ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ್ದ ಪ್ರಕರಣ; ಸಿಸಿಬಿ ತನಿಖೆಗೆ ಆದೇಶಿಸಿದ ಆಯುಕ್ತ ಕಮಲ್ ಪಂಥ್

ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣ ಈಗ ಬೇರೆಯದ್ದೇ ಆಯಾಮ ಪಡೆಯುತ್ತಿದೆ. ಹೀಗಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್‌‌‌‌ ಈ ಪ್ರಕರಣವನ್ನು ಸಿಸಿಬಿ ತನಿಖೆಗೆ ವರ್ಗಾಯಿಸಿ ಆದೇಶಿಸಿದ್ದಾರೆ.

ಸುಟ್ಟು ಕರಕಲಾಗಿರುವ ಸತೀಶ್ ರೆಡ್ಡಿ ಕಾರು.

ಸುಟ್ಟು ಕರಕಲಾಗಿರುವ ಸತೀಶ್ ರೆಡ್ಡಿ ಕಾರು.

 • Share this:
  ಬೆಂಗಳೂರು: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ (Satish Reddy) ನಿವಾಸದ ಅಂಗಳದಲ್ಲಿ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳು ಆಗಸ್ಟ್​.11ರ ತಡರಾತ್ರಿ 1.30ರ ಸುಮಾರಿಗೆ ಬೆಂಕಿ ಹಚ್ಚಿದ್ದರು. ಕಿಡಿಗೇಡಿಗಳ ಈ ಘಟನೆಗೆ ಫಾರ್ಚೂನರ್‌ ಕಾರು ಹಾಗೂ ಮಹೀಂದ್ರಾ ಥಾರ್‌ ಜೀಪ್‌ ಬೆಂಕಿಗೆ ಆಹುತಿಯಾಗಿತ್ತು. ಸಾಮಾನ್ಯವಾಗಿ ಈ ಘಟನೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ವಿಚಾರಣೆ ವೇಳೆ ನಾಲ್ವರು ದುಷ್ಕರ್ಮಿಗಳು ಪೆಟ್ರೋಲ್‌ ಕ್ಯಾನ್‌ ತಂದು ಎರಡು ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಆಧಾರದಲ್ಲಿ ವಿಚಾರಣೆ ಆರಂಭಿಸಿದ್ದ ಪೊಲೀಸರು ಎರಡನೇ ದಿನದಲ್ಲಿ ಆರೋಪಿಗಳನ್ನು ಪತ್ತೆಹಚ್ಚಿದ್ದರು.

  ಸತೀಶ್ ರೆಡ್ಡಿ ಅವರ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪೊಲೀಸರು ಆಗಸ್ಟ್​. 13 ರಂದೇ ಮೂವರು ಆರೋಪಿಗಳನ್ನು ಬಂಧಿಸಿ ವಶಕ್ಕೆ ಪಡೆದಿದ್ದರು.  ಬೆಂಗಳೂರಿನ ಶ್ರೀಧರ್ ಗೌಡ ಮತ್ತು ನವೀನ್ ಕಾಳಪ್ಪ ಹಾಗೂ ಕೇರಳ ಮೂಲದ ಸಾಗರ್ ಥಾಪ ಬಂಧಿತ ಆರೋಪಿಗಳು. ಪೊಲೀಸರು ಬಂಧಿತರಿಂದ ಕೆಎ 51, ಎಲ್ 4411 ಬಜಾಜ್ ಪ್ಲ್ಯಾಟಿನಾ ಬೈಕ್ ಅನ್ನು ಸಹ ವಶಪಡಿಸಿಕೊಂಡಿದ್ದರು.

  ಇದನ್ನೂ ಓದಿ: Supreme Court| ಕೋಮುದ್ವೇಷವನ್ನು ಬಿತ್ತುವ ಕೆಲ ವರದಿಗಳು ದೇಶಕ್ಕೆ ಕೆಟ್ಟ ಹೆಸರು ಬರಲು ಕಾರಣವಾಗಿದೆ; ಸುಪ್ರೀಂ ಕಳವಳ

  ವಿಚಾರಣೆ ವೇಳೆ ಆರೋಪಿಗಳು, "ಶ್ರೀಮಂತರು ಶ್ರೀಮಂತರಾಗೇ ಇರ್ತಾರೆ, ಬಡವರು ಬಡವರಾಗೇ ಇರ್ತಾರೆ. ಆ ಕೋಪಕ್ಕೆ ಬೆಂಕಿ ಇಟ್ವಿ, ಶಾಸಕ ಸತೀಶ್ ರೆಡ್ಡಿ ದೊಡ್ಡ ದೊಡ್ಡ ಕಾರುಗಳಲ್ಲಿ ಓಡಾಡುತ್ತಿದ್ದರು. ದೊಡ್ಡವರಿಗೆ ಬುದ್ಧಿ ಕಲಿಸಬೇಕೆಂಬ ಉದ್ದೇಶದಿಂದ ಸತೀಶ್ ರೆಡ್ಡಿ ಮನೆ ಆವರಣಕ್ಕೆ ನುಗ್ಗಿ ಕಾರಿಗೆ ಬೆಂಕಿ ಹಚ್ಚಿದ್ದೆವು" ಎಂದು ಹೇಳಿಕೆ ನೀಡಿದ್ದರು. ಅಲ್ಲದೆ, ಈ ಆರೋಪಿಗಳ ವಿರುದ್ಧ ಈ ಹಿಂದೆ ಯಾವುದೇ ಕ್ರಿಮಿನಲ್ ಆರೋಪಗಳೂ ಇಲ್ಲ ಎಂಬುದೂ ಸಹ ವಿಚಾರಣೆ ವೇಳೆ ತಿಳಿದುಬಂದಿತ್ತು.

  ಆದರೆ, ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣ ಈಗ ಬೇರೆಯದ್ದೇ ಆಯಾಮ ಪಡೆಯುತ್ತಿದೆ. ಹೀಗಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್‌‌‌‌ ಈ ಪ್ರಕರಣವನ್ನು ಸಿಸಿಬಿ ತನಿಖೆಗೆ ವರ್ಗಾಯಿಸಿ ಆದೇಶಿಸಿದ್ದಾರೆ. ಈಗಾಗ್ಲೇ ಪ್ರಾಥಮಿಕ ತನಿಖೆ ನಡೆಸಿ ಮೂವರನ್ನ ಬಂಧಿಸಿದ್ದ ಬೊಮ್ಮನಹಳ್ಳಿ ಪೊಲೀಸರು ಆರೋಪಿಗಳನ್ನು ಜೈಲಿಗೆ ಬಿಟ್ಟು ಬಂದಿದ್ದರು. ಆದರೆ, ಸಿಸಿಬಿ ಪೊಲೀಸರು ಜೈಲಲ್ಲಿರೋ ಆರೋಪಿಗಳನ್ನು ಬಾಡಿವಾರೆಂಟ್ ಮೇಲೆ ಕಸ್ಟಡಿಗೆ ಪಡೆದು ವಿಚಾರಣೆ ಮಾಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.

  ಇದನ್ನೂ ಓದಿ: Afghanistan- ಪಂಜಶಿರ್ ಪ್ರಾಂತ್ಯದಲ್ಲಿ 13 ತಾಲಿಬಾನ್ ಉಗ್ರರನ್ನು ಸಂಹರಿಸಿದ ಪ್ರತಿರೋಧ ಪಡೆ

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: