ಬೆಂಗಳೂರು ಗಲಭೆ ಹಿಂದೆ ವ್ಯವಸ್ಥಿತ ಪಿತೂರಿ; ನಳಿನ್‌ ಕುಮಾರ್ ‌ಕಟೀಲ್, ಜಗದೀಶ್ ಶೆಟ್ಟರ್​ ಆರೋಪ

Bengaluru Riots: ಬೆಂಗಳೂರು ಗಲಭೆ ಘಟನೆಯ ಹಿಂದೆ ವ್ಯವಸ್ಥಿತ ಪಿತೂರಿ ನಡೆದಿದೆ. ಸಮಗ್ರ ತನಿಖೆಯಿಂದ ಸತ್ಯ ಬಯಲಿಗೆ ಬರಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಬೆಂಗಳೂರು ಗಲಭೆ

ಬೆಂಗಳೂರು ಗಲಭೆ

  • Share this:
ಬೆಂಗಳೂರು (ಆ. 12): ಬೆಂಗಳೂರಿನ ಡಿಜೆ ಹಳ್ಳಿ ಗಲಭೆ ಪ್ರಕರಣ ಅತ್ಯಂತ ಖಂಡನೀಯ. ಪ್ರತಿಭಟನೆ ಹೆಸರಲ್ಲಿ ದಾಂಧಲೆ, ಗಲಭೆ ಸೃಷ್ಟಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ‌ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,  ಸರ್ಕಾರಿ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದವರನ್ನು ಸುಮ್ಮನೆ ಬಿಡುವುದಿಲ್ಲ ಎಂದಿದ್ದಾರೆ. ಈ‌ ದಾಳಿಯ ಹಿಂದೆ ವ್ಯವಸ್ಥಿತ ಪಿತೂರಿ ಅಡಗಿದೆ. ಎಸ್​ಡಿಪಿಐ, ಕೆಎಫ್​ಡಿಯಂತಹ ಸಂಘಟನೆಗಳ ಕೈವಾಡ ಇದೆ. ರಾಜಕೀಯ ದುರುದ್ದೇಶದಿಂದ ಈ ದಾಳಿ ನಡೆಸಲಾಗಿದೆ. ಪ್ರತಿಭಟನಾಕಾರರು ಕೈಯಲ್ಲಿ  ದೊಣ್ಣೆ, ಬೆತ್ತ, ಪೆಟ್ರೋಲ್ ಬಾಂಬ್ ಎಲ್ಲಿಂದ ಬಂದಿದ್ದು? ಗಲಭೆ ಸೃಷ್ಟಿಸಿದವರ ವಿರುದ್ಧ ಗೃಹ ಇಲಾಖೆ ಕಠಿಣ ಕ್ರಮ ಜರುಗಿಸಲಿದೆ. ಸರ್ಕಾರ ತೆಗೆದುಕೊಂಡಿರುವ ಕಾನೂನು ಕ್ರಮವನ್ನು ಸ್ವಾಗತಿಸುತ್ತೇನೆ. ಘಟನೆಯ ಕುರಿತು ಸಮಗ್ರ ತನಿಖೆ ಆಗಬೇಕು ಎಂದವರು ಆಗ್ರಹಿಸಿದ್ದಾರೆ.

ಬೆಂಗಳೂರು ಗಲಭೆ ಘಟನೆಯ ಹಿಂದೆ ವ್ಯವಸ್ಥಿತ ಪಿತೂರಿ ನಡೆದಿದೆ. ಸಮಗ್ರ ತನಿಖೆಯಿಂದ ಸತ್ಯ ಬಯಲಿಗೆ ಬರಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಠಾಣೆ, ಮಾಧ್ಯಮದವರು ಹಾಗೂ ಶಾಸಕರ ಮನೆಯ ಮೇಲೆ ದಾಳಿ ಮಾಡಿದ್ದು ಖಂಡನೀಯ ಎಂದಿದ್ದಾರೆ. ಯಾವುದೇ ಧರ್ಮಗುರುಗಳಿರಲಿ ಅವರಿಗೆ ಗೌರವ ಕೊಡುವುದು ನಮ್ಮ ಧರ್ಮ. ಆದರೆ ಧರ್ಮಗುರುಗಳ ವಿರುದ್ದ ಅವಹೇಳನ ಮಾಡಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಿ. ಅದು ಬಿಟ್ಟು, ಕಾನೂನು ಕೈಗೆ ತೆಗೆದುಕೊಳ್ಳುವುದು ಸರಿಯಲ್ಲ. ಕಾನೂನು ಕೈಗೆ ತೆಗೆದುಕೊಂಡವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಗೃಹ ಇಲಾಖೆ ಈ ಕುರಿತು ತನಿಖೆ ನಡೆಸಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Chitradurga Fire: ಚಿತ್ರದುರ್ಗದ ಬಳಿ ಬೆಂಗಳೂರು ಬಸ್​ಗೆ ಬೆಂಕಿ; ಐವರು ಸಜೀವ ದಹನ, 30 ಪ್ರಯಾಣಿಕರು ಪಾರು

ಕಾಂಗ್ರೆಸ್‌ನವರ ಪಿತೂರಿಯಿಂದ ಬೆಂಗಳೂರಿನಲ್ಲಿ ಗಲಾಟೆಯಾಗಿದೆ. ತಮ್ಮ ಶಾಸಕರ ಕಡೆಯಿಂದ ವಿವಾದಿತ ಹೇಳಿಕೆ ಕೊಡಿಸಿ ಗಲಾಟೆ ಮಾಡಿಸಿದ್ದಾರೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವ್ಯವಸ್ಥಿತ ಸಂಚು ರೂಪಿಸಿ ಗಲಭೆ ಸೃಷ್ಟಿಸಲಾಗಿದೆ. ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಬೇಕು‌ ಎಂದಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಪೊಲೀಸರು ಈಗಾಗಲೇ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ. ಸಿಎಂ ಮತ್ತು ಗೃಹ ಸಚಿವರು ತಪ್ಪಿತಸ್ಥರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದವರು ಹೇಳಿದ್ದಾರೆ.
Published by:Sushma Chakre
First published: