ಬೆಂಗಳೂರು(ಜು.01): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆ, ಹಂತ-ಹಂತವಾಗಿ ಲಾಕ್ಡೌನ್ ಸಡಿಲಿಕೆ ಮಾಡಲಾಗುತ್ತಿದೆ. ಸದ್ಯಕ್ಕೆ 2ನೇ ಹಂತದ ಅನ್ಲಾಕ್ ಕರ್ನಾಟಕದಲ್ಲಿ ಜಾರಿಯಲ್ಲಿದೆ. ಕೆಲವು ಷರತ್ತುಗಳೊಂದಿಗೆ ಬಸ್ ಹಾಗೂ ಮೆಟ್ರೋ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಾರ, ಜುಲೈ 1ರಿಂದ ಬೆಂಗಳೂರು ಮೆಟ್ರೋದಲ್ಲಿ ಜನರು ಬೆಳಗ್ಗೆಯಿಂದ ಸಂಜೆವರೆಗೂ ಪ್ರಯಾಣಿಸಬಹುದಾಗಿದೆ.
ಈ ಮೊದಲು ಬೆಳಗ್ಗೆ 7ರಿಂದ ಬೆಳಗ್ಗೆ 11 ಗಂಟೆವರೆಗೆ ಹಾಗೂ ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತೀ 5 ನಿಮಿಷಗಳ ಅಂತರದಲ್ಲಿ ಮೆಟ್ರೋ ಸೇವೆ ಪ್ರಯಾಣಿಕರಿಗೆ ಲಭ್ಯವಿತ್ತು.
ಈಗ ಈ ನಿಯಮದಲ್ಲಿ ಕೊಂಚ ಬದಲಾವಣೆ ಮಾಡಿರುವ ಬಿಎಂಆರ್ಸಿಎಲ್, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರಿಗೆ ನಮ್ಮ ಮೆಟ್ರೋ ಸೇವೆ ಲಭ್ಯವಿರಲಿದೆ ಎಂದು ಹೇಳಿದೆ. ಜೊತೆಗೆ ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಮೆಟ್ರೋದಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.
ಇದನ್ನೂ ಓದಿ:Cooking Oil Price: ಗೃಹಿಣಿಯರಿಗೆ ಸಿಹಿ ಸುದ್ದಿ; ಶೀಘ್ರದಲ್ಲೇ ಅಡುಗೆ ಎಣ್ಣೆ ಬೆಲೆ ಕಡಿಮೆ ಆಗುತ್ತಂತೆ..!
ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ. ಜನದಟ್ಟಣೆಯ ಸಂದರ್ಭದಲ್ಲಿ 5 ನಿಮಿಷಕ್ಕೆ ಒಂದರಂತೆ, ಜನದಟ್ಟಣೆ ಇಲ್ಲದ ವೇಳೆ 15 ನಿಮಿಷಕ್ಕೆ ಒಂದರಂತೆ ಮೆಟ್ರೋ ರೈಲುಗಳು ಸಂಚಾರ ಮಾಡುತ್ತವೆ ಎಂದು ಬಿಎಂಆರ್ಸಿಎಲ್ ಹೇಳಿದೆ.
ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಮೆಟ್ರೋ ಸಂಚಾರ ಇರುತ್ತದೆ. ಶನಿವಾರ ಮತ್ತು ಭಾನುವಾರ ವೀಕೆಂಡ್ ಕರ್ಫ್ಯೂ ಇರುವ ಹಿನ್ನೆಲೆ, ಮೆಟ್ರೋ ಸಂಚಾರ ಇರಲ್ಲ. ಪ್ರಯಾಣಿಕರು ಟೋಕನ್ ಬಳಸಿ ಪ್ರಯಾಣ ಮಾಡಬಹುದಾಗಿದೆ. ನಮ್ಮ ಮೆಟ್ರೋ ಸ್ಟೇಷನ್ ಗಳಲ್ಲಿ ಟೋಕನ್ ನೀಡಲಾಗುತ್ತಿದೆ.
ಇದನ್ನೂ ಓದಿ:LPG Price Hike: ಗ್ರಾಹಕರಿಗೆ ಶಾಕಿಂಗ್ ನ್ಯೂಸ್; ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಏರಿಕೆ
ಪ್ರಯಾಣಿಕರ ಸಂಖ್ಯೆಯನ್ನು ನೋಡಿಕೊಂಡು ಮೆಟ್ರೋ ರೈಲುಗಳನ್ನು ಕಡಿಮೆ ಮಾಡುವ ಅಥವಾ ಹೆಚ್ಚು ಮಾಡುವ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೂಡ ಬಿಎಂಆರ್ಸಿಎಲ್ ಹೇಳಿದೆ. ಈ ಹಿಂದೆ ಬೆಳಗ್ಗೆ 7 ರಿಂದ 11 ಮಧ್ಯಾಹ್ನ 3 ರಿಂದ 6 ಗಂಟೆಯವರೆಗೆ ಮಾತ್ರ ಮೆಟ್ರೋ ಸಂಚಾರವಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ