ಬೆಂಗಳೂರು(ಜು.19): ಇಂದು ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಎಂದು ಬೆಸ್ಕಾಂ ಮನವಿ ಮಾಡಿಕೊಂಡಿದೆ. ನಗರದ ವಿವಿಧ ಏರಿಯಾಗಳಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6.30ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಅಧಿಕೃತವಾಗಿ ಮಾಹಿತಿ ನೀಡಿದೆ.
ಬೆಸ್ಕಾಂ ಹೇಳಿರುವ ಪ್ರಕಾರ, ಬೆಂಗಳೂರಿನ ಜಯನಗರ ಸೇರಿದಂತೆ ಹಲವೆಡೆ ಇಂದು ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ತಿಳಿದು ಬಂದಿದೆ.
ಎಸ್2- ಸಬ್-ಡಿವಿಶನ್, ಬಿಎಂಟಿಸಿ, ಸುಧಾಮನಗರ, ಸಿದ್ದಯ್ಯ ರಸ್ತೆ.(ಬೆಳಗ್ಗೆ 10 ರಿಂದ 6.30 ರವರೆಗೆ)
ಎಸ್6-ಎಲಿಟಾ, ಅಷ್ಟಲಕ್ಷ್ಮಿ ಲೇಔಟ್, ಪುಟ್ಟೇನಹಳ್ಳಿ, ಕೆ.ಆರ್ಲೇಔಟ್. (ಬೆಳಗ್ಗೆ 10 ರಿಂದ 6.30 ರವರೆಗೆ)
ಎಸ್9- ಪದ್ಮನಾಭನಗರ, ಎಸ್9 ಕಚೇರಿ, ರಿಂಗ್ ರೋಡ್, 27ನೇ ಮುಖ್ಯರಸ್ತೆ, ಯಾರಬ್ನಗರ ಮುಖ್ಯ ರಸ್ತೆ, ಮಸ್ಜೀದ್ ರಸ್ತೆ, ಬಿಎಸ್ಎನ್ಎಲ್ ಕಚೇರಿ, ಸರ್ಕಾರಿ ಆಸ್ಪತ್ರೆ, ಎನ್ಪಿಟಿಐ ಸರ್ಕಲ್, ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್. (ಬೆಳಗ್ಗೆ 10ರಿಂದ ಸಂಜೆ 6.30 ರವರೆಗೆ)
ಇದನ್ನೂ ಓದಿ:Morning Digest: ರಾಜ್ಯದಲ್ಲಿ ಇಂದು SSLC ಪರೀಕ್ಷೆ, ಜು.21ರವರೆಗೆ ಮಳೆಯ ಅಬ್ಬರ; ಇಂದಿನ ಪ್ರಮುಖ ಸುದ್ದಿಗಳಿವು
ಎಸ್15- ಬನಶಂಕರಿ, ಕತ್ರಿಗುಪ್ಪೆ ಮುಖ್ಯ ರಸ್ತೆ ಮತ್ತು ಕತ್ರಿಗುಪ್ಪೆ ಗ್ರಾಮ, 100 ಅಡಿ ರಿಂಗ್ ರೋಡ್, (ಬೆಳಗ್ಗೆ 10 ರಿಂದ ಸಂಜೆ 6.30ರವರೆಗೆ)
ಎಸ್18- ಅರೇಹಳ್ಳಿ MUSS, ಬೃಂದಾವನ ಲೇಔಟ್, (ಬೆಳಗ್ಗೆ 9.10ರಿಂದ ಮಧ್ಯಾಹ್ನ 3 ಗಂಟೆವರೆಗೆ)
ಎಸ್18- ಸುಬ್ರಹ್ಮಣ್ಯಪುರ MUSS, ತುರಹಳ್ಳಿ (ಬೆಳಗ್ಗೆ 9.30ರಿಂದ ಮಧ್ಯಾಹ್ನ 3.30ರವರೆಗೆ) ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಆಗಲಿದೆ.
ಈ ಭಾಗದ ಜನ ವಿದ್ಯುತ್ ಸಂಬಂಧಿತ ನಿತ್ಯದ ಚಟುವಟಿಗಳನ್ನು ಬೆಳಗ್ಗೆ 10 ಗಂಟೆ ಒಳಗೆ ಹಾಗೂ ಸಂಜೆ 6.30 ರ ಬಳಿಕ ಮಾಡಿಕೊಳ್ಳುವುದು ಒಳಿತು. ಇಂದು ಪವರ್ ಕಟ್ ಸಮಸ್ಯೆಗೆ ತಕ್ಕಂತೆ ಕೆಲಸಗಳನ್ನು ಮಾಡಿಕೊಳ್ಳುವುದು ಉತ್ತಮ. ಬೆಸ್ಕಾಂ ಮನವಿಗೆ ಸಹಕರಿಸಬೇಕು ಎಂದು ನಿಗಮ ಕೇಳಿಕೊಂಡಿದೆ.
ನಿರ್ವಹಣಾ ಕಾರ್ಯದಿಂದಾಗಿ ಇಂದು ಬೆಂಗಳೂರಿನ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸಾಧ್ಯವಾಗುತ್ತಿಲ್ಲ. ಕಳೆದ ವಾರ ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.
ಇದನ್ನೂ ಓದಿ:Karnataka Weather Today: ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ; ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
ನಿಮ್ಮ ಜಿಲ್ಲೆಯಿಂದ (ಬೆಂಗಳೂರು ನಗರ)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ