Power Cut: ಬೆಂಗಳೂರಿನ ಈ ಭಾಗಗಳಲ್ಲಿ ಜು.17ವರೆಗೆ ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಪವರ್ ಕಟ್!

ಜಯನಗರ ಉಪ ವಿಭಾಗ, ನಂಜಪ್ಪ ಲೇಔಟ್​, ವಿನಾಯಕ ನಗರ, ಎಲೆಕ್ಟ್ರಾನಿಕ್​ ಸಿಟಿ, ಎಚ್​ಎಸ್​ಆರ್​ ಲೇಔಟ್​, ಮೈಲ್​ಸಂದ್ರ ಸೇರಿದಂತೆ ಹಲವು ಕಡೆ ವಿದ್ಯುತ್​ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

  • Share this:
ಬೆಂಗಳೂರು: ಸಿಲಿಕಾನ್​ ಸಿಟಿ ಮಂದಿಗೆ ವಿದ್ಯುತ್​ ಸರಬರಾಜು ಬಗ್ಗೆ ಬೆಸ್ಕಾಂ ಮಹತ್ತರ ಆದೇಶವನ್ನು ಹೊರಡಿಸಿದೆ. ರಾಜಧಾನಿಯ ಆಯ್ದೆ ಭಾಗಗಳಲ್ಲಿ ಇಂದಿನಿಂದ ಶುಕ್ರವಾರ (ಜು.17)ರವರೆಗೆ ವಿದ್ಯುತ್​ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಇಂದಿನಿಂದ ಶುಕ್ರವಾರದವಗೆರೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಪವರ್​ ಕಟ್​ ಇರಲಿದೆ ಎಂದು ಬೆಸ್ಕಾಂ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಜಯನಗರ ಉಪ ವಿಭಾಗ, ನಂಜಪ್ಪ ಲೇಔಟ್​, ವಿನಾಯಕ ನಗರ, ಎಲೆಕ್ಟ್ರಾನಿಕ್​ ಸಿಟಿ, ಎಚ್​ಎಸ್​ಆರ್​ ಲೇಔಟ್​, ಮೈಲ್​ಸಂದ್ರ ಸೇರಿದಂತೆ ಹಲವು ಕಡೆ ವಿದ್ಯುತ್​ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ತಾಂತ್ರಿಕ ಕಾರಣಗಳಿಂದ ಪವರ್​ ಕಿಟ್​ ಪ್ರಾಬ್ಲಂ ಇರಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಬೆಸ್ಕಾಂ ಮನವಿ ಮಾಡಿಕೊಂಡಿದೆ. ಈ ಭಾಗದ ಜನ ವಿದ್ಯುತ್​ ಸಂಬಂಧಿತ ನಿತ್ಯದ ಚಟುವಟಿಗಳನ್ನು ಬೆಳಗ್ಗೆ 10 ಗಂಟೆ ಒಳಗೆ ಹಾಗೂ ಸಂಜೆ 5 ಗಂಟೆ ಮೇಲೆ ಮಾಡಿಕೊಳ್ಳುವುದು ಒಳಿತು. ಈ ವಾರ ಪವರ್​ ಕಟ್​​ ಸಮಸ್ಯೆಗೆ ತಕ್ಕಂತೆ ಕೆಲಸಗಳನ್ನು ಮಾಡಿಕೊಳ್ಳುವುದು ಉತ್ತಮ. ಬೆಸ್ಕಾಂ ಮನವಿಗೆ ಸಹಕರಿಸಬೇಕು ಎಂದು ನಿಗಮ ಕೇಳಿಕೊಂಡಿದೆ.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by:Kavya V
First published: