ಬೆಂಗಳೂರು (ಮೇ 31): ಕೋವಿಡ್ ಹಬ್ ಎಂದೇ ಕುಖ್ಯಾತಿ ಪಡೆದಿದ್ದ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕೊಂಚ ಕಡಿಮೆಯಾಗುತ್ತಿದೆ. ಜೂನ್ 7ರ ನಂತರ ಹಂತ ಹಂತವಾಗಿ ಅನ್ಲಾಕ್ಗೆ ಬಿಬಿಎಂಪಿ ಮನಸು ಮಾಡಿದೆ. ಗಣನೀಯವಾಗಿ ಸೋಂಕಿನ ಪ್ರಮಾಣ ಇಳಿಕೆಯಾಗಿದೆ. ಈಗ ಅನ್ ಲಾಕ್ ಮಾಡಬಹುದು. ಇನ್ನಷ್ಟು ದಿನಗಳು ಲಾಕ್ ಡೌನ್ ಮಾಡಿದರೆ ಪರಿಸ್ಥಿತಿ ನಿಭಾಯಿಸುವುದು ಕಷ್ಟ. ಅದರಿಂದ ಆದಾಯಕ್ಕೆ ಹೊಡೆತ ಬೀಳುತ್ತದೆ. ಆಡಳಿತ ಕೂಡ ಕಷ್ಟವಾಗಬಹುದು. ಜನಜೀವನ ಎಂದಿನಂತಾದರೆ ಸ್ವಲ್ಪ ನೆಮ್ಮದಿ ಸಿಗಬಹುದು ಎಂಬ ಕಾರಣಕ್ಕೆ ಹಂತ ಹಂತವಾಗಿ ಲಾಕ್ ಡೌನ್ ತೆರವಿಗೆ ಬಿಬಿಎಂಪಿ ಸಲಹೆ ಕೊಟ್ಟಿದೆ.
ಬಿಬಿಎಂಪಿ ಸರ್ಕಾರದ ಮುಂದಿಟ್ಟಿರುವ ಸಲಹೆಗಳೇನು?:
ಸಾಮಾಜಿಕ ಜೀವನದ ಬಗ್ಗೆ ನಮಗೆ ಕಾಳಜಿ ಇದೆ. ಹಂತ ಹಂತವಾಗಿ ರಿಲೀಫ್ ಮಾಡಿದರೆ ಉತ್ತಮ. ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ ಎಂದು ಬಿಬಿಎಂಪಿ ಕಮಿಷನರ್ ಗೌರವ್ ಗುಪ್ತ ಹೇಳಿದ್ದಾರೆ.
ಜೂನ್ 7ರ ಬಳಿಕ ಕರ್ನಾಟಕದಲ್ಲಿ ಲಾಕ್‌ಡೌನ್ ವಿಸ್ತರಿಸಬೇಕೇ? ಬೇಡವೇ? ಎಂಬ ಬಗ್ಗೆ ತಜ್ಞರು ಮತ್ತು ತಾಂತ್ರಿಕ ಸಲಹಾ ಸಮಿತಿಯವರು ಈಗಾಗಲೇ ವರದಿ ತಯಾರಿಸಿದ್ದಾರೆ. ನಾಳೆ ಹಿರಿಯ ಸಚಿವರ ಜೊತೆ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದು, ಇಂದು ಕೊರೋನಾ ತಜ್ಞರು ನೀಡಿರುವ ವರದಿ ಬಗ್ಗೆ ನಾಳೆ ಚರ್ಚೆ ನಡೆಯಲಿದೆ. ಕೊರೋನಾ ಸ್ಥಿತಿಗತಿಯ ಬಗ್ಗೆ ಸಚಿವರ ಜೊತೆ ಸಿಎಂ ಯಡಿಯೂರಪ್ಪ ಚರ್ಚಿಸಲಿದ್ದಾರೆ. ಸಚಿವರು, ತಜ್ಞರ ಜೊತೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಿರುವ ಸಿಎಂ ಲಾಕ್‌ಡೌನ್ ಅಥವಾ ಅನ್ ಲಾಕ್ ಎಂಬುದರ ಕುರಿತು ಜೂನ್ 4 ಅಥವಾ 5ರಂದು ಅಂತಿಮ ತೀರ್ಮಾನ ಮಾಡಲಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ