Bengaluru Power Cut:ಮಳೆಯ ಆರ್ಭಟದ ನಡುವೆ ಪವರ ಕಟ್ ಸಮಸ್ಯೆ- ಇಂದು ಯಾವ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ ಇಲ್ಲಿದೆ ಸಂಪೂರ್ಣ ಡೀಟೈಲ್ಸ್​

Bengaluru Power Cut: ದಿನಲ್ಲಿ ಒಂದೆರೆಡು ಗಂಟೆಗಳಾದರೇ ಹೇಗೆ ಸಂಭಾಳಿಸಬಹುದು ಆದರೆ 5 ಗಂಟೆಗಳಿಗಿಂತ ಹೆಚ್ಚು ವಿದ್ಯುತ್ ಇಲ್ಲದೆ ಜನರು ಪರದಾಡುವಂತಾಗುತ್ತದೆ.  ಅಲ್ಲದೇ ಕೇವಲ ಒಂದು ದಿನ ಮಾತ್ರ ವಾಗಿದ್ದರೂ ಹೇಗೆ ಸಾಧ್ಯವಿತ್ತು ಆದರೆ ಕಳೆದ ಒಂದು ವಾರಗಳಿಂದ ವಿದ್ಯುತ್ ಸಮಸ್ಯೆಯಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ರಾಜಧಾನಿ ಬೆಂಗಳೂರಿನಲ್ಲಿ (Bengaluru)ಒಂದೆಡೆ ಧಾರಕಾರ ಮಳೆಯಿಂದ(Rainfall) ಜನಜೀವನ ಅಸ್ತವ್ಯಸ್ತವಾಗಿತ್ತು. ಅಲ್ಲದೇ ನಿನ್ನೆ ಸಹ ಭಾರೀ ಮಳೆಯಾಗಿದ್ದು, ಮುಂದಿನ ಕೆಲ ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಕೂಡ  ನಗರದ ಹಲವು ಮನೆಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಜನರು ಮಳೆಯಿಂದಾಗಿ ಪರದಾಡುತ್ತಿರುವ ಮಧ್ಯೆ ಬೆಸ್ಕಾಂ(BESCOM) ಪ್ರತಿದಿನ ವಿವಿಧ ಪ್ರದೇಶಗಳಲ್ಲಿ ಪವರ್ ಕಟ್(Power Cut) ಮಾಡುತ್ತಿದ್ದು, ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿದಿನ ಒಂದೆಲ್ಲ ಒಂದು ಏರಿಯಾದಲ್ಲಿ ಪವರ್ ಕಟ್ ಸಮಸ್ಯೆಯಾಗುತ್ತಿದೆ. ಇಂದೂ ಕೂಡ ಕೆಲ ಏರಿಯಾಗಳಲ್ಲಿ ವಿದ್ಯುತ್ ಸಮಸ್ಯೆಯಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

 ಯಾವ್ಯವ ಪ್ರದೇಶಗಳಲ್ಲಿ ಪವರ್ ಕಟ್ ?
ಬೆಳತೂರ್, ಕಾಡುಗೋಡಿ ಅಂಬೇಡ್ಕರ್ ನಗರ ಜೆಪಿ ನಗರ 2 ನೇ ಹಂತ, ಕೊಡಿಗೇಹಳ್ಳಿ, ಸರ್ಕಾರಿ ಶಾಲೆಯ ಸುತ್ತಮುತ್ತಲಿನ ಪ್ರದೇಶ, ವಾಜರಹಳ್ಳಿ, ಗಜಾರೆ ಲೇಔಟ್, ಎಂಜಿ ರಸ್ತೆ, ಕಾವೇರಿ ಲೇಔಟ್ ಹಾಗೂ ಗಾಯತ್ರಿ ಲೇಔಟ್, ಬಸವನಪುರ, ಕೆಆರ್ ಪುರಂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

ಆಶಿರ್ವಾದ್ ಲೇಔಟ್, ಆಮ್ಕೋ ಲೇಔಟ್, ಕೊಡಿಗೇಹಳ್ಳಿ ಅಂಬೇಡ್ಕರ್ ನಗರ, ವೈಟ್‌ಫೀಲ್ಡ್ , ಮಾರುತಿ ವಿಸ್ತರಣೆ, ರಾಜೀವ್ ನಗರ, ಪಟಾಲಮ್ಮ ವಿಸ್ತರಣೆ, ಮಾಲೂರು , ರಾಹುತನಹಳ್ಳಿ, ಲಕ್ಕೇನಹಳ್ಳಿ ಸೇರಿದಂತೆ ನೆಲಮಂಗಲದ ಸುತ್ತ ಮುತ್ತಲಿನ ಏರಿಯಾಗಳಲ್ಲಿ ಪವರ್ ಕಟ್ ಆಗಲಿದೆ.

ಇದನ್ನೂ ಓದಿ: ನಿಲ್ಲದ ತೈಲ ಬೆಲೆ ಏರಿಕೆ ನಾಗಾಲೋಟ; ದಿನದಿಂದ ದಿನಕ್ಕೆ ಪೆಟ್ರೋಲ್-ಡೀಸೆಲ್ ಮತ್ತಷ್ಟು ದುಬಾರಿ!

ಗಂಗೊಂಡನಹಳ್ಳಿ, ನಾಯಂಡನಹಳ್ಳಿ, ದತ್ತಾತ್ರೇಯ ನಗರ, ಯಶವಂತಪುರ , ಹೊಸಕೆರೆಹಳ್ಳಿ, ಚನ್ನಸಂದ್ರ, ಕಾಡುಗೋಡಿ, ವಿನಾಯಕ ಲೇಔಟ್, ಮೇದರಹಳ್ಳಿ, ಸೋಲದೇವನಹಳ್ಳಿ  ಹಾಗೂ ಹೆನ್ನೂರ್ ಕ್ರಾಸ್, ಕೊಥನೂರ್ ಮತ್ತು ಸುತ್ತಮುತ್ತಲಿನ ಪ್ರದೇಶದ ಜನರು ವಿದ್ಯುತ್ ಸಮಸ್ಯೆ ಎದುರಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಬೆಸ್ಕಾಂ ನಡೆಗೆ ಜನರ ಆಕ್ರೋಶ

ಬೆಂಗಳೂರಿನ ಜನರಿಗೆ ಪವರ್ ಕಟ್ ಸಮಸ್ಯೆ ಹೊಸದಲ್ಲ. ಕಳೆದ ಒಂದು ವಾರದಿಂದ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ತಲೆದೋರುತ್ತಿದ್ದು, ಜನರಿಗೆ ಕಷ್ಟವಾಗುತ್ತಿದೆ.  ಅದರಲ್ಲೂ ಕೊರೊನಾ ಕಾರಣದಿಂದ ಹೆಚ್ಚಿನ ಜನರು ಮನೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದಾರೆ ಈ ವಿದ್ಯುತ್ ಸಮಸ್ಯೆ ಅವರಿಗೆ ಹೆಚ್ಚಿನ ತೊಂದರೆ ಮಾಡುತ್ತದೆ.

ದಿನಲ್ಲಿ ಒಂದೆರೆಡು ಗಂಟೆಗಳಾದರೇ ಹೇಗೆ ಸಂಭಾಳಿಸಬಹುದು ಆದರೆ 5 ಗಂಟೆಗಳಿಗಿಂತ ಹೆಚ್ಚು ವಿದ್ಯುತ್ ಇಲ್ಲದೆ ಜನರು ಪರದಾಡುವಂತಾಗುತ್ತದೆ.  ಅಲ್ಲದೇ ಕೇವಲ ಒಂದು ದಿನ ಮಾತ್ರ ವಾಗಿದ್ದರೂ ಹೇಗೆ ಸಾಧ್ಯವಿತ್ತು ಆದರೆ ಕಳೆದ ಒಂದು ವಾರಗಳಿಂದ ವಿದ್ಯುತ್ ಸಮಸ್ಯೆಯಾಗಿದ್ದು, ಸಂಭಾಳಿಸುವುದು  ಅಸಾಧ್ಯ ಎಂಬುದು ಜನರ ವಾದ.  ಬೆಸ್ಕಾಂನ ಈ ನಡೆ ಜನರ ಆಕ್ರೋಶಕ್ಕೆ ಕಾರಣವಾಗಿದೆ.
Published by:Sandhya M
First published: