HOME » NEWS » State » BENGALURU URBAN AMID COVID BANGALORE POLICE ARE SHOUTING DOWN SHOPS SESR

Bangalore Police: ಬಲವಂತವಾಗಿ ಅಂಗಡಿ ಮುಚ್ಚಿಸುತ್ತಿರುವ ಪೊಲೀಸರು; ಗೊಂದಲದಲ್ಲಿ ಜನರು

ಪೊಲೀಸರು ಒತ್ತಾಯಪೂರ್ವಕವಾಗಿ ಎಲ್ಲಾ ಅಂಗಡಿ ಮುಗಟ್ಟು ಮುಚ್ಚಿಸುತ್ತಿದ್ದಾರೆ. ಬೆಳಗ್ಗೆಯಿಂದ ಸಾಕಷ್ಟು ದೂರುಗಳು ಬಂದಿವೆ. ಈ ವಿಚಾರದಲ್ಲಿನ ಗೊಂದಲ ಬಗೆಹರಿಸಿ, ಪರಿಷ್ಕೃತ ಮಾರ್ಗಸೂಚಿಯನ್ನ ಹೊರಡಿಸುವಂತೆ ಸಿಎಂಗೆ ವಿ.ಸೋಮಣ್ಣ,ಗೋಪಾಲಯ್ಯ ಮನವಿ ಮಾಡಿದ್ದಾರೆ.

news18-kannada
Updated:April 22, 2021, 7:29 PM IST
Bangalore Police: ಬಲವಂತವಾಗಿ ಅಂಗಡಿ ಮುಚ್ಚಿಸುತ್ತಿರುವ ಪೊಲೀಸರು; ಗೊಂದಲದಲ್ಲಿ  ಜನರು
ಸಾಂಧರ್ಭಿಕ ಚಿತ್ರ.
  • Share this:
ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಮುಂದಾಗಿರುವ ಸರ್ಕಾರ ಕಟ್ಟು ನಿಟ್ಟಿನ ನಿಯಮ ಜಾರಿಗೆ ತಂದಿದೆ. ಏ. 21ರಿಂದ ಮೇ. 4ರವರೆಗೆ ರಾತ್ರಿ ಕರ್ಫ್ಯೂ ಜಾರಿ ಮತ್ತು ವಿಕೇಂಡ್​ ಕರ್ಫ್ಯೂ ಜಾರಿ ಮಾಡಲಾಗಿದೆ. ಆದರೆ, ಇಂದು ವಾರದ ದಿನವೇ ರಾಜಧಾನಿಯಲ್ಲಿ ಪೊಲೀಸರು ಅಂಗಡಿ, ಮುಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸುತ್ತಿರುವುದು ನಾಗರೀಕರಲ್ಲಿ ಆತಂಕ ಮೂಡಿಸಿದೆ. ರಾಜಧಾನಿಯಲ್ಲಿ ದಾಖಲೆ ಪ್ರಮಾಣದ ಸೋಂಕು ಪತ್ತೆಯಾಗುತ್ತಿರುವ ಹಿನ್ನಲೆ ಸರ್ಕಾರ ಲಾಕ್​ಡೌನ್​ಗೆ ಮುಂದಾಗಿದೆಯಾ ಎಂಬ ಅನುಮಾನ ವ್ಯಕ್ತವಾಗಿದೆ. ರಾಜಧಾನಿಯ ಪ್ರಮುಖ ಪ್ರದೇಶಗಳಾದ ಮೆಜೆಸ್ಟಿಕ್​, ಅವೆನ್ಯೂ ರಸ್ತೆ, ಚಿಕ್ಕಪೇಟೆಗಳಲ್ಲಿ ಮಧ್ಯಾಹ್ನದಿಂದಲೇ ಬಲವಂತವಾಗಿ ಅಂಗಡಿಗಳನ್ನು ಪೊಲೀಸರು ಮುಚ್ಚಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ವಾಣಿಜ್ಯ ವಹಿವಾಟು ಸಂಪೂರ್ಣವಾಗಿ ಬಂದ್​ ಮಾಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.

ಕೋವಿಡ್​ ಸೋಂಕಿನ ಸರಪಳಿ ಮುರಿಯಲು ಸರ್ಕಾರ ಎಲ್ಲಾ ಚಟುವಟಿಕೆಗಳಿಗೂ ನಿರ್ಬಂಧ ವಿಧಿಸಿ ಹೊಸ ಮಾರ್ಗಸೂಚಿಯನ್ನು ನಿನ್ನೆ ರಾತ್ರಿ ಪ್ರಕಟಿಸಿದೆ. ಈ ಬಗ್ಗೆ ಜನರಿಗೆ ಮಾಹಿತಿ ಸಿಗದ ಹಿನ್ನಲೆ ರಾಜ್ಯ ಸರ್ಕಾರ ಲಾಕ್​ಡೌನ್​ ಮಾಡಲು ಮುಂದಾಗಿದೆ ಎಂಬ ಆತಂಕ ಮನೆ ಮಾಡಿದೆ. ಹೊಸ ಮಾರ್ಗಸೂಚಿ ಅನ್ವಯ ಅಗತ್ಯ ವಸ್ತುಗಳ ಹೊರತು ಪಡಿಸಿ ಉಳಿದೆಲ್ಲಾ ವಾಣಿಜ್ಯ ಚಟುವಟಿಕೆಗಳು ಬಂದ್ ಆಗಲಿದೆ.

ಸರ್ಕಾರ ವಾರದ ದಿನಗಳಲ್ಲಿ ಯಾವುದೇ ವಾಣಿಜ್ಯ ವಾಹಿವಾಟು ನಿರ್ಬಂಧ ಕುರಿತು ಮಾರ್ಗಸೂಚಿ ಹೊರಡಿಸಿರಲಿಲ್ಲ. ಸ್ವೀಮಿಂಗ್​ ಫುಲ್​, ಯೋಗ, ಜಿಮ್​ಗಳಿಗೆ ನಿರ್ಬಂಧಿಸಿತು. ಈಗ ನೋಡಿದರೆ ವಾಣಿಜ್ಯ ಮಳಿಗೆಗಳನ್ನು ಬಲವಂತವಾಗಿ ಮುಚ್ಚಿಸುತ್ತಿರುವ ಹಿನ್ನಲೆ ಸಾರ್ವಜನಿಕರಲ್ಲಿ ಗೊಂದಲ ಮೂಡಿದೆ. ಇನ್ನು ಚಿಕ್ಕಪೇಟೆಯಲ್ಲಿ ಪೊಲೀಸರು ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಲು ಮುಂದಾದಗ ವರ್ತಕರು ಪೊಲೀಸರೊಂದಿಗೆ ವಾಗ್ವಾದ ನಡೆಸಿರುವ ಘಟನೆ ಕೂಡ ನಡೆದಿದೆ.

ಇದನ್ನು ಓದಿ: ಕೊರೋನಾ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ; ಯಾವುದಕ್ಕೆ ನಿರ್ಬಂಧ, ಯಾವುದಕ್ಕೆ ನಿಷೇಧ?

ಆದರೆ, ಈ ಬಗ್ಗೆ ತಿಳಿಯದ ಸಾರ್ವಜನಿಕರು ಗೊಂದಲಕ್ಕೆ ಒಳಗಾಗಿದ್ದು, ಈ ಕುರಿತು ಪ್ರಶ್ನಿಸಿದ್ದಾರೆ. ಇದೇ ಹಿನ್ನಲೆ ಈ ಕುರಿತು ಚರ್ಚೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ನಗರ ಪೊಲೀಸ್​ ಆಯುಕ್ತರೊಂದಿಗೆ ಚರ್ಚೆ ನಡೆಸಿದ್ದಾರೆ.

ಇನ್ನು , ಪೊಲೀಸರು ಒತ್ತಾಯಪೂರ್ವಕವಾಗಿ ಎಲ್ಲಾ ಅಂಗಡಿ ಮುಗಟ್ಟು ಮುಚ್ಚಿಸುತ್ತಿದ್ದಾರೆ. ಬೆಳಗ್ಗೆಯಿಂದ ಸಾಕಷ್ಟು ದೂರುಗಳು ಬಂದಿವೆ. ಈ ವಿಚಾರದಲ್ಲಿನ ಗೊಂದಲ ಬಗೆಹರಿಸಿ, ಪರಿಷ್ಕೃತ ಮಾರ್ಗಸೂಚಿಯನ್ನ ಹೊರಡಿಸುವಂತೆ ಸಿಎಂಗೆ ವಿ.ಸೋಮಣ್ಣ,ಗೋಪಾಲಯ್ಯ ಮನವಿ ಮಾಡಿದ್ದಾರೆ.
ಕೊರೋನಾ ನಿಯಂತ್ರಣಕ್ಕಾಗಿ ಹೊರಡಿಸಲಾಗಿದ್ದ ಮಾರ್ಗಸೂಚಿಯನ್ನು ಕಳೆದ ರಾತ್ರಿಯಿಂದಲೇ ಮಾರ್ಪಡು ಗೊಳಿಸಲಾಗಿದೆ. ಈ ಆದೇಶದ ಬೆನ್ನಲ್ಲೇ ಜಿಲ್ಲಾಡಳಿತಗಳು ಕೂಡ ಮುಂಜಾನೆಯಿಂದಲೇ ವಾಣಿಜ್ಯ ವಹಿವಾಟನ್ನು ಸಂಪೂರ್ಣವಾಗಿ ಸ್ತಬ್ದಗೊಳಿಸಿವೆ. ಇದರಿಂದ ಸರ್ಕಾರ ಮತ್ತೊಂದು ಲಾಕ್​ಡೌನ್​ ಮಾಡುತ್ತಿದೆ ಎಂಬ ಅನುಮಾನ ಸಾರ್ವಜನಿಕರಲ್ಲಿದೆ. ಆದರೆ, ಈ ಬಗ್ಗೆ ಸರ್ಕಾರದಿಂದ ಇನ್ನು ಸ್ಪಷ್ಟನೆ ತೊರೆತ್ತಿಲ್ಲ. ಸಚಿವ ಸಂಪುಟ ಸಭೆ ನಡೆಸುತ್ತಿರುವ ಸಿಎಂ ಈ ಕುರಿತು ಕೆಲವೇ ಹೊತ್ತಿನಲ್ಲಿ ಸ್ಪಷ್ಟನೆ ನೀಡಲಿದ್ದಾರೆ ಎನ್ನಲಾಗಿದೆ.
Published by: Seema R
First published: April 22, 2021, 7:19 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories