Rain Update: ಬೆಂಗಳೂರಿನಲ್ಲಿ ಮತ್ತೆ ಮಳೆಯಾಗಿದೆ; ಮುಂದಿನ 3 ದಿನಗಳ ಕಾಲ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು ಸೇರಿದಂತೆ ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ 3 ದಿನಗಳೂ ಇದೇ ರೀತಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಶುಕ್ರವಾರ ಮುನ್ಸೂಚನೆ ನೀಡಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Rain Update Bangalore rain update rain in Bangalore mandya chamarajanagar in summer days
ಬೆಂಗಳೂರಿನಲ್ಲಿ ಮೂರನೇ ದಿನವೂ ಮಳೆರಾಯ ಅಬ್ಬರಿಸಿದ್ದಾನೆ. ಬೆಂಗಳೂರಿನ ಜಯನಗರ, ಸೌತ್ ಎಂಡ್ ಸರ್ಕಲ್, ಜೆ.ಪಿ. ನಗರ, ಬನಶಂಕರಿ, ವಿಲ್ಸನ್ ಗಾರ್ಡನ್, ಟೌನ್ ಹಾಲ್, ಮೈಸೂರು ರಸ್ತೆ, ಕತ್ರಿಗುಪ್ಪೆ, ಪದ್ಮನಾಭನಗರ, ಮೆಜೆಸ್ಟಿಕ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜೋರು ಮಳೆಯಾಗಿದೆ.


young boy dies because of current shock due to rain in Bengaluru
ಸುರಿದ ಮಳೆಗೆ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸಂಜೆ ವೇಳೆಗೆ ಕೆಲಸ ಮುಗಿಸಿಕೊಂಡು ಮನೆ ಸೇರಬೇಕೆಂದುಕೊಂಡವರಿಗೆ ವಾಹನ ದಟ್ಟಣೆ ಎದುರಾಗಿದೆ. ಬೈಕ್ ಸವಾರರು ಅಲ್ಲಲ್ಲಿ ಫ್ಲೈಓವರ್ ಕೆಳಗೆ ಆಶ್ರಯ ಪಡೆದಿದ್ದಾರೆ. ಹಲವೆಡೆ ಮಳೆಯಿಂದಾಗಿ ವಿದ್ಯುತ್ ಕಡಿತವಾಗಿದೆ.


heavy rain lashes with thunderstorms in bengaluru
ಮಲ್ಲೇಶ್ವರಂ, ಗುಟ್ಟಳ್ಳಿ, ವಸಂತನಗರ, ಶೇಷಾದ್ರಿ ರಸ್ತೆ ಕೆಲವು ಕಡೆ ಮಳೆ ಬೀಳುತ್ತಿರುವ ಕಾರಣದಿಂದಾಗಿ ಪವರ್ ಕಟ್ ಸಮಸ್ಯೆ ಎದುರಾಗಿತ್ತು


Karnataka Rain Update Bangalore rain update rain in Bangalore mandya chamarajanagar in summer days
ಇನ್ನು ಈ ಬಾರಿಯ ನೈರುತ್ಯ ಮುಂಗಾರು ವಾಡಿಕೆಯಂತೆ ಇರಲಿದ್ದು, ಉತ್ತರ ಭಾರತದ ಕೆಲವೆಡೆ ಅಧಿಕ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ


Heavy rain lashes in Hubballi 14 sheep and a horse died due to lightning
ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ 3 ದಿನಗಳೂ ಇದೇ ರೀತಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಶುಕ್ರವಾರ ಮುನ್ಸೂಚನೆ ನೀಡಿದೆ.


ದೇಶದ ಮಧ್ಯ ಭಾಗ, ಹಿಮಾಲಯದ ತಪ್ಪಲಿನಲ್ಲಿ ಹಾಗೂ ವಾಯವ್ಯ ಭಾಗದಲ್ಲಿ ಸಹ ವಾಡಿಕೆಗಿಂತ ಹೆಚ್ಚು ಮಳೆ ಬೀಳುವುದು.


IMD predicts heavy rainfall severe heatwave in these states for next two days
ದೇಶದ ಈಶಾನ್ಯ ಹಾಗೂ ವಾಯವ್ಯ ಭಾಗದ ಕೆಲ ಪ್ರದೇಶಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.


1971–2020ವರೆಗಿನ ದೀರ್ಘಾವಧಿ ಸರಾಸರಿ (ಎಲ್‌ಪಿಎ) ಮಳೆ 87 ಸೆಂ.ಮೀ. ಇದೆ. ಈ ಬಾರಿ ಈ ಎಲ್‌ಪಿಎದ ಶೇ 96ರಿಂದ 104ರಷ್ಟು ಮಳೆ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.


ಈ ಮೊದಲು 1961ರಿಂದ2010ರ ವರೆಗಿನ ಎಲ್‌ಪಿಎ 88 ಸೆಂ.ಮೀ. ಅನ್ನು ಮಾನದಂಡವಾಗಿ ಇಲಾಖೆ ಪರಿಗಣಿಸುತ್ತಿತ್ತು.
Published by:Pavana HS
First published: