ್ಷ ಶುಲ್ಕ ಹೆಚ್ಚಳ ಮಾಡಿಲ್ಲ. ಬೆಂಗಳೂರಿನಲ್ಲಿ‌ ಹಲವು ಕಡೆ ಎರಡು ವರ್ಷ ಶುಲ್ಕ ಹೆಚ್ಚಳ ಮಾಡಿದ್ದಾರೆ ಎಂಬ ಮಾಹಿತಿ ಬರುತ್ತಿದೆ. 2 ವರ್ಷ ಸೇರಿ ಶೇ. 30ರಷ್ಟು ಶುಲ್ಕ ಹೆಚ್ಚಳ ಮಾಡಿದ್ದಾರಂತೆ. ನಮ್ಮ ರುಪ್ಸಾ ವ್ಯಾಪ್ತಿಯಲ್ಲಿರುವ ಬಜೆಟ್ ಶಾಲೆಗಳು ಶುಲ್ಕ ಹೆಚ್ಚಳ ಮಾಡಿಲ್ಲ. ಈ ವರ್ಷ ಸಮರ್ಪಕವಾಗಿ ಮಕ್ಕಳ ನೋಂದಣಿಯಾದರೆ ಸಾಕಾಗಿದೆ ಎಂದು ರುಪ್ಸಾ ಕರ್ನಾಟಕ ಅಧ್ಯಕ್ಷ ಲೋಕೇಶ್ ತಾಳಿಕಟ್ಟಿ ಮಾಹಿತಿ ನೀಡಿದ್ದಾರೆ.
Published by: Sushma Chakre
First published: April 26, 2021, 8:47 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories