ಮಾಸ್ಕ್ ಸರಿಯಾಗಿ ಧರಿಸಿಲ್ಲ ಎಂಬ ಒಂದೇ ಕಾರಣಕ್ಕೆ ನೆರೆ ಮನೆಯವರ ಮೇಲೆ ಮಹಿಳೆಯೊಬ್ಬರು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂದ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ. ಸದಾಶಿವನಗರ ಅದ್ವೈತ ಎಂಬ ಆರೋಪಿ ನೆರೆ ಮನೆಯ ಭಾವನಾ ಎಂಬ ಮಹಿಳೆ ಮಾಸ್ಕ್ ವಿಚಾರಕ್ಕೆ ಮಾತಿನ ಚಕಮಕಿ ನಡೆಸಿ ಕಡೆಗೆ ಕೈ ಮಿಲಾಯಿಸಿದ್ದಾರೆ. ಮಂಗಳವಾರ ಈ ಘಟನೆ ನಡೆದಿದ್ದು, ಮಹಿಳೆಯರ ಈ ರಂಪಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಕುರಿತು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.
ಅದ್ವೈತ ಎಂಬ ಮಹಿಳೆ ಭಾವನಾಗೆ ಮಾಸ್ಕ್ ಸರಿಯಾಗಿ ಧರಿಸಿಲ್ಲ ಎಂದು ತಿಳಿಸಿದ್ದಾರೆ. ಇದೇ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಅದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಈ ವೇಳೆ ಅದ್ವೈತ ಭಾವನಾರನ್ನು ತಳ್ಳಿದ್ದಾರೆ. ಇದೇ ಸಂದರ್ಭದಲ್ಲಿ ಸುತ್ತಮುತ್ತಲ ಜನರು ಬಂದಿದ್ದಾರೆ. ಅಲ್ಲದೇ, ನೀವು ತಿಳಿ ಹೇಳಿ ಒಡೆಯುವ ಹಕ್ಕಿಲ್ಲ ಎಂದು ಅವರಿಗೆ ತಿಳಿಸಿದ್ದಾರೆ. ಈ ರೀತಿ ಹಿಂಸಾಚಾರ ನಡೆಸು ಹಕ್ಕು ಇಲ್ಲ ಎಂದು ನೆರೆದ ಜನರು ವಾದಿಸಿದ್ದಾರೆ. ಅಲ್ಲದೆ ಪರಿಸ್ಥಿತಿ ಕುರಿತು ಅವರಿಗೆ ತಿಳಿಸಲು ಯತ್ನಿಸಿದ್ದಾರೆ. ಇದರಿಂದ ಕುಪಿತಗೊಂಡ ಅದ್ವೈತ, ದಿನೇ ದಿನೇ ಸೋಂಕಿನ ಪ್ರಕರಣ ಹೆಚ್ಚಾಗುತ್ತಿದ್ದರೂ ಜನರು ಮಾಸ್ಕ್ ಧರಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ, ಕೂಗಾಡಿದ್ದಾರೆ. ಈ ಘಟನೆಗಳು ವಿಡಿಯೋ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ
ಇದನ್ನು ಓದಿ: ಕಲಾಪದ ವೇಳೆ ಜೂಹಿ ಚಾವ್ಲಾ ಸಿನಿಮಾ ಹಾಡು ಹೇಳಿ ಅಡ್ಡಿಪಡಿಸಿದ ವ್ಯಕ್ತಿ
ಘಟನೆ ಕುರಿತು ಮಾತನಾಡಿರುವ ಸದಾಶಿವನಗರ ಪೊಲೀಸರು, ಭಾವನಾ ಮಾಸ್ಕ್ ಧರಿಸಿದ್ದರು. ಆದರೆ, ಅವರು ಮೂಗನ್ನು ಸರಿಯಾಗಿ ಮುಚ್ಚಿಕೊಂಡಿರಲಿಲ್ಲ, ಇದನ್ನು ಗಮನಿಸಿದ ಅದ್ವೈತ ಆಕೆಯೊಂದಿಗೆ ವಾದ ನಡೆಸಿದ್ದರು. ಬಳಿಕ ಆಕೆ ನಾಯಿಯನ್ನು ಕರೆದುಕೊಂಡು ವಾಕಿಂಗ್ ಹೋಗುವಾಗ ಕೋಲಿನಿಂದ ಹಲ್ಲೆ ನಡೆಸಿದ್ದಾರೆ. ಈ ಘಟನೆ ಕುರಿತು ನಾವು ಎಫ್ಐಆರ್ ದಾಖಲಿಸಿದ್ದೇವೆ. ಅಲ್ಲದೇ ಸಾಕ್ಷ್ಯಗಳನ್ನು ನಾಶ ಮಾಡದಂತೆ, ಬೆದರಿಕೆ ಹಾಕದಂತೆ ಅವರಿಗೆ ತಿಳಿಸಿದ್ದೇವೆ ಎಂದಿದ್ದಾರೆ.
ಘಟನೆ ಕುರಿತು ಮಹಿಳೆ ವಿರುದ್ಧ ಐಪಿಸಿ ಸೆಕ್ಷನ್ 324 ಮತ್ತು 341ರ ಅಡಿ ಪ್ರಕರಣ ದಾಖಲಿಸಲಾಗಿದೆ
(ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ