Bengaluru: ಬೆಂಗಳೂರಿನಲ್ಲಿ ಮಾತ್ರೆ, ಮಾಸ್ಕ್​, ಸ್ಯಾನಿಟೈಸರ್​ನಿಂದ ಅಲಂಕೃತಗೊಂಡ ಸಾಯಿಬಾಬಾ ದೇವಾಲಯ

ಸುಮಾರು 4 ದಿನಗಳ ಕಾಲ ತಯಾರಿ ನಡೆಸಿದ್ದು, ಒಂದು ವಾರಗಳ ನಂತರ ಇಲ್ಲಿ ಬಳಸಲಾಗಿರುವ ಎಲ್ಲಾ ರೀತಿಯ ವಸ್ತುಗಳನ್ನು ಅಗತ್ಯವಿರುವ ಜನರಿಗೆ ನೀಡಲಿದ್ದೇವೆ ಎಂದು ಕಾರ್ಯಕ್ರಮದ ವ್ಯವಸ್ಥಾಪಕರು ಹಾಗೂ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದ ಟ್ರಸ್ಟಿ ರಾಮ ಮೋಹನ ರಾಜ್ ತಿಳಿಸಿದರು.

ಮಾಸ್ಕ್, ಮಾತ್ರೆ, ಸ್ಯಾನಿಟೈಸರ್​​ನಿಂದ ಅಲಂಕೃತಗೊಂಡಿರುವ ದೇವಾಲಯ

ಮಾಸ್ಕ್, ಮಾತ್ರೆ, ಸ್ಯಾನಿಟೈಸರ್​​ನಿಂದ ಅಲಂಕೃತಗೊಂಡಿರುವ ದೇವಾಲಯ

  • Share this:
    ಬೆಂಗಳೂರು(ಜು.27): ಕೊರೋನಾ ಬಂದ ನಂತರ ಸ್ಯಾನಿಟೈಸರ್, ಮಾತ್ರೆ, ಇಂಜೆಕ್ಷನ್​ಗಳದ್ದೇ ಪ್ರಮುಖ ವಸ್ತುಗಳು ಎನ್ನುವಂತಾಗಿದೆ. ಇನ್ನು ಮಾಸ್ಕ್ ಇಲ್ಲದೆ ಬದುಕೇ ಇಲ್ಲದಂತಾಗಿದೆ. ಇಂಥಾ ಸಂದರ್ಭದಲ್ಲಿ ಕೊರೋನಾ ಸಂಬಂಧಿತ ವಸ್ತುಗಳನ್ನೇ ಬಳಸಿ ದೇವಸ್ಥಾನದ ಅಲಂಕಾರ ಮಾಡಲಾಗಿದೆ. ಇದು ಈಗ ಸಾಕಷ್ಟು ಗಮನ ಸೆಳೆಯುತ್ತಿದೆ.

    ಜೆಪಿ ನಗರದ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ 3 ಲಕ್ಷ ಮಾತ್ರೆ, 10 ಸಾವಿರ ಮಾಸ್ಕ್, 2 ಸಾವಿರ ಸ್ಯಾನಿಟೈಸರ್ ಬಳಸಿ ವಿಶೇಷ ಅಲಂಕಾರ ಮಾಡಿರುವುದನ್ನ ಕಂಡು ಭಕ್ತಾದಿಗಳು ಪುಳಕಿತರಾದರು. ಕೊರೋನಾ ಮೂರನೇ ಅಲೆಯ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುವುದು ಹಾಗೂ ವಿಶೇಷವಾದ ಅಲಂಕಾರದಿಂದ ಜನರಿಗೆ ಉಪಯೋಗವಾಗಬೇಕು ಎನ್ನುವ ಉದ್ದೇಶದಿಂದ ಮಾತ್ರೆಗಳನ್ನು ಬಳಸಿ ಅಲಂಕಾರ ಮಾಡುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ.

    3 ಲಕ್ಷ ಮಾತ್ರೆ, 10 ಸಾವಿರ ಮಾಸ್ಕ್, 2 ಸಾವಿರ ಸ್ಯಾನಿಟೈಸರ್ ಹಾಗೂ ರೇಷನ್ ಕಿಟ್ ನಲ್ಲಿ ಇರುವಂತಹ ಪದಾರ್ಥಗಳಿಂದ ಅಲಂಕಾರ ಮಾಡಿದ್ದೇವೆ. ಸುಮಾರು 4 ದಿನಗಳ ಕಾಲ ತಯಾರಿ ನಡೆಸಿದ್ದು, ಒಂದು ವಾರಗಳ ನಂತರ ಇಲ್ಲಿ ಬಳಸಲಾಗಿರುವ ಎಲ್ಲಾ ರೀತಿಯ ವಸ್ತುಗಳನ್ನು ಅಗತ್ಯವಿರುವ ಜನರಿಗೆ ನೀಡಲಿದ್ದೇವೆ ಎಂದು ಕಾರ್ಯಕ್ರಮದ ವ್ಯವಸ್ಥಾಪಕರು ಹಾಗೂ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದ ಟ್ರಸ್ಟಿ ರಾಮ ಮೋಹನ ರಾಜ್ ತಿಳಿಸಿದರು.

    ಇದನ್ನೂ ಓದಿ:Male Fertility: ಪುರುಷರ ಫಲವತ್ತತೆ ಮೇಲೆ ಪರಿಣಾಮ ಬೀರಬಹುದು ಕೊರೋನಾ ಸೋಂಕು..!

    ಈ ವಿಶೇಷ ಅಲಂಕಾರವನ್ನು ಕಂಡು ಸಂಸದ ತೇಜಸ್ವಿ ಸೂರ್ಯ ಶ್ಲಾಘಿಸಿದರು. ಲಕ್ಷಾಂತರ ರೂಪಾಯಿಗಳನ್ನು ಖರ್ಚುಗೊಳಿಸಿ ಹಾಳಾಗುವಂತಹ ವಸ್ತುಗಳನ್ನು ಬಳಸಿ ಅಲಂಕಾರ ಮಾಡಿದರೆ ಅದರಿಂದ ಉಪಯೋಗವಾಗುವುದಿಲ್ಲ. ಇಂತಹ ವಿಭಿನ್ನ ಆಲೋಚನೆಯಿಂದಾಗಿ ಅಲಂಕಾರವೂ ಆಗುತ್ತದೆ, ಹಾಗೆಯೇ ನಂತರ ಅದರ ಸದುಪಯೋಗವೂ ಆಗುತ್ತದೆ. ಈ ನಿಟ್ಟಿನಲ್ಲಿ ವಿಭಿನ್ನ ಆಲೋಚನೆ ಮಾಡಿರುವ ದೇವಾಲಯದ ಆಡಳಿತ ಮಂಡಳಿಯನ್ನು ಶ್ಲಾಘಿಸಿದರು.

    ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತೆ ಕವಿತಾ ಮಾತನಾಡಿ, ಲಾಕ್​ಡೌನ್​ನಲ್ಲಿ ಮನೆಯಿಂದ ಹೊರಗೆ ಹೋಗದೆ ಬಹಳಷ್ಟು ಬೇಸರಕ್ಕೀಡಾಗಿದ್ದೆವು. ಲಾಕ್​ಡೌನ್​ ಸಡಿಲಿಕೆಗೊಂಡ ನಂತರ ಇಂತಹ ವಿಭಿನ್ನ ಆಲೋಚನೆಯ ಅಲಂಕಾರ ಮಾಡಿರುವ ದೇವಸ್ಥಾನಕ್ಕೆ ಭೇಟಿ ನೀಡದ್ದು ಸಂತಸವಾಯಿತು ಎಂದು ಹೇಳಿದರು.

    ಇದನ್ನೂ ಓದಿ:Karnataka Dams Water Level: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ

    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.
    Published by:Latha CG
    First published: