Power Cut: ವಾರಂತ್ಯದಲ್ಲಿ ಮತ್ತೆ ಬೆಂಗಳೂರಿನ ಜನರಿಗೆ ಪವರ್ ಕಟ್ ಶಾಕ್! ಡಿ.26 ಮತ್ತು 27ರಂದು ವಿದ್ಯುತ್ ಕಡಿತ

Bescom: ಬೆಸ್ಕಾಂ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಡಿಸೆಂಬರ್ 26 ಹಾಗೂ 27ರಂದು ವಿದ್ಯುತ್ ಕಡಿತ ಮಾಡಿ ಕಾಮಗಾರಿ ಮಾಡಲು ಮುಂದಾಗಿದೆ. ಇದರಿಂದ ಹಲವು ಪ್ರದೇಶದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಬೆಂಗಳೂರಿಗರಿಗೆ(Bengaluru) ಪ್ರತಿನಿತ್ಯ ಇರುವ ಹಲವು ಸಮಸ್ಯೆಗಳ(Problem) ಜೊತೆ ವಿದ್ಯುತ್ ಕಡಿತ(Power Cut) ಸಂಪರ್ಕ ಸಮಸ್ಯೆಯು ದೊಡ್ಡ ತೊಂದರೆಯಾಗಿ ಪರಿಣಮಿಸಿದೆ.. ಈಗಾಗಲೇ ಒಂದಲ್ಲ ಒಂದು ಕಾರಣ ಹೇಳಿ ಪ್ರತಿನಿತ್ಯ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಬೆಸ್ಕಾಂ(Bescom) ವಿದ್ಯುತ್ ಕಡಿತ ಮಾಡುತ್ತಲೇ ಇದೆ.. ಹೀಗಾಗಿ ಎಷ್ಟೋ ಜನರು ತಮ್ಮ ಹಲವು ಅಗತ್ಯಗಳನ್ನು ಪೂರೈಕೆ ಮಾಡಿಕೊಳ್ಳಲಾಗದ ಸ್ಥಿತಿಯಲ್ಲಿ ಇದ್ದಾರೆ.. ಅದರಲ್ಲೂ ವರ್ಕ್ ಫ್ರಮ್ ಹೋಮ್(Work From Home) ಎಂದು ಕಾರ್ಯ ನಿರ್ವಹಣೆ ಮಾಡುತ್ತಿರುವ ನೇಕಾರ ಜನರು ಪ್ರತಿನಿತ್ಯ ವಿದ್ಯುತ್ ಕಡಿತವಾಗುತ್ತಿರುವುದಕ್ಕೆ ತೊಂದರೆಗೆ ಒಳಗಾಗಿದ್ದಾರೆ.. ಇದು ಸಾಲದು ಎಂಬಂತೆ ರಾಜ್ಯದಲ್ಲಿ ತೀವ್ರ ಚಳಿ ಶುರುವಾಗಿದ್ದು, ಜನರು ಮನೆಯಿಂದ ಹೊರ ಬರಲಾರದೆ ಸಂಕಷ್ಟ ಪಡುತ್ತಿದ್ದಾರೆ. ಹೀಗಾಗಿ ವಾರಾಂತ್ಯದ ವೇಳೆಯಲ್ಲಿ ಕುಟುಂಬಸ್ಥರು ಜೊತೆಗೆ ಕುಳಿತು ಮನೆಯಲ್ಲಿ ಕಾಲ ಕಳೆಯುತ್ತಾ ಟಿವಿ ನೋಡಬೇಕು ಎಂದುಕೊಳ್ಳುತ್ತಿರುವವರಿಗೂ ಬೆಸ್ಕಾಂ ವಿದ್ಯುತ್ ಕಡಿತ ಮಾಡುತ್ತಿರುವುದು ದೊಡ್ಡ ರಗಳೆಯಾಗಿದೆ. ಹೀಗಿರುವಾಗಲೇ ಮತ್ತೆ ವಾರಾಂತ್ಯವಾದ ನಾಳೆ ಮತ್ತು ಡಿಸೆಂಬರ್ 27 ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಮಾಡಲು ಬೆಸ್ಕಾಂ ಮುಂದಾಗಿದೆ.

  ಬೆಂಗಳೂರಿನಲ್ಲಿ ಎರಡು ದಿನ ವಿದ್ಯುತ್ ಕಡಿತ

  ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿ ಇರುವುದರಿಂದ ಬೆಸ್ಕಾಂ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಡಿಸೆಂಬರ್ 26 ಹಾಗೂ 27ರಂದು ವಿದ್ಯುತ್ ಕಡಿತ ಮಾಡಿ ಕಾಮಗಾರಿ ಮಾಡಲು ಮುಂದಾಗಿದೆ. ಇದರಿಂದ ಹಲವು ಪ್ರದೇಶದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ..

  ಇದನ್ನೂ ಓದಿ: ಇಂದಿನಿಂದ ಮೈಸೂರು ಅರಮನೆ ಆವರಣದಲ್ಲಿ ಫಲಪುಷ್ಪ ಪ್ರದರ್ಶನ, ಪುನೀತ್ ಹಾಗೂ ಬಿಪಿನ್ ರಾವತ್​​ಗೆ ಪುಷ್ಪ ನಮನ

  ಹೀಗಾಗಿ ನೀವು ವಿದ್ಯುತ್ ಬಳಸಿಕೊಂಡು ನೀವು ಯಾವುದಾದರೂ ಕೆಲಸ ಮಾಡಿಕೊಳ್ಳಬೇಕು ಎನ್ನುತ್ತಿದ್ದಾರೆ, ಇಂದು ಹಾಗೂ ನಾಳೆ ಬೆಳಗ್ಗೆ ಹತ್ತು ಗಂಟೆಯ ಒಳಗೆ ಅಥವಾ ಐದು ಗಂಟೆಯ ಬಳಿಕ ಮಾಡಿಕೊಳ್ಳುವುದು ಸೂಕ್ತ.. ಅದೇ ರಾತ್ರಿಯೇ ನಿಮ್ಮ ಮೊಬೈಲ್ ಫೋನ್ ಚಾರ್ಜ್ ಮಾಡಿಕೊಳ್ಳುವುದು ಕೂಡ ಸೂಕ್ತ.

  ನಾಳೆ ಮತ್ತು ನಾಡಿದ್ದು ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

  ಟಾಟಾ ಐಬಿಎಂ, ಎಸ್.ಜೆ.ಆರ್. ಪಾರ್ಕ್, ಸುಮಧುರಾ ಅಪಾರ್ಟ್‌ಮೆಂಟ್ ಸಮುಚ್ಚಯ, ನಲ್ಲೂರಹಳ್ಳಿ, ಯುಟಿಎಲ್ ಕಂಪನಿ, ವಿ.ಕೆ.ಟೆಕ್ ಪಾರ್ಕ್, ಗಾಯತ್ರಿ ಟೆಕ್ ಪಾರ್ಕ್, ಮೈಕ್ರೊ ಚಿಪ್, ವೈದೇಹಿ ಆಸ್ಪತ್ರೆ, ಸತ್ಯ ಸಾಯಿ ಬಾಬಾ ಆಸ್ಪತ್ರೆ, ಚನ್ನಮ್ಮ ಬಡಾವಣೆ, ಗ್ರಾಫೈಟ್ ಸಿಗ್ನಲ್, ಆಕಾಶ್‌ ಟೆಕ್‌ಪಾರ್ಕ್‌, ಜನತಾ ಕಾಲೋನಿ, ಕೋಡಿಪಾಳ್ಯ, ಅನ್ನಪೂರ್ಣೇಶ್ವರಿ ಬಡಾವಣೆ, ವಿದ್ಯಾಪೀಠ ರಸ್ತೆ, ಡಿ.ಬಿ. ಕಲ್ಲು, ಬಿ.ಜಿ.ಎಸ್‌. ಆಸ್ಪತ್ರೆ ರಸ್ತೆ, ಸಿದ್ಧಗಂಗಾ ಬಡಾವಣೆ, ಮಾರಣ್ಣ ಬಡಾವಣೆ, ಉಲ್ಲಾಳ ನಗರ, ಮಾರುತಿನಗರ, ಕುವೆಂಪು ಮುಖ್ಯ ರಸ್ತೆ, ಜಿ.ಕೆ. ಗಲ್ಲಿ, ಬಿಇಎಲ್‌ 1ನೇ ಮತ್ತು 2ನೇ ಹಂತ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ತುರ್ತು ನಿರ್ವಹಣಾ ಕಾಮಗಾರಿ ಇರುವ ಕಾರಣ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಸಾರ್ವಜನಿಕರಿಗೆ ಮಾಹಿತಿ ನೀಡಿದೆ.

  ಇದನ್ನೂ ಓದಿ: 6 ರಾಜ್ಯಗಳಲ್ಲಿ ಕರ್ಫ್ಯೂ ಜಾರಿ, ಚಿನ್ನದ ಬೆಲೆ ಸ್ಥಿರ, ಪೆಟ್ರೋಲ್​ ದರ ಏರಿಕೆ; ಬೆಳಗಿನ ಟಾಪ್​ ನ್ಯೂಸ್​​ಗಳು

  ಬೆಸ್ಕಾಂ ವಿರುದ್ಧ ಜನರ ಆಕ್ರೋಶ..

  ಇನ್ನು ಪದೇ ಪದೇ ಹೀಗೆ ಕಾಮಗಾರಿ ಹೆಸರಿನಲ್ಲಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗುತ್ತಿರುವುದಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.. ವರ್ಕ್ ಫ್ರಂ ಹೋಮ್ ಎಂದು ಮನೆಯಲ್ಲೇ ಮಾಡುತ್ತಿರುವವರು ಆನ್ಲೈನ್ ಕ್ಲಾಸ್ ಮೂಲಕ ಪಾಠ ಹೇಳುತ್ತಿರುವ ವಿದ್ಯಾರ್ಥಿಗಳಿಗೆ ಬೆಸ್ಕಾಂ ಪದೇಪದೇ ವಿದ್ಯುತ್ ಕಡಿತ ಮಾಡುತ್ತಿರುವುದರಿಂದ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಸಾರ್ವಜನಿಕರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
  Published by:ranjumbkgowda1 ranjumbkgowda1
  First published: