Bengaluru: ಲ್ಯಾಂಡಿಂಗ್ ವೇಳೆ ವಿಮಾನದ ಟೈರ್ ಸ್ಫೋಟ: ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ಅನಾಹುತ

ವಿಮಾನ ನಿಲ್ದಾಣದ ಸಿಬ್ಬಂದಿ ಪೈಲೆಟ್​ಗೆ ತಕ್ಷಣ ಎಚ್ಚರಿಕೆ ನೀಡಿದ್ದಾರೆ. ಈ ಮಾಹಿತಿ ಅರಿತ ಪೈಲೆಟ್‌ ಜಾಗರೂಕತೆಯಿಂದ ವಿಮಾನವನ್ನು ಲ್ಯಾಂಡ್ ಮಾಡಿದ್ದಾರೆ. ವಿಮಾನ ಲ್ಯಾಂಡಿಂಗ್​ ಆದ ತಕ್ಷಣವೇ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಯ್ತು,

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು (ಏ.28): ದೇವನಹಳ್ಳಿಯ (Devanahalli) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಲ್ಯಾಂಡಿಂಗ್ (Landing) ವೇಳೆ ವಿಮಾನದ ಹಿಂಬದಿಯ ಟೈಯರ್ ಸ್ಫೋಟಗೊಂಡಿರುವ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು (Officer) ತಿಳಿಸಿದ್ದಾರೆ. ಮಂಗಳವಾರ ರಾತ್ರಿ 11:30ರ ಸಮಯದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬ್ಯಾಂಕಾಕ್​ನಿಂದ (Bangkok Airport) ಟೆಕ್ ಆಫ್ ಆಗಿದ್ದ ಥಾಯ್ ಏರ್ ವೇಸ್‌ ಸಂಸ್ಥೆಯ ವಿಮಾನ ಕೆಐಎಎಲ್​ನಲ್ಲಿ ಲ್ಯಾಂಡಿಂಗ್​ ಆಗುವ ವೇಳೆ ಹಿಂಭಾಗದ ಟೈಯರ್ ಸ್ಫೋಟಗೊಂಡಿದೆ. (Tire Blast)

ವಿಮಾನ ನಿಲ್ದಾಣದ ಸಿಬ್ಬಂದಿಯಿಂದ ತಪ್ಪಿದ ಅನಾಹುತ

ವಿಮಾನ ನಿಲ್ದಾಣದ ಸಿಬ್ಬಂದಿ ಪೈಲೆಟ್​ಗೆ ತಕ್ಷಣ ಎಚ್ಚರಿಕೆ ನೀಡಿದ್ದಾರೆ. ಈ ಮಾಹಿತಿ ಅರಿತ ಪೈಲೆಟ್‌ ಜಾಗರೂಕತೆಯಿಂದ ವಿಮಾನವನ್ನು ಲ್ಯಾಂಡ್ ಮಾಡಿದ್ದಾರೆ. ವಿಮಾನ ಲ್ಯಾಂಡಿಂಗ್​ ಆದ ತಕ್ಷಣವೇ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದ್ದು, ತಾಂತ್ರಿಕ ಸಿಬ್ಬಂದಿ ತಪಾಸಣೆ ನಡೆಸಿದರು. ಭಾರೀ ಅನಾಹುತ ತಪ್ಪಿದ್ದು,  ವಿಮಾನದಲ್ಲಿದ್ದ ಜನರೆಲ್ಲಾ ಅಬ್ಬಾ ಉಳಿಯಿತು ಬಡ ಜೀವ ಎಂದು ಮನೆ ಕಡೆ ತೆರಳಿದ್ರು.

ಇದನ್ನೂ ಓದಿ: Hubballi Riots: ಗಲಭೆ ಪ್ರಕರಣದ ಮುಖ್ಯ ಆರೋಪಿ ನ್ಯಾಯಾಂಗ ವಶಕ್ಕೆ; ಕಟೀಲ್ ವಿರುದ್ಧ ದೂರು

ಬೆಂಗಳೂರಲ್ಲಿ ಯುವತಿ ಮೇಲೆ ಆಸಿಡ್ ದಾಳಿ

ಬೆಂಗಳೂರು: ಭಗ್ನ ಪ್ರೇಮಿಯಿಂದ 23 ವರ್ಷದ ಯವತಿ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ಪ್ರೀತಿಗೆ ನಿರಾಕರಿಸಿದ್ದಕ್ಕೆ ಭಗ್ನಪ್ರೇಮಿಯೇ ಆ್ಯಸಿಡ್​ ದಾಳಿ ನಡೆಸಿದ್ದಾನೆ. ಸುಂಕದ ಕಟ್ಟೆಯ ಮುತ್ತೂಟ್ ಫೈನಾನ್ಸ್‌ನಲ್ಲಿ ಕೆಲಸ ಮಾಡುಲು ತೆರಳುತ್ತಿದ್ದ ವೇಳೆ ಭಗ್ನ ಪ್ರೇಮಿ ನಾಗೇಶ್​ ಯುವತಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆ. ಈ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 23 ವರ್ಷದ ಯುವತಿ ಸುಂಕದ ಕಟ್ಟೆಯ ಮುತ್ತೂಟ್ ಫೈನಾನ್ಸ್‌ನಲ್ಲಿ ಕೆಲಸ ಮಾಡುತ್ತಿದ್ದಾಳೆ. ನಾಗೇಶ್​ ಎಂಬಾತ ಈ ಯುವತಿಯ ಹಿಂದೆ ಬಿದ್ದು ನನ್ನನ್ನು ಪ್ರೀತಿಸು ಎಂದು ಪೀಡಿಸುತ್ತಿದ್ದನು. ಆದ್ರೆ ನಾಗೇಶ್​ ಪ್ರೀತಿಯನ್ನು ಯುವತಿ ನಿರಾಕರಿಸಿದ್ದಾಳೆ. ಇದೇ ವಿಚಾರಕ್ಕೆ ಯುವತಿ ಹಾಗೂ ನಾಗೇಶ್ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ.

ಪ್ರೀತಿ ನಿರಾಕರಿಸಿದ್ದಾಳೆ ಎಂಬ ಕೋಪ ನಾಗೇಶ್​ಗೆ ಕಾಡಿದೆ. ಹೀಗಾಗಿ ನಾಗೇಶ್​ ಆಕೆಯ ಮೇಲೆ ಆ್ಯಸಿಡ್​ ದಾಳಿ ನಡೆಸಲು ಹೊಂಚು ಹಾಕಿ ಕುಳಿತಿದ್ದನು. ಇಂದು ಬೆಳಗ್ಗೆ ಯುವತಿ ಕೆಲಸಕ್ಕೆಂದು ಮನೆಯಿಂದ ಹೊರ ಬಂದಿದ್ದಾಳೆ. ಯುವತಿಗಾಗಿ ಕಾದು ಕುಳಿತಿದ್ದ ಆರೋಪಿ ನಾಗೇಶ್​ ಆಕೆ ಸುಂಕದಕಟ್ಟೆಯ ಮುತ್ತೂಟ್ ಫಿನ್ ಕಾರ್ಪ್ ಬಳಿ ಬಂದಿದ್ದಾಳೆ. ಈ ವೇಳೆ ಮತ್ತೆ ಪ್ರೀತಿಸುವಂತೆ ಒತ್ತಡ ಹೇರಿದ್ದ. ಯುವತಿ ಆತನ ಪ್ರೀತಿಯನ್ನು ನಿರಾಕರಿಸಿದ್ದಾಳೆ. ಇದೇ ವಿಷಯಕ್ಕೆ ಇಬ್ಬರ ಮಧ್ಯೆ ಗಲಾಟೆಯಾಗಿದೆ. ಯುವತಿ ಮೇಲೆ ಕೋಪಗೊಂಡ ನಾಗೇಶ್​ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆ.

ಇದನ್ನೂ ಓದಿ: Hubballi Riots: ಗಲಭೆ ಪ್ರಕರಣದ ಮುಖ್ಯ ಆರೋಪಿ ನ್ಯಾಯಾಂಗ ವಶಕ್ಕೆ; ಕಟೀಲ್ ವಿರುದ್ಧ ದೂರು

ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಎರಡು ಬೈಕ್​​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಈ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮಳಮಾಚನಹಳ್ಳಿ ಗ್ರಾಮದ ಬಳಿ ನಡೆಯಿತು. ಮೃತರನ್ನು ಮಳಮಾಚನಹಳ್ಳಿ ಗ್ರಾಮದ ಕೃಷ್ಣಮೂರ್ತಿ (45) ಹಾಗೂ ಚಿಕ್ಕದಾಸರಹಳ್ಳಿಯ ಅಭಿಲಾಶ್ (24) ಎಂದು ಗುರುತಿಸಲಾಗಿದೆ.
ಚಿಕ್ಕದಾಸರಹಳ್ಳಿಯ ಭರತ್ ಹಾಗೂ ಮಳಮಾಚನಹಳ್ಳಿಯ ರಘು ಪರಿಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣವೆಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published by:Pavana HS
First published: