Bengaluru Traffic PM Modi: 40 ತಿಂಗಳಲ್ಲಿ ಬೆಂಗಳೂರು ಟ್ರಾಫಿಕ್ ಸಮಸ್ಯೆ ಪರಿಹರಿಸಿ! ಕರ್ನಾಟಕ ಸರ್ಕಾರಕ್ಕೆ ಪ್ರಧಾನಿ ಮೋದಿ ಗುರಿ
ಈ ಮೂಲಕ ಬೆಂಗಳೂರು-ಮೈಸೂರು ಭೇಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಸರ್ಕಾರಕ್ಕೆ ಗುರಿ ನಿಗದಿಪಡಿಸಿದ್ದಾರೆ. ಕರ್ನಾಟಕ ಸರ್ಕಾರಕ್ಕೆ ಪ್ರಧಾನಿ ನೀಡಿರುವ ಗುರಿಯಿಂದ ಆದರೂ ಅಭಿವೃದ್ಧಿ ಆಗುವುದೇ ಎಂಬ ಲೆಕ್ಕಾಚಾರ ಶುರುವಾಗಿದೆ.
ಬೆಂಗಳೂರಿನ ಸಂಚಾರ ದಟ್ಟಣೆಯನ್ನು ನಿವಾರಿಸಬೇಕು. ಬೆಂಗಳೂರಿನ ಟ್ರಾಫಿಕ್ ಅಡಚಣೆಯನ್ನು ಕಡಿಮೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಸರ್ಕಾರಕ್ಕೆ (Karnataka Traffic) ಗುರಿ ನೀಡಿದ್ದಾರೆ. ಅಲ್ಲದೇ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯನ್ನು (Bengaluru Traffic) ನಿವಾರಿಸಲು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಸರ್ಕಾರಕ್ಕೆ 40 ತಿಂಗಳ ಗಡುವನ್ನು ನಿಗದಿಪಡಿಸಿದ್ದಾರೆ. ಈಕುರಿತು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಈ ಮೂಲಕ ಬೆಂಗಳೂರು-ಮೈಸೂರು ಭೇಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಸರ್ಕಾರಕ್ಕೆ ಗುರಿ ನಿಗದಿಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭೇಟಿಯಿಂದ ಕರ್ನಾಟಕ (PM Narendra Modi Karnataka Visit) ಸರ್ಕಾರಕ್ಕೆ ಏನು ಸಿಕ್ಕಿದೆ ಎಂದು ಲೆಕ್ಕ ಹಾಕುತ್ತಿರುವವರಿಗೆ ಕರ್ನಾಟಕ ಸರ್ಕಾರಕ್ಕೆ ಪ್ರಧಾನಿ ನೀಡಿರುವ ಗುರಿಯಿಂದ ಆದರೂ ಅಭಿವೃದ್ಧಿ ಆಗುವುದೇ ಎಂಬ ಲೆಕ್ಕಾಚಾರ ಶುರುವಾಗಿದೆ.
ಕೊಮ್ಮಘಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಸಬ್ ಅರ್ಬನ್ ರೈಲ್ವೆ ಯೋಜನೆಯ ಅಂಚೆ ಚೀಟಿ ಬಿಡುಗಡೆ ಮಾಡಿದ್ದಾರೆ.
ರೈಲು ಯೋಜನೆ ಪೂರ್ಣಗೊಳಿಸಲು ಪಣ ಬೆಂಗಳೂರಿನ ಸಬ್ ಅರ್ಬನ್ ರೈಲು ಯೋಜನೆ ಜಾರಿಗೆ 40 ವರ್ಷಗಳಿಂದ ಚರ್ಚೆಯಲ್ಲೇ ಕಾಲ ಕಳೆಯಲಾಯಿತು. ಆದರೆ ನಾವು ಆ ರೀತಿ ಅಲ್ಲ, 40 ತಿಂಗಳಲ್ಲಿ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಕೆಲವೇ ತಿಂಗಳಲ್ಲಿ ನಗರ ರೈಲು ಯೋಜನೆ ಪೂರ್ಣಗೊಳಿಸಲು ಪಣ ತೊಟ್ಟಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗರದ ಕೊಮ್ಮಘಟ್ಟದಲ್ಲಿ 33 ಸಾವಿರ ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರು, ಇಲ್ಲಿನ ಯುವ ಶಕ್ತಿ, ಉದ್ಯಮಶೀಲತೆಯನ್ನು ಹಾಡಿ ಹೊಗಳಿದ್ದಾರೆ.
ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆಗಳು ಮತ್ತು ರಾಷ್ಟ್ರೀಯ ಹೆದ್ದಾರಿಗಳ ಯೋಜನೆಗಳ ಪ್ರದರ್ಶನವನ್ನು ವೀಕ್ಷಿಸಿ, ಬೆಂಗಳೂರಿನ ಸರ್. ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್, ಯಲಹಂಕ- ಪೆನುಕೊಂಡ ಮತ್ತು ಅರಸೀಕೆರೆ-ತುಮಕೂರು ಜೋಡಿ ರೈಲು ಮಾರ್ಗ ಹಾಗೂ 100% ವಿದ್ಯುದೀಕರಣಗೊಂಡ ಕೊಂಕಣ ರೈಲು ಮಾರ್ಗವನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ. ಇದೇ ವೇಳೆ ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ ಬೆಂಗಳೂರಿನ ಸಾರ್ವಜನಿಕರನ್ನು ಹಾಡಿ ಹೊಗಳಿದ್ದಾರೆ.
ಚಾಮುಂಡಿ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ ಸುತ್ತೂರು ಮಠದಲ್ಲಿ ಕಾರ್ಯಕ್ರಮ ಮುಗಿಸಿ ಪ್ರಧಾನಿ ನರೇಂದ್ರ ಮೋದಿ, ಚಾಮುಂಡಿಬೆಟ್ಟಕ್ಕೆ ತೆರಳಿದ್ರು. ರಸ್ತೆ ಮಾರ್ಗವಾಗಿಯೇ ದೇವರ ದರ್ಶನ ಪಡೆಯಲು ಚಾಮುಂಡಿಬೆಟ್ಟಕ್ಕೆ ತೆರಳಿದ್ರು. ಪ್ರಧಾನಿ ನರೇಂದ್ರ ಮೋದಿ ಹಿಂದೆ ಮೈಸೂರಿಗೆ ಬಂದಿದ್ರೂ ಚಾಮುಂಡೇಶ್ವರಿ ದರ್ಶನ ಪಡೆದಿರಲಿಲ್ಲ.
ಈ ಬಾರಿ ಪ್ರಧಾನಿಗಳು ತಾಯಿ ಚಾಮುಂಡಿ ದರ್ಶನ ಪಡೆದಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇವಾಲಯದ ಪಧಾನ ಅರ್ಚಕರು ಮೋದಿಗೆ ಸ್ವಾಗತ ಕೋರಿದ್ರು. ಇದೇ ವೇಳೆ ರಾಜ್ಯಪಾಲ ಗೆಹೋಟ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಜೋಶಿ, ಸಚಿವ ಎಸ್.ಟಿ.ಸೋಮಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇನ್ನು ನಾಡಿನ ಅಧಿದೇವತೆ ಚಾಮುಂಡಿ ದರ್ಶನ ಪಡೆದ ಪ್ರಧಾನಿ ಮೋದಿ, ತಾಯಿ ಚಾಮುಂಡೇಶ್ವರಿಗೆ ಸಂಕಲ್ಪ ಪೂಜೆ ನೆರವೇರಿಸಿದ್ದಾರೆ. ಮುಖ್ಯ ಅರ್ಚಕ ಡಾ.ಶಶಿಶೇಖರ ದೀಕ್ಷಿತ್ ಸಂಕಲ್ಪ ಪೂಜೆ ಮಾಡಿದ್ರು.
Published by:guruganesh bhat
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ