ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ಮತ್ತೆ ಮಳೆರಾಯನ ಅಬ್ಬರ ಶುರುವಾಗಿದೆ. ಇಂದು ಮಧ್ಯಾಹ್ನ ಸುರಿದ ಭಾರಿ ಮಳೆಯಿಂದಾಗಿ (Rain) ನಗರದ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ರಾತ್ರಿಯಾದರೂ ಮಳೆ ಮುಂದುವರೆದಿದ್ದು, ಇದೇ ರೀತಿ ಇನ್ನೆರಡು ದಿನಗಳ ಕಾಲ ನಗರದಲ್ಲಿ ಮಳೆಯ ಮುನ್ಸೂಚನೆ ಹವಾಮಾನ ಇಲಾಖೆ (Meterological Department) ನೀಡಿದೆ. ಇತ್ತ ತೀವ್ರ ಮಳೆ ಹಿನ್ನೆಲೆ ಕಟ್ಟೆಚ್ಚರ ವಹಿಸಲು ಪಾಲಿಕೆ ಅಧಿಕಾರಿಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ (DK Shivakumar) ಮೌಖಿಕ ಸೂಚನೆ ನೀಡಿದ್ದಾರೆ.
ಬೆಂಗಳೂರಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಅಧಿಕಾರಿಗಳು, ಎಂಜಿನಿಯರ್ ಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ಮಳೆ ಅನಾಹುತ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ಅನಾಹುತಗಳ ಬಗ್ಗೆ ವರದಿಯಾದರೆ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು.
ಇದನ್ನೂ ಓದಿ: Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ವರುಣನ ಅಬ್ಬರ; ಸಿಡಿಲಿಗೆ ಇಬ್ಬರು ಬಲಿ! ಎಲ್ಲೆಲ್ಲಿ ಏನೇನಾಯ್ತು?
ಇದಕ್ಕಾಗಿ ವಾರ್ ರೂಮ್ ಮೂಲಕ ಕಟ್ಟೆಚ್ಚರ ವಹಿಸಬೇಕು. ಸಂಭವನೀಯ ಮಳೆ ಅನಾಹುತಗಳ ಬಗ್ಗೆಯೂ ನಿಗಾ ವಹಿಸಬೇಕು. ಬೆಂಗಳೂರು ನಾಗರಿಕರಿಗೆ ತೊಂದರೆ ಆಗದಂತೆ ಪೊಲೀಸ್, ಬೆಸ್ಕಾಂ, ಜಲ ಮಂಡಳಿ ಮತ್ತಿತರ ಇಲಾಖೆಗಳ ಜತೆ ಪರಸ್ಪರ ಸಮನ್ವಯ, ಸಹಕಾರ ಸಾಧಿಸಬೇಕು ಎಂದು ಅವರು ಪಾಲಿಕೆ ಹಿರಿಯ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದಾರೆ.
In the light of heavy rains in Bengaluru, I've ensured that all officers including commissioners and joint commissioners are on high alert. The safety of all citizens matter! Please stay vigilant and take all necessary precautions.#BangaloreRains #StaySafe
— DK Shivakumar (@DKShivakumar) May 30, 2023
ಉಪ ಮುಖ್ಯಮಂತ್ರಿಗಳು ಮತ್ತು ಬೆಂಗಳೂರು ಅಭಿವೃದ್ಧಿ ಸಚಿವರಾದ ಡಿ ಕೆ ಶಿವಕುಮಾರ್ ಅವರು ಪಾಲಿಕೆ ಆಡಳಿತಾಧಿಕಾರಿಗಳು ಮತ್ತು ಮುಖ್ಯ ಆಯುಕ್ತರಿಗೆ ಈ ಕುರಿತು ನಿರ್ದೇಶನ ನೀಡಿದ್ದು, ಎಲ್ಲಾ ಅಧಿಕಾರಿಗಳು ಕಾರ್ಯತತ್ಪರರಾಗಿದ್ದಾರೆ ಎಂದು ತಿಳಿಸಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ