ಸಿದ್ದರಾಮಯ್ಯ ನಿವಾಸದಲ್ಲಿ ಸೋದರರ ಮುಖಾಮುಖಿ; ಮಧು ಬಂಗಾರಪ್ಪ ಬೆನ್ನಲ್ಲೇ ‘ಕೈ’ಗೆ ಕುಮಾರ್ ಬಂಗಾರಪ್ಪ?

bangarappa son’s at siddaramaiah home: ಇತ್ತ ಕುಮಾರ್ ಬಂಗಾರಪ್ಪ ಆಗಮಿಸುತ್ತಿದ್ದಂತೆ ಮಧು ಬಂಗಾರಪ್ಪ ಮಾಧ್ಯಮಗಳ ಜೊತೆ ಮಾತನಾಡದೇ ತೆರಳಿದ್ದರು. ಆದ್ರೂ ಈ ಭೇಟಿ ಕಾಕತಾಳೀಯವೂ ಅಥವಾ ಪೂರ್ವ ನಿರ್ಧರಿತವೋ ಎಂಬುದರ ಬಗ್ಗೆ ರಾಜಕೀಯ ಅಂಗಳದಲ್ಲಿ ಚರ್ಚೆಗಳು ನಡೆಯುತ್ತಿವೆ.

ಸಿದ್ದರಾಮಯ್ಯ ಭೇಟಿಯಾದ ಕುಮಾರ್​ ಬಂಗಾರಪ್ಪ

ಸಿದ್ದರಾಮಯ್ಯ ಭೇಟಿಯಾದ ಕುಮಾರ್​ ಬಂಗಾರಪ್ಪ

 • Share this:
  ಬೆಂಗಳೂರು: ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ನಿವಾಸದಲ್ಲಿ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ (Kumar Bangarappa) ಮತ್ತು ಇತ್ತೀಚೆಗೆ ಕಾಂಗ್ರೆಸ್​​ ಸೇರಿರುವ ಮಧು ಬಂಗಾರಪ್ಪ (Madhu Bangarappa) ಭೇಟಿಯಾಗಿದ್ದಾರೆ. ಮಧು ಕಾಂಗ್ರೆಸ್ 9Congress) ಸೇರ್ಪಡೆ ಬೆನ್ನಲ್ಲೇ ಸೋದರ ಕುಮಾರ್ ಬಂಗಾರಪ್ಪ ಬಿಜೆಪಿ ತೊರೆಯುತ್ತಾರಾ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು. ಸಿದ್ದರಾಮಯ್ಯನವರನ್ನು ಭೇಟಿಯಾಗಿ ಹೊರ ಬರುತ್ತಿದ್ದಂತೆ ಕುಮಾರ್ ಬಂಗಾರಪ್ಪ ಮಾಧ್ಯಮಗಳ ಜೊತೆ ಮಾತನಾಡಿದರು. ಕುಮಾರ್ ಬಂಗಾರಪ್ಪ ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಸಿದ್ದರಾಮಯ್ಯನವರ ಜೊತೆ ಮಾತುಕತೆ ನಡೆಸಿದ್ದಾರೆ.

  ಮದುವೆ ಆಮಂತ್ರಣ ನೀಡಲು ಬಂದಿದ್ದೆ 

  ನವೆಂಬರ್ 10ರಂದು ಮಗಳ ಮದುವೆ ನಿಶ್ಚಯವಾಗಿದೆ. ಹಾಗಾಗಿ ಸಿದ್ದರಾಮಯ್ಯನವರಿಗೆ ಆಮಂತ್ರಣ ಪತ್ರಿಕೆ ನೀಡಲು ಬಂದಿದ್ದೆ. ಇದೇ ಸಮಯದಲ್ಲಿ ಮಧು ಬಂಗಾರಪ್ಪ ಸಹ ಇರೋದು ಕಂಡು ಸಂತೋಷವಾಯ್ತು. ಸಿದ್ದರಾಮಯ್ಯನವರಿಗೆ ಆಹ್ವಾನ ನೀಡಿ ವೈಯಕ್ತಿಕ ವಿಷಯಗಳ ಬಗ್ಗೆ ಮಾತನಾಡಿದ್ದೇವೆ. ರಾಜಕೀಯ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ. ಇದು ವೈಯಕ್ತಿಕ ಭೇಟಿ ಅಂತ ಹೇಳಿದರು. ಇತ್ತ ಕುಮಾರ್ ಬಂಗಾರಪ್ಪ ಆಗಮಿಸುತ್ತಿದ್ದಂತೆ ಮಧು ಬಂಗಾರಪ್ಪ ಮಾಧ್ಯಮಗಳ ಜೊತೆ ಮಾತನಾಡದೇ ತೆರಳಿದ್ದರು. ಆದ್ರೂ ಈ ಭೇಟಿ ಕಾಕತಾಳೀಯವೂ ಅಥವಾ ಪೂರ್ವ ನಿರ್ಧರಿತವೋ ಎಂಬುದರ ಬಗ್ಗೆ ರಾಜಕೀಯ ಅಂಗಳದಲ್ಲಿ ಚರ್ಚೆಗಳು ನಡೆಯುತ್ತಿವೆ.

  ಗೆದ್ದ ಎಲ್ಲರಿಗೂ ಮಂತ್ರಿ ಸ್ಥಾನ ಸಿಗುತ್ತಾ?

  ಶಿವಮೊಗ್ಗ ಜಿಲ್ಲೆಗೆ ಎರಡು ಮಂತ್ರಿ ಸ್ಥಾನ ನೀಡಲಾಗಿದೆ. ನಾನು ಸಚಿವ ಸ್ಥಾನದ ಆಕಾಂಕ್ಷಿಯೂ ಅಲ್ಲ. ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಸುನಿಲ್ ಕುಮಾರ್ ನಮ್ಮ ಜಾತಿಯವರು. ಹಾಗಾಗಿ ಸಚಿವ ಸ್ಥಾನ ನೀಡುವಂತೆ ಕೇಳಲ್ಲ. ಸಾಧ್ಯವಾದಷ್ಟು ಹೆಚ್ಚು ಅನುದಾನ ಪಡೆದುಕೊಂಡು ಕ್ಷೇತ್ರದ ಅಭಿವೃದ್ಧಿ ಕೆಲಸಗಳಲ್ಲಿ ತೊಡಗಿಕೊಂಡಿದ್ದೇನೆ. 32 ಸ್ಥಾನಗಳಲ್ಲಿ ಯಾರಿಗೆ ಮಂತ್ರಿಗಿರಿ ನೀಡಬೇಕು ಎಂಬುದನ್ನು ಮುಖ್ಯಮಂತ್ರಿಗಳು ಮತ್ತು ಪಕ್ಷ ನಿರ್ಧಾರ ಮಾಡುತ್ತದೆ. ಗೆದ್ದ ಎಲ್ಲ ಶಾಸಕರಿಗೆ ಮಂತ್ರಿ ಸ್ಥಾನ ನೀಡಲು ಆಗುತ್ತಾ ಎಂದು ಕುಮಾರ್ ಬಂಗಾರಪ್ಪ ಪ್ರಶ್ನೆ ಮಾಡಿದರು.

  ಕಾಂಗ್ರೆಸ್ ಸೇರ್ಪಡೆ ಸುದ್ದಿ ಸತ್ಯಕ್ಕೆ ದೂರವಾದದ್ದು

  ನಾನು ಬಿಜೆಪಿ ಟಿಕೆಟ್ ಪಡೆದು ಚುನಾವಣೆಯಲ್ಲಿ ಸ್ಫರ್ಧಿಸಿ ಗೆದ್ದಿದ್ದೇನೆ. ಬಿಜೆಪಿಯಲಿಯೇ ಇರುತ್ತೇನೆ ಮತ್ತು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಚಿಹ್ನೆ ಅಡಿಯಲ್ಲಿ ಸ್ಪರ್ಧೆ ಮಾಡುತ್ತೇನೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತೇನೆ ಎಂಬ ಮಾತುಗಳು ಸತ್ಯಕ್ಕೆ ದೂರವಾದದ್ದು. ಯಾವ ಕಾಂಗ್ರೆಸ್ ನಾಯಕರು ನನ್ನನ್ನು ಸಂಪರ್ಕ ಮಾಡಿಲ್ಲ ಎಂದು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದ್ದ ಊಹಾಪೋಹಗಳಿಗೆ ತೆರೆ ಎಳೆಯಲು ಯತ್ನಿಸಿದರು.

  ಇದನ್ನೂ ಓದಿ : DK Shivakumar-BY Vijayendra: ವೇದಿಕೆ ಮೇಲೆ ಡಿಕೆಶಿ-ಬಿ.ವೈ.ವಿಜಯೇಂದ್ರ ಗುಪ್ತ್ ಗುಪ್ತ್ ಮಾತುಕತೆ!

  ಡಿಕೆಶಿ ಬಗ್ಗೆ ಸಾಫ್ಟ್ ಕಾರ್ನರ್ 

  ಇದೇ ವೇಳೆ ಸಲೀಂ ಮತ್ತು ಉಗ್ರಪ್ಪ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಕುಮಾರ್ ಬಂಗಾರಪ್ಪ, ಕಾಂಗ್ರೆಸ್ ಪಕ್ಷವೇ ನಮಗೆ ಅಸ್ತ್ರ ನೀಡಿದೆ. ಆ ಆಸ್ತ್ರ ನಮ್ಮ ಬಳಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಪ್ರಯೋಗಿಸಲಾಗುತ್ತೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D K Shivakumar) ಭ್ರಷ್ಟಾಚಾರ ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಕಾಂಗ್ರೆಸ್ ನಾಯಕರು ವೇದಿಕೆಯಲ್ಲಿ ಆ ರೀತಿ ಮಾತನಾಡಬಾರದಿತ್ತು ಎಂದು ಡಿಕೆಶಿ ಬಗ್ಗೆ ಸಾಫ್ಟ್ ಕಾರ್ನರ್ ತೋರಿದರು.

  ವರದಿ: ಮೊಹ್ಮದ್​ ರಫೀಕ್​ ಕೆ 
  Published by:Kavya V
  First published: